September 17, 2024

MALNAD TV

HEART OF COFFEE CITY

ಕೊಪ್ಪ ಪಿಎಸ್ಐ ಬಸವರಾಜ್ ವಿರುದ್ಧ ಮತ್ತೆ ಮೂವರು ಮಹಿಳಾ ಪೊಲೀಸರಿಂದ ದೂರು

1 min read

 

 

ಕೊಪ್ಪ ಪಿಎಸ್ಐ ಬಸವರಾಜ್ ತಮ್ಮದೇ ಪೊಲೀಸ್ ಠಾಣೆಯ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಮತ್ತಷ್ಟು ಮಹಿಳಾ ಪೊಲೀಸರು ಇದೀಗ ತಮಗಾದ ಕಿರುಕುಳದ ಬಗ್ಗೆ ಮೇಲಾಧಿಕಾರಿಗಳ ಭೇಟಿಗೆ ಮುಂದಾಗಿದ್ದಾರೆ. ಇಂದು ಮತ್ತೆ ಮೂವರು ಮಹಿಳಾ ಪೊಲೀಸ್ ಸಿಬ್ಬಂದಿ ಕೊಪ್ಪ ಡಿವೈಎಸ್.ಪಿ ಯವರ ಬಳಿ ತೆರಳಿ ತಮ್ಮ ಅಳಲು ತೋಡಿಕೊಂಡಿದ್ದಾರೆ

 

ಮಹಿಳಾ ಪೇದೆಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಪ್ರಕರಣದಲ್ಲಿ ಕೊಪ್ಪ ಪಿಎಸ್ಐ. ಬಸವರಾಜ್ ವಿರುದ್ಧ ಗಂಭೀರ ಆರೋಪವನ್ನು ಇದೀಗ ಮತ್ತೆ ಮೂವರು ಮಹಿಳಾ ಸಿಬ್ಬಂದಿಗಳು ಕಿರುಕುಳ ಆರೋಪ ಮಾಡಿದ್ದಾರೆ. 

ಕೊಪ್ಪ ಡಿವೈಎಸ್ಪಿ ಕಚೇರಿಯಲ್ಲಿ ಸದ್ಯ ಮಹಿಳಾ ಪೇದೆಗಳಿಗೆ ಕೌನ್ಸಿಲಿಂಗ್ ನಡೆಸಲಾಗುತ್ತಿದೆ. ಮೂವರು ಮಹಿಳಾ ಸಿಬ್ಬಂದಿಗಳಿಂದ ಡಿವೈಎಸ್ಪಿ ಮಾಹಿತಿ ಕಲೆ ಹಾಕುತ್ತಿದ್ದಾರೆ. ಕೊಪ್ಪ ಡಿವೈಎಸ್ಪಿ ಹಾಗೂ ಮಹಿಳಾ ಕೌನ್ಸಿಲಿಂಗ್ ತಜ್ಞರು ವಿಚಾರಣೆ ನಡೆಸುತ್ತಿದ್ದಾರೆ. ಪಿಎಸ್ಐ ಬಸವರಾಜು ಕಿರುಕುಳದಿಂದ ಬೇಸತ್ತಿರುವ ಮಹಿಳಾ ಸಿಬ್ಬಂದಿಗಳು ಮೇಲಾಧಿಕಾರಿಗಳ ಮೊರೆ ಹೋಗಿದ್ದಾರೆ. ಕಳೆದ 2 ದಿನಗಳ ಹಿಂದೆ ಮಹಿಳಾ ಪೇದೆ ಆತ್ಮಹತ್ಯೆಗೆ ಯತ್ನಿಸಿದ ನಂತರ ಇದೀಗ ಮತ್ತೆ ಕೆಲವರು ತಮ್ಮ ನೋವು ಹೇಳಿಕೊಂಡಿದ್ದಾರೆ. ಈ ನಡುವೆ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸುವಾಗ ಸಹ ಸಿಬ್ಬಂದಿಗಳಿಂದ ರಕ್ಷಣೆ ಮಾಡಿದ್ದ ಪೇದೆ ಇಂದು ಮತ್ತೆ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಸದ್ಯ ಎಲ್ಲರ ದೂರು ಕುರಿತು ಮಾಹಿತಿ ಕಲೆ ಹಾಕುತ್ತಿರುವ ಹಿರಿಯ ಅಧಿಕಾರಿಗಳು ಸಮಸ್ಯೆ ಆಲಿಸುತ್ತಿದ್ದಾರೆ. ಈ ನಡುವೆ ಮೇಲಾಧಿಕಾರಿಗಳ ಸೂಚನೆ ಮೇರೆಗೆ ಡೆತ್ ನೋಟ್ ನಾಶಪಡಿಸಿರುವ ಆರೋಪ ಕೂಡಾ ಕೇಳಿ ಬಂದಿದೆ. ಪಿಎಸ್ಐ ಬಸವರಾಜ್ ಈ ಹಿಂದೆ ಕೆಲಸ ಮಾಡಿದ್ದ ಹಲವು ಠಾಣೆಗಳಲ್ಲೂ ಕೆಲ ಮಹಿಳಾ ಸಿಬ್ಬಂದಿಗಳಿಗೆ ಕಿರುಕುಳ ಕೊಟ್ಟ ಆರೋಪವಿತ್ತು ಎನ್ನಲಾಗಿದೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!