🏠 Home ದೇಶ ಜಿಲ್ಲಾ ಸುದ್ದಿ ತಾಲ್ಲೂಕು ರಾಜ್ಯ ರಾಜಕೀಯ  ಆರೋಗ್ಯ  ಕ್ರೈಮ್  ಪ್ರವಾಸ ಶಿಕ್ಷಣ

 

Breaking News
---Advertisement---
 

ಬಿಸಿಯೂಟದ ಕೋಣೆಯಲ್ಲಿ ಬೆಂಕಿ ಅವಾಂತರ: ಶಿಕ್ಷಕರು ಹಾಗೂ ಸಿಬ್ಬಂದಿಗಳ ಸಮಯಪ್ರಜ್ಞೆಗೆ ಶ್ಲಾಘನೆ

---Advertisement---

 

 

ಮೂಡಿಗೆರೆ ತಾಲೂಕಿನ ಹೆಗ್ಗುಡ್ಲು ಸರ್ಕಾರಿ ಶಾಲೆಯಲ್ಲಿ ಇಂದು ಬಿಸಿಯೂಟದ ಕೋಣೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಶಿಕ್ಷಕರು ಹಾಗೂ ಸಿಬ್ಬಂದಿಗಳ ಸಮಯಪ್ರಜ್ಞೆಯಿಂದ ಭಾರಿ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ. ಶಾಲೆಗೆ ಹಾಲು ಕಾಯಿಸುವ ಸಂದರ್ಭದಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಆವರಿಸಿದ್ದು, ಅಡುಗೆ ಪಾತ್ರೆ ಹಾಗೂ ಅಕ್ಕಪಕ್ಕದ ವಸ್ತುಗಳಿಗೆ ತಗುಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ತಕ್ಷಣವೇ ಕಾರ್ಯಪ್ರವೃತ್ತರಾದ ಶಾಲಾ ಸಿಬ್ಬಂದಿಗಳು ಒದ್ದೆಯಾದ ಗೋಣಿಚೀಲಗಳನ್ನು ಸಿಲಿಂಡರ್ ಮೇಲೆ ಹಾಕಿ ಬೆಂಕಿ ನಂದಿಸಲು ಯಶಸ್ವಿಯಾಗಿದ್ದಾರೆ. ಈ ಘಟನೆಯ ವೇಳೆ ಶಾಲೆಯಲ್ಲಿದ್ದ 33 ವಿದ್ಯಾರ್ಥಿಗಳು ಯಾವುದೇ ಅಪಾಯವಿಲ್ಲದೆ ಸುರಕ್ಷಿತವಾಗಿ ಪಾರಾಗಿದ್ದಾರೆ. ಮಕ್ಕಳ ರಕ್ಷಣೆಗೆ ಧಾವಿಸಿದ ಪಕ್ಕದ ತೋಟದ ಕೂಲಿ ಕಾರ್ಮಿಕರೊಬ್ಬರು ದಟ್ಟವಾದ ಹೊಗೆ ಮತ್ತು ವಿಷಾನಿಲ ಸೇವನೆಯಿಂದ ಅಸ್ವಸ್ಥರಾಗಿದ್ದು, ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳೀಯರು ಹಾಗೂ ಶಾಲಾ ಸಿಬ್ಬಂದಿಗಳ ಜಾಗೃತೆಯಿಂದಾಗಿ ಒಂದು ದೊಡ್ಡ ದುರಂತ ತಡೆದಂತಾಗಿದೆ.

Join WhatsApp

Join Now

Join Telegram

Join Now