🏠 Home ದೇಶ ಜಿಲ್ಲಾ ಸುದ್ದಿ ತಾಲ್ಲೂಕು ರಾಜ್ಯ ರಾಜಕೀಯ  ಆರೋಗ್ಯ  ಕ್ರೈಮ್  ಪ್ರವಾಸ ಶಿಕ್ಷಣ

 

Breaking News
---Advertisement---
 

ಎಂಎಲ್‌ಸಿ ಸಿ.ಟಿ. ರವಿ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಅವಹೇಳನಕಾರಿ ಪೋಸ್ಟ್ — ಸಿಇಎನ್ ಠಾಣೆಗೆ ದೂರು ಸಲ್ಲಿಕೆ

---Advertisement---

 

ವಿಧಾನ ಪರಿಷತ್ ಸದಸ್ಯ ಹಾಗೂ ಬಿಜೆಪಿ ನಾಯಕ ಸಿ.ಟಿ. ರವಿ ಅವರ ತೇಜೋವಧೆ ಮಾಡುವ ಉದ್ದೇಶದಿಂದ ಸಾಮಾಜಿಕ ಜಾಲತಾಣದಲ್ಲಿ ಮಾನಹಾನಿಕರ ಪೋಸ್ಟ್ ಹಂಚಿಕೊಳ್ಳಲಾಗಿದೆ ಎಂದು ಆರೋಪಿಸಿ ಚಿಕ್ಕಮಗಳೂರಿನ ಸಿಇಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಸವನಹಳ್ಳಿ ನಿವಾಸಿ ಚೇತನ್ ಎಂಬುವರು ಈ ಕುರಿತು ದೂರು ನೀಡಿದ್ದು, ಜುಲೈ 25 ರಂದು ತಾವು ಇನ್‌ಸ್ಟಾಗ್ರಾಮ್ ಬಳಸುತ್ತಿದ್ದಾಗ ‘lyc.Karnataka’ ಎಂಬ ಖಾತೆಯಿಂದ ಪ್ರಕಟವಾದ ಪೋಸ್ಟ್ ಒಂದನ್ನು ಗಮನಿಸಿರುವುದಾಗಿ ತಿಳಿಸಿದ್ದಾರೆ. ಆ ಪೋಸ್ಟ್‌ನಲ್ಲಿ ಸಿ.ಟಿ. ರವಿ ಅವರ ಭಾವಚಿತ್ರವನ್ನು ದುರುದ್ದೇಶಪೂರ್ವಕವಾಗಿ ಮಾರ್ಫ್ ಮಾಡಿ, “ಒಂದು ಸಿಂಪಲ್ ಪ್ರಶ್ನೆ? OT ಕುಡಿಯೋ ಮೂದೇವಿಗೂ ನೀಟ್ ಗೂ ಏನ್ ಸಂಬಂಧ? OT ರವಿ” ಎಂದು ಆಕ್ಷೇಪಾರ್ಹ ಹಾಗೂ ಪ್ರಚೋದನಕಾರಿ ಸಾಲುಗಳನ್ನು ಬರೆಯಲಾಗಿದೆ ಎಂದು ದೂರಿನಲ್ಲಿ ವಿವರಿಸಲಾಗಿದೆ.

ಈ ರೀತಿಯ ಪೋಸ್ಟ್‌ಗಳು ಸಾರ್ವಜನಿಕವಾಗಿ ಶಾಂತಿ ಕದಡುವ ಮತ್ತು ವ್ಯಕ್ತಿತ್ವಕ್ಕೆ ಧಕ್ಕೆ ತರುವ ಯತ್ನವಾಗಿದೆ ಎಂದು ತಿಳಿಸಿರುವ ದೂರುದಾರರು, ಸದರಿ ಇನ್‌ಸ್ಟಾಗ್ರಾಮ್ ಖಾತೆಯ ವಿರುದ್ಧ ತಕ್ಷಣವೇ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಆ ಪೋಸ್ಟ್ ಅನ್ನು ಕೂಡಲೇ ಜಾಲತಾಣದಿಂದ ತೆರವುಗೊಳಿಸಬೇಕು ಎಂದು ಪೊಲೀಸರಿಗೆ ಮನವಿ ಮಾಡಿದ್ದಾರೆ.

Join WhatsApp

Join Now

Join Telegram

Join Now

Leave a Comment