ಚಿಕ್ಕಮಗಳೂರು: ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿರುವ ಚಿಕ್ಕಮಗಳೂರು ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಚುನಾವಣಾ ಫಲಿತಾಂಶದ ಕಾನೂನು ಹೋರಾಟಕ್ಕೆ ಕೊನೆಗೂ ಸುಪ್ರೀಂಕೋರ್ಟ್‌ನಲ್ಲಿ ತಾರ್ಕಿಕ ಅಂತ್ಯ ಸಿಕ್ಕಿದೆ. ಕಳೆದ ಮೂರೂವರೆ ವರ್ಷಗಳಿಂದ ಜಿದ್ದಾಜಿದ್ದಿನಿಂದ ಕೂಡಿದ್ದ ಈ ಕಾನೂನು ಸಮರದಲ್ಲಿ ಹಾಲಿ ಉಪಸಭಾಪತಿ ಎಂ.ಕೆ. ಪ್ರಾಣೇಶ್ ಅವರಿಗೆ ಭಾರಿ ಮುಖಭಂಗವಾಗಿದ್ದು, ಅವರ ಸದಸ್ಯತ್ವವನ್ನು ಸುಪ್ರೀಂಕೋರ್ಟ್ ಅಧಿಕೃತವಾಗಿ ರದ್ದುಗೊಳಿಸಿದೆ. ಈ ಮೂಲಕ ಪರಾಜಿತ ಅಭ್ಯರ್ಥಿಯಾಗಿದ್ದ ಕಾಂಗ್ರೆಸ್‌ನ ಗಾಯತ್ರಿ ಶಾಂತೇಗೌಡ ಅವರಿಗೆ ಐತಿಹಾಸಿಕ ಜಯ ಸಿಕ್ಕಂತಾಗಿದ್ದು, ಮುಂದಿನ ಒಂದೂವರೆ ವರ್ಷಗಳ ಅವಧಿಗೆ ಅವರು ನೂತನ ವಿಧಾನ ಪರಿಷತ್ ಸದಸ್ಯೆಯಾಗಿ ಆಯ್ಕೆಯಾಗಿದ್ದಾರೆ.
ಕೇವಲ ಆರು ಮತಗಳ ಅಲ್ಪ ಅಂತರದಿಂದ ಗೆಲುವು ಸಾಧಿಸಿದ್ದ ಪ್ರಾಣೇಶ್ ಅವರ ವಿರುದ್ಧ, ನಾಮನಿರ್ದೇಶಿತ ಸದಸ್ಯರ ಮತದಾನದ ಸಿಂಧುತ್ವವನ್ನು ಪ್ರಶ್ನಿಸಿ ಗಾಯತ್ರಿ ಶಾಂತೇಗೌಡ ಅವರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಸುದೀರ್ಘ ವಿಚಾರಣೆ ನಡೆಸಿದ ಸರ್ವೋಚ್ಚ ನ್ಯಾಯಾಲಯವು ಇದೀಗ ಗಾಯತ್ರಿ ಅವರ ವಾದವನ್ನು ಪುರಸ್ಕರಿಸಿ ಮಹತ್ವದ ಆದೇಶ ಹೊರಡಿಸಿದೆ.











Leave a Reply