🏠 Home ದೇಶ ಜಿಲ್ಲಾ ಸುದ್ದಿ ತಾಲ್ಲೂಕು ರಾಜ್ಯ ರಾಜಕೀಯ  ಆರೋಗ್ಯ  ಕ್ರೈಮ್  ಪ್ರವಾಸ ಶಿಕ್ಷಣ

 

Breaking News
---Advertisement---
 

ಇನ್ನೋವಾ ಕಾರಿನಲ್ಲಿ ಗೋವುಗಳ ಸಾಗಾಟ: ಪೊಲೀಸರನ್ನು ನೋಡಿ ವಾಹನ ಬಿಟ್ಟು ಓಡಿದ ಕಳ್ಳರು

---Advertisement---

 

 

ಕೊಪ್ಪ: ಗಡಿಕಲ್ ಚೆಕ್ ಪೋಸ್ಟ್ ಬಳಿ ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ಇನ್ನೋವಾ ಕಾರನ್ನು ಪೊಲೀಸರು ಸಿನಿಮೀಯ ಶೈಲಿಯಲ್ಲಿ ಬೆನ್ನಟ್ಟಿ ಜಪ್ತಿ ಮಾಡಿದ್ದಾರೆ. ಕಸಾಯಿಖಾನೆಗೆ ಸಾಗಿಸಲು ಕಾರಿನ ನಂಬರ್ ಪ್ಲೇಟ್ ತೆಗೆದು ಎರಡು ಗೋವುಗಳನ್ನು ಹಿಂಸಾತ್ಮಕವಾಗಿ ತುಂಬಿದ್ದ ಖದೀಮರು, ಪೊಲೀಸರು ಬೆನ್ನಟ್ಟುತ್ತಿದ್ದಂತೆ ವಾಹನವನ್ನು ರಸ್ತೆಯಲ್ಲೇ ಬಿಟ್ಟು ಖದೀಮರು ಕತ್ತಲಲ್ಲಿ ಪರಾರಿಯಾಗಿದ್ದಾರೆ.

ಸಕಾಲದಲ್ಲಿ ಕಾರ್ಯಾಚರಣೆ ನಡೆಸಿದ ಕೊಪ್ಪ ಪೊಲೀಸರು ಕಾರಿನಲ್ಲಿದ್ದ ಮೂಕಪ್ರಾಣಿಗಳನ್ನು ಸುರಕ್ಷಿತವಾಗಿ ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಜಪ್ತಿಯಾಗಿರುವ ವಾಹನದ ಮೂಲಕ ಆರೋಪಿಗಳ ಪತ್ತೆಗೆ ಜಾಲ ಬೀಸಿರುವ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಕರ್ತವ್ಯ ಪ್ರಜ್ಞೆ ಮೆರೆದು ಗೋವುಗಳ ಪ್ರಾಣ ಉಳಿಸಿದ ಪೊಲೀಸ್ ತಂಡದ ಮಿಂಚಿನ ಕಾರ್ಯಾಚರಣೆಗೆ ಸಾರ್ವಜನಿಕರಿಂದ ವ್ಯಾಪಕ ಶ್ಲಾಘನೆ ವ್ಯಕ್ತವಾಗುತ್ತಿದೆ. ಈ ಭಾಗದಲ್ಲಿ ಕಳೆದ ಹಲವು ದಿನಗಳಿಂದ ಅಕ್ರಮವಾಗಿ ಗೋವುಗಳನ್ನು ಕಳ್ಳತನ ಮಾಡುವ ಜಾಲ ಸಕ್ರಿಯವಾಗಿದ್ದು ಪೊಲೀಸರು ರಾತ್ರಿ ವೇಳೆ ಹೆಚ್ಚಿನ ಗಸ್ತು ತಿರುಗಿ ಅಕ್ರಮ ಚಟುವಟಿಕೆಗಳಿಗೆ ಬ್ರೇಕ್ ಹಾಕಬೇಕೆಂಬ ಆಗ್ರಹ ಕೇಳಿ ಬಂದಿದೆ

Join WhatsApp

Join Now

Join Telegram

Join Now