🏠 Home ದೇಶ ಜಿಲ್ಲಾ ಸುದ್ದಿ ತಾಲ್ಲೂಕು ರಾಜ್ಯ ರಾಜಕೀಯ  ಆರೋಗ್ಯ  ಕ್ರೈಮ್  ಪ್ರವಾಸ ಶಿಕ್ಷಣ

 

Breaking News
---Advertisement---
 

ಚಿಕ್ಕಮಗಳೂರಿನಲ್ಲಿ ಮಳೆ ಅಬ್ಬರ: ಬಯಲುಸೀಮೆ ಭಾಗದಲ್ಲಿ ಧಾರಾಕಾರ ವರ್ಷಧಾರೆ!

---Advertisement---

HIGHLIGHTS

 

 

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಅಬ್ಬರ ಜೋರಾಗಿದೆ. ಕಳೆದೊಂದು ಗಂಟೆಯಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಜಿಲ್ಲೆಯ ಹಲವು ಭಾಗಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಮಲೆನಾಡಿಗಿಂತಲೂ ಬಯಲುಸೀಮೆ ಭಾಗದಲ್ಲಿ ಮಳೆಯ ಆರ್ಭಟ ಹೆಚ್ಚಾಗಿದೆ.

ಚಿಕ್ಕಮಗಳೂರು ನಗರ ಸೇರಿದಂತೆ ತರೀಕೆರೆ, ಕಡೂರು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ಚಿಕ್ಕಮಗಳೂರು ತಾಲೂಕಿನ ಬೆಳವಾಡಿ, ಕಳಸಾಪುರ ಸೇರಿದಂತೆ ಬಯಲುಸೀಮೆ ಪ್ರದೇಶಗಳಲ್ಲೂ ಧಾರಾಕಾರ ಮಳೆ ಸುರಿಯುತ್ತಿದೆ. ಜಿಲ್ಲೆಯ ಮಲೆನಾಡಿನ ಆಯ್ದ ಭಾಗಗಳಲ್ಲಿಯೂ ಮಳೆ ಮುಂದುವರಿದಿದ್ದು, ನಿನ್ನೆಯಿಂದ ಕೆಲವು ಪ್ರದೇಶಗಳಲ್ಲಿ ನಿರಂತರವಾಗಿ ವರ್ಷಧಾರೆಯಾಗುತ್ತಿದೆ.

ಮಲೆನಾಡಿನಲ್ಲಿ ಮಳೆಗಾಗಿ ಆಕಾಶದತ್ತ ಮುಖಮಾಡಿದ್ದ ರೈತರಿಗೆ ಇದೀಗ ಮಳೆಯ ನಿರೀಕ್ಷೆ ಹೆಚ್ಚಾಗಿದೆ. ಈ ಬಾರಿ ಜಿಲ್ಲೆಯಲ್ಲಿ ವಾಡಿಕೆಯ ಮಳೆಯ ಅರ್ಧದಷ್ಟೂ ಮಳೆಯಾಗಿಲ್ಲ ಎಂಬ ಆತಂಕ ರೈತರನ್ನು ಕಾಡುತ್ತಿದೆ. ಮಳೆಯ ಕೊರತೆಯಿಂದ ಕಾಫಿ ಮತ್ತು ಅಡಿಕೆ ಬೆಳೆಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ, ಬೆಳೆಗಳನ್ನು ಉಳಿಸಿಕೊಳ್ಳಲು ಉತ್ತಮ ಮಳೆಯ ಅಗತ್ಯವಿದೆ.

ಇದೀಗ ಸುರಿಯುತ್ತಿರುವ ಮಳೆ ರೈತರಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ. ಮುಂಬರುವ ದಿನಗಳಲ್ಲಿ ಉತ್ತಮ ಹಿಂಗಾರು ಮಳೆಯಾಗಬಹುದು ಎಂಬ ಆಶಾಭಾವನೆಯೊಂದಿಗೆ ಕಾಫಿನಾಡಿನ ರೈತರು ಕಾಯುತ್ತಿದ್ದಾರೆ.

 

Join WhatsApp

Join Now