🏠 Home ದೇಶ ಜಿಲ್ಲಾ ಸುದ್ದಿ ತಾಲ್ಲೂಕು ರಾಜ್ಯ ರಾಜಕೀಯ  ಆರೋಗ್ಯ  ಕ್ರೈಮ್  ಪ್ರವಾಸ ಶಿಕ್ಷಣ

 

Breaking News
---Advertisement---
 

ಜೇನುನೊಣಗಳ ದಾಳಿಗೆ ವೃದ್ಧ ಕಾರ್ಮಿಕ ಬಲಿ!

---Advertisement---

 

ಚಿಕ್ಕಮಗಳೂರು: ಹೊಲದಲ್ಲಿ ಬಾಳೆ ಗಿಡಗಳನ್ನು ನೆಡುವ ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ಜೇನುನೊಣಗಳು ದಾಳಿ ನಡೆಸಿದ ಪರಿಣಾಮ ವೃದ್ಧ ಕಾರ್ಮಿಕರೊಬ್ಬರು ಮೃತಪಟ್ಟಿರುವ ದಾರುಣ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕೋರನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಕೋರನಹಳ್ಳಿ ಗ್ರಾಮದ ಶಿವಪ್ಪ (58) ಮೃತ ದುರ್ದೈವಿ. ಹೊಲದಲ್ಲಿ ಬಾಳೆ ಗಿಡ ನೆಡುವ ಕೆಲಸದಲ್ಲಿ ತೊಡಗಿದ್ದ ವೇಳೆ ಏಕಾಏಕಿ ನೂರಾರು ಜೇನುನೊಣಗಳು ಕಾರ್ಮಿಕರ ಮೇಲೆ ದಾಳಿ ನಡೆಸಿವೆ. ಈ ವೇಳೆ ಇಬ್ಬರು ಕಾರ್ಮಿಕರು ಜೇನುನೊಣಗಳ ದಾಳಿಯಿಂದ ತಪ್ಪಿಸಿಕೊಂಡಿದ್ದಾರೆ.

ಆದರೆ ಶಿವಪ್ಪ ಅವರು ಜೇನುನೊಣಗಳ ದಾಳಿಗೆ ಸಿಲುಕಿದ್ದು, ಅವರ ಮುಖ, ಕೈ, ಕಾಲು ಸೇರಿದಂತೆ ದೇಹದ ವಿವಿಧ ಭಾಗಗಳಿಗೆ ನೂರಾರು ಜೇನುನೊಣಗಳು ಕಚ್ಚಿವೆ. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ತಕ್ಷಣ ತರೀಕೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.

ಆದರೆ ಚಿಕಿತ್ಸೆ ಫಲಕಾರಿಯಾಗದೆ ಶಿವಪ್ಪ ಮೃತಪಟ್ಟಿದ್ದಾರೆ. ಈ ಸಂಬಂಧ ತರೀಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

 

 

 

Join WhatsApp

Join Now

Join Telegram

Join Now