🏠 Home ದೇಶ ಜಿಲ್ಲಾ ಸುದ್ದಿ ತಾಲ್ಲೂಕು ರಾಜ್ಯ ರಾಜಕೀಯ  ಆರೋಗ್ಯ  ಕ್ರೈಮ್  ಪ್ರವಾಸ ಶಿಕ್ಷಣ

 

Breaking News
---Advertisement---
 

ಎದೆ ಸೀಳಿದ್ರೂ ಮೂರು ಅಕ್ಷರ ಇಲ್ಲ ಹೇಳಿಕೆ : ಸಿ.ಟಿ. ರವಿ ವಿರುದ್ಧ ಎಸ್‌ಡಿಪಿಐ ದೂರು

---Advertisement---

 

 

 

ಚಿಕ್ಕಮಗಳೂರಿನ ಆಜಾದ್ ಪಾರ್ಕ್ ವೃತ್ತದಲ್ಲಿ ‘ಯೂತ್ ಫಾರ್ ನೇಷನ್’ ಏರ್ಪಡಿಸಿದ್ದ ಪ್ರತಿಭಟನಾ ಸಭೆಯಲ್ಲಿ ಬಿಜೆಪಿ ನಾಯಕ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ನೀಡಿದ್ದಾರೆನ್ನಲಾದ ಹೇಳಿಕೆ ಈಗ ತೀವ್ರ ವಿವಾದಕ್ಕೆ ಕಾರಣವಾಗಿದೆ. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಸಂಸತ್ ಭವನದ ಎದುರಿನ ಪ್ರತಿಭಟನೆಗಳ ವಿರುದ್ಧ ವಾಗ್ದಾಳಿ ನಡೆಸುವಾಗ, ಮುಸ್ಲಿಂ ಸಮುದಾಯವನ್ನು ಲಕ್ಷ್ಯವಾಗಿಸಿ “ಎದೆ ಸೀಳಿದರೆ ಮೂರು ಅಕ್ಷರ ಬಾರದವರು ನೀಟ್ ಪರೀಕ್ಷೆ ವಿರುದ್ಧ ಹೋರಾಡುತ್ತಿದ್ದಾರೆ” ಎಂದು ಲೇವಡಿ ಮಾಡಿದ್ದರೆನ್ನಲಾದ ಮಾತುಗಳು ಆಕ್ರೋಶಕ್ಕೆ ನಾಂದಿ ಹಾಡಿವೆ.

​ಈ ಹೇಳಿಕೆಯು ಮುಸ್ಲಿಂ ಸಮುದಾಯದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದು, ಸಮಾಜದಲ್ಲಿ ಶಾಂತಿ ಕದಡುವ ಯತ್ನವಾಗಿದೆ ಎಂದು ಆರೋಪಿಸಿ ಎಸ್‌ಡಿಪಿಐ ಸಂಘಟನೆ ರಂಗಕ್ಕಿಳಿದಿದೆ. ಎಸ್‌ಡಿಪಿಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಿಜ್ವಾನ್ ಹುಸೇನ್ ಅವರು ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಗೆ ತೆರಳಿ ಸಿ.ಟಿ. ರವಿ ವಿರುದ್ಧ ಅಧಿಕೃತ ದೂರು ದಾಖಲಿಸಿದ್ದು, ದ್ವೇಷಪೂರಿತ ಭಾಷಣದ ವಿರುದ್ಧ ತಕ್ಷಣವೇ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ

Join WhatsApp

Join Now

Join Telegram

Join Now