🏠 Home ದೇಶ ಜಿಲ್ಲಾ ಸುದ್ದಿ ತಾಲ್ಲೂಕು ರಾಜ್ಯ ರಾಜಕೀಯ  ಆರೋಗ್ಯ  ಕ್ರೈಮ್  ಪ್ರವಾಸ ಶಿಕ್ಷಣ

 

Breaking News
---Advertisement---
 

ಥಾರ್ ಜೀಪ್ – ಫೋರ್ಡ್ ಕಾರು ನಡುವೆ ಭೀಕರ ಅಪಘಾತ; ಓರ್ವ ಸಾವು, ಮೂವರಿಗೆ ಗಂಭೀರ ಗಾಯ

---Advertisement---

 

ಚಿಕ್ಕಮಗಳೂರು: ಥಾರ್ ಜೀಪ್ ಹಾಗೂ ಫೋರ್ಡ್ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಡೂರು ತಾಲೂಕಿನ ಬುಕ್ಕಸಾಗರ ಗೇಟ್ ಬಳಿ ತಡರಾತ್ರಿ ನಡೆದಿದೆ.

ಮೃತರನ್ನು ಸನತ್ (ಚನ್ನಪ್ಪ) (49) ಎಂದು ಗುರುತಿಸಲಾಗಿದೆ. ಇವರು ಮೆಸ್ಕಾಂನಲ್ಲಿ ಜೆಇ ಆಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.

ಸನತ್ ಅವರು ಫೋರ್ಡ್ ಕಾರಿನಲ್ಲಿ ಕಡೂರಿನಿಂದ ಚಿಕ್ಕಮಗಳೂರಿಗೆ ತೆರಳುತ್ತಿದ್ದ ವೇಳೆ ಎದುರಿನಿಂದ ಬಂದ ಥಾರ್ ಜೀಪ್‌ಗೆ ಡಿಕ್ಕಿ ಹೊಡೆದಿದ್ದಾರೆ. ಡಿಕ್ಕಿಯ ರಭಸಕ್ಕೆ ಕಾರು ಜಖಂಗೊಂಡಿದ್ದು, ಸನತ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇನ್ನು ಥಾರ್ ಜೀಪ್‌ನಲ್ಲಿದ್ದ ಮಂಜುಳಾ, ಸ್ವಾತಿ ಹಾಗೂ ಸೋಮೇಶ್ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕಡೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆಯು ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

 

 

Join WhatsApp

Join Now

Join Telegram

Join Now

और पढ़ें