🏠 Home ದೇಶ ಜಿಲ್ಲಾ ಸುದ್ದಿ ತಾಲ್ಲೂಕು ರಾಜ್ಯ ರಾಜಕೀಯ  ಆರೋಗ್ಯ  ಕ್ರೈಮ್  ಪ್ರವಾಸ ಶಿಕ್ಷಣ

 

Breaking News
---Advertisement---
 

ಎನ್.ಆರ್.ಪುರ ತಾಲೂಕು ಬಂದ್‌ಗೆ ಉತ್ತಮ ಪ್ರತಿಕ್ರಿಯೆ: ಕಾಡಾನೆ ದಾಳಿಗೆ ರೈತ ಬಲಿ, ಶಾಶ್ವತ ಪರಿಹಾರಕ್ಕೆ ಜನರ ಆಗ್ರಹ

---Advertisement---

 

ಚಿಕ್ಕಮಗಳೂರು: ಜಿಲ್ಲೆಯ ಎನ್.ಆರ್.ಪುರ ತಾಲೂಕಿನಲ್ಲಿ ಕಾಡಾನೆ ದಾಳಿಗೆ ಕೃಷಿಕ ಬಲಿಯಾದ ಘಟನೆ ಖಂಡಿಸಿ ರೈತ ಸಂಘಟನೆಗಳು ಕರೆ ನೀಡಿದ್ದ ತಾಲೂಕು ಬಂದ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಎನ್.ಆರ್.ಪುರ ಹಾಗೂ ಬಾಳೆಹೊನ್ನೂರು ಭಾಗಗಳಲ್ಲಿ ಬಂದ್‌ಗೆ ಸ್ಥಳೀಯರು ಬೆಂಬಲ ಸೂಚಿಸಿದ್ದು, ನಿರಂತರ ಕಾಡಾನೆಗಳ ಹಾವಳಿಯಿಂದ ಕಂಗೆಟ್ಟಿರುವ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎನ್.ಆರ್.ಪುರ ತಾಲೂಕಿನ ಹೆನ್ನಂಗಿ ಗ್ರಾಮದಲ್ಲಿ ಕಾಡಾನೆ ದಾಳಿಗೆ ಕೃಷಿಕ ಕೃಷ್ಣಮೂರ್ತಿ ಮೃತಪಟ್ಟಿರುವುದು ಸ್ಥಳೀಯರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮೃತರು ಹೆನ್ನಂಗಿ ಗ್ರಾಮದ ಮೂಲದವರಾಗಿದ್ದು, ಕಾಡಾನೆಗಳ ದಾಳಿಯಿಂದ ಮತ್ತೊಂದು ಜೀವ ಬಲಿಯಾಗಿದೆ.

2025ರಿಂದ ಈವರೆಗೆ ಕಾಡಾನೆ ದಾಳಿಗೆ 13 ಮಂದಿ ಮೃತಪಟ್ಟಿದ್ದಾರೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. ಪದೇಪದೇ ಆನೆ ದಾಳಿಗಳು ನಡೆಯುತ್ತಿದ್ದರೂ ಶಾಶ್ವತ ಪರಿಹಾರ ಕಲ್ಪಿಸುವಲ್ಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ವಿಫಲರಾಗಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿದ್ದ ಶಾಸಕ ಟಿ.ಡಿ.ರಾಜೇಗೌಡ ಅವರ ಮುಂದೆ ಸ್ಥಳೀಯರು ತಮ್ಮ ಅಳಲು ತೋಡಿಕೊಂಡಿದ್ದಾರೆ. ಪ್ರತಿ ಬಾರಿ ಸಾವು ಸಂಭವಿಸಿದಾಗಲೂ ಭರವಸೆ ಹಾಗೂ ಸಾಂತ್ವನದ ಮಾತುಗಳನ್ನು ಕೇಳುವುದಷ್ಟೇ ಆಗುತ್ತಿದೆ. 13 ಜೀವಗಳು ಬಲಿಯಾದರೂ ಸಮಸ್ಯೆಗೆ ಶಾಶ್ವತ ಪರಿಹಾರ ಸಿಕ್ಕಿಲ್ಲ ಎಂದು ಜನರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದೇ ವೇಳೆ ಮೃತದೇಹವನ್ನು ಸ್ಥಳದಿಂದ ಕೊಂಡೊಯ್ಯಲು ಸ್ಥಳೀಯರು ತಡೆಹಿಡಿದು, ಕಾಡಾನೆಗಳ ಹಾವಳಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಿದ್ದಾರೆ. ಕಾಡಾನೆಗಳು ಅರಣ್ಯದಿಂದ ನಾಡಿಗೆ ಬಾರದಂತೆ ತಡೆಯಲು ಶಾಶ್ವತ ಕ್ರಮ ಕೈಗೊಳ್ಳಬೇಕು ಹಾಗೂ ಕೃಷಿಕರು ಮತ್ತು ಗ್ರಾಮಸ್ಥರ ಜೀವ ರಕ್ಷಣೆಗೆ ಸರ್ಕಾರ ತಕ್ಷಣ ಮುಂದಾಗಬೇಕು ಎಂದು ಆಗ್ರಹಿಸಿದ್ದಾರೆ.

ಕಾಡಾನೆಗಳ ನಿರಂತರ ದಾಳಿಯಿಂದ ರೈತರು, ಕೃಷಿಕರು ಹಾಗೂ ಗ್ರಾಮಸ್ಥರು ಆತಂಕದಲ್ಲೇ ಬದುಕುವಂತಾಗಿದೆ. ಮತ್ತಷ್ಟು ಜೀವಹಾನಿಯಾಗುವ ಮುನ್ನ ಸರ್ಕಾರ ಎಚ್ಚೆತ್ತುಕ