मौसम क्रिकेट ऑपरेशन सिंदूर क्रिकेट स्पोर्ट्स बॉलीवुड जॉब - एजुकेशन बिजनेस लाइफस्टाइल देश विदेश राशिफल आध्यात्मिक अन्य
---Advertisement---

ಕಾಫಿನಾಡಲ್ಲಿ ಮುಂದುವರಿದ ಕಾಡಾನೆ ದಾಳಿ ಹಸು ಬಲಿ

---Advertisement---

ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಾಡಾನೆಗಳ ಹಾವಳಿ ಮುಂದುವರಿದಿದ್ದು, ಆಲ್ದೂರು ಸಮೀಪದ ಮಾಣಿಮಕ್ಕಿ ಗ್ರಾಮದಲ್ಲಿ ಹಸುವೊಂದು ಆನೆ ದಾಳಿಗೆ ಬಲಿಯಾಗಿದೆ. ಗ್ರಾಮದ ನಿವಾಸಿ ಮಧು ಎಂಬುವರಿಗೆ ಸೇರಿದ ಹಾಲು ನೀಡುವ ಹಸು ಅರಣ್ಯದಂಚಿನಲ್ಲಿ ಮೇಯುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಆನೆಯು ಹಸುವಿನ ಹೊಟ್ಟೆಯ ಭಾಗವನ್ನು ತುಳಿದ ಪರಿಣಾಮ ಹಸು ಸ್ಥಳದಲ್ಲೇ ಸಾವನ್ನಪ್ಪಿದ್ದು, ಕಾಫಿ ತೋಟದ ಕೆಲಸದ ಜೊತೆಗೆ ಹೈನುಗಾರಿಕೆಯನ್ನೇ ನಂಬಿಕೊಂಡಿದ್ದ ಮಾಲೀಕ ಮಧು ಅವರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ.

​ಈ ಘಟನೆಯಿಂದಾಗಿ ಸುತ್ತಮುತ್ತಲಿನ ಗ್ರಾಮಸ್ಥರು ಹಾಗೂ ತೋಟಗಳಿಗೆ ಕೆಲಸಕ್ಕೆ ಹೋಗುವ ಕೂಲಿ ಕಾರ್ಮಿಕರಲ್ಲಿ ತೀವ್ರ ಭೀತಿ ಆವರಿಸಿದೆ. ಸ್ಥಳಕ್ಕೆ ಭೇಟಿ ನೀಡಿದ ಅರಣ್ಯ ಇಲಾಖೆ ಅಧಿಕಾರಿಗಳು ಪರಿಸ್ಥಿತಿಯನ್ನು ಪರಿಶೀಲಿಸಿ, ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದ್ದಾರೆ. ಪಶು ವೈದ್ಯರು ಹಸುವಿನ ಮರಣೋತ್ತರ ಪರೀಕ್ಷೆ ನಡೆಸಿದ್ದು, ನಿರಂತರವಾಗಿ ನಡೆಯುತ್ತಿರುವ ಆನೆ ದಾಳಿಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವಂತೆ ಮಲೆನಾಡಿನ ಜನರು ಸರ್ಕಾರ ಮತ್ತು ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದಾರೆ.

Join WhatsApp

Join Now

Join Telegram

Join Now

Leave a Comment