ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ಎಸ್.ಕೆ. ಬಾರ್ಡರ್ನಲ್ಲಿ ರೆನಾಲ್ಟ್ ಕಂಪನಿಗೆ ಸೇರಿದ ಡಸ್ಟರ್ ಕಾರೊಂದು ರಸ್ತೆ ಮಧ್ಯೆಯೇ ಬೆಂಕಿಗಾಹುತಿಯಾಗಿದೆ.
ಕುಂದಾಪುರದಿಂದ ಶೃಂಗೇರಿ ದೇವಸ್ಥಾನಕ್ಕೆ ದಂಪತಿ ಹಾಗೂ ಅವರ ಮಗ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಎಚ್ಚೆತ್ತ ಮೂವರು ಕಾರಿನಿಂದ ಕೆಳಗಿಳಿದಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಬೆಂಕಿಯ ತೀವ್ರತೆಗೆ ಕಾರು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ.
ಘಟನೆಗೆ ಸಂಬಂಧಿಸಿದಂತೆ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




