September 8, 2024

MALNAD TV

HEART OF COFFEE CITY

ಡೆಂಗ್ಯೂ ಬರಬಹುದು ನಂಗು-ನಿಂಗು ಡೆಂಗ್ಯೂ ಡೆಂಗ್ಯೂ : ವೈರಲ್ ಆಗುತ್ತಿದೆ ರೋಗ

1 min read

 

 

ಇದೀಗ ಎಲ್ಲಿ ಕೇಳಿದರೂ ಡೆಂಗ್ಯೂದೇ ಸುದ್ದಿ, ಕಳೆದ ಒಂದೂವರೆ ತಿಂಗಳಿಂದ ದಿನೇ ದಿನೇ ಹೆಚ್ಚುತ್ತಲೇ ಇದ್ದ ಡೆಂಗ್ಯೂ ಪ್ರಕರಣಗಳು ಇದೀಗ ವಿಪರೀತಗೊಳ್ಳುತ್ತಿವೆ. ಮಳೆಗಾಲದ ಹಿನ್ನೆಲೆಯಲ್ಲಿ ತೀವ್ರವಾಗುತ್ತಿರುವ ರೋಗ ಜಿಲ್ಲೆಯಲ್ಲಿ 350 ರ ಗಡಿ ದಾಟಿದ್ದು, ಸರ್ಕಾರಿ ಸೇರಿದಂತೆ ಖಾಸಗಿ ಆಸ್ಪತ್ರೆಗಳಲ್ಲಿ ಡೆಂಗ್ಯೂ ರೋಗಿಗಳೇ ತುಂಬಿಕೊಂಡಿದ್ದು ಆರೋಗ್ಯ ಇಲಾಖೆಯ ನಿಯಂತ್ರಣಕ್ಕೆ ಸಿಗದೆ ಕಾಯಿಲೆಯು ತಾಂಡವ ಆಡುತ್ತಿದ್ದು, ಇದೀಗ ಡೆಂಗ್ಯೂಗೆ ರಾಜಕೀಯ ಲೇಪನ ಅಂಟಿಕೊಂಡಿದೆ. 

 

ಕಳೆದ ಒಂದೂವರೆ ತಿಂಗಳಿನಿಂದ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಕಾಣಿಸಿಕೊಂಡಿದ್ದ ಡೆಂಗ್ಯೂ ಇದೀಗ ಚಿಕ್ಕಮಗಳೂರು ನಗರ ಸೇರಿದಂತೆ ಬಹುತೇಕ ತಾಲೂಕುಗಳಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿದೆ. ಸದ್ಯ ಜಿಲ್ಲೆಯಲ್ಲಿ 344 ಪಾಸಿಟಿವ್ ಕೇಸ್ ಗಳು ದಾಖಲಾಗಿದ್ದು ಸಾವಿರಾರು ಪ್ರಕರಣಗಳನ್ನು ಡೆಂಗ್ಯೂ ಪರೀಕ್ಷೆಗೆ ಕಳುಹಿಸಲಾಗಿದೆ. ನಿಯಂತ್ರಣಕ್ಕೆ ಸಿಗದ ರೀತಿಯಲ್ಲಿ ಪ್ರಕರಣಗಳ ಸಂಖ್ಯೆ ಏರುತ್ತಿದ್ದು ಜಿಲ್ಲಾಡಳಿತಕ್ಕೆ ತಲೆಬಿಸಿ ತಂದೊಡ್ಡಿದೆ. ಈ ನಡುವೆ ಆಸ್ಪತ್ರೆಗಳಲ್ಲಿ ಚಿಕಿತ್ಸೆಗಾಗಿ ಪರದಾಟ ಪಡುವಂತಾಗಿದೆ. ಜಿಲ್ಲಾಸ್ಪತ್ರೆಯಲ್ಲಿ ಡೆಂಗ್ಯೂ ರೋಗಿಗಳು ತುಂಬಿ ತುಳುಕುತ್ತಿದ್ದು ಉತ್ತಮ ಚಿಕಿತ್ಸೆ ಸಿಗುತ್ತಿಲ್ಲ ಎಂಬ ಆರೋಪ ಕೇಳಿ ಬರುತ್ತಿದೆ. ಇನ್ನು ಖಾಸಗಿ ಆಸ್ಪತ್ರೆಗಳಲ್ಲಿ ಸಹಾ ಡೆಂಗ್ಯೂ ಪ್ರಕರಣಗಳೇ ಹೆಚ್ಚು ದಾಖಲಾಗಿದ್ದು ಎಲ್ಲೆಲ್ಲೂ ಡೆಂಗ್ಯೂ ಹಾವಳಿ ಎಬ್ಬಿಸಿದೆ ಸಾರ್ವಜನಿಕರಲ್ಲಿ ಜಾಗೃತಿ ಮೂಡದಿರುವುದು ರೋಗದ ಹೆಚ್ಚಳಕ್ಕೆ ಕಾರಣ ಎನ್ನಲಾಗುತ್ತಿದ್ದು ಸೊಳ್ಳೆಗಳ ನಿಯಂತ್ರಣ ಸಾಧ್ಯವಾಗ ದಿರುವುದು ಇಲಾಖೆಗಳ ಕೆಲಸ ಮತ್ತಷ್ಟು ಹೆಚ್ಚಿಸುತ್ತಿದೆ. ಆರೋಗ್ಯ ಇಲಾಖೆ ವೈಫಲ್ಯ ನಿರ್ಲಕ್ಷ ಹಾಗೂ ಬೇಜವಾಬ್ದಾರಿ ಅಧಿಕಾರಿಗಳ ಉಡಾಫೆ ಕೂಡಾ ಸಾರ್ವಜನಿಕರನ್ನು ರೊಚ್ಚಿಗೆಬ್ಬಿಸುತ್ತಿದೆ. ರೋಗ ಉಲ್ಬಣ ವಾಗುತ್ತಿದ್ದರೂ ಗಂಭೀರವಾಗಿ ಪರಿಗಣಿಸದ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ ಜಾರ್ಜ್ ಕಾಣಿಯಾಗಿದ್ದಾರೆ ಎಂದು ಪೋಸ್ಟರ್ ಹರಿಬಿಡುವ ಮೂಲಕ ಬಿಜೆಪಿ ಕಾರ್ಯಕರ್ತರು ಆಕ್ರೋಶ ಹೊರ ಹಾಕಿದ್ದಾರೆ. ಮನೆ ಮನೆಗೆ ತೆರಳಿ ಲಾರ್ವಾ ಪತ್ತೆ ಹಚ್ಚಿ ನಾಶಪಡಿಸುವ ಕೆಲಸ ಶೀಘ್ರವಾಗಿ ಆಗಬೇಕಿದೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!