🏠 Home ದೇಶ ಜಿಲ್ಲಾ ಸುದ್ದಿ ತಾಲ್ಲೂಕು ರಾಜ್ಯ ರಾಜಕೀಯ  ಆರೋಗ್ಯ  ಕ್ರೈಮ್  ಪ್ರವಾಸ ಶಿಕ್ಷಣ

 

Breaking News
---Advertisement---
 

ಕಡೂರಿನಲ್ಲಿ ಭೀಕರ ಅಪಘಾತ: ಸರ್ಕಾರಿ ಬಸ್ ಹರಿದು ಇಬ್ಬರು ಬೈಕ್ ಸವಾರರು ಸಾವು

---Advertisement---

 

ಚಿಕ್ಕಮಗಳೂರು: ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಇಬ್ಬರು ಬೈಕ್ ಸವಾರರ ಮೇಲೆ ಹಿಂದಿನಿಂದ ಬಂದ ಸರ್ಕಾರಿ ಬಸ್ ಹರಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಹಳೆಹಟ್ಟಿ ಗೇಟ್ ಬಳಿ ನಡೆದಿದೆ.

ಕಡೂರಿನಿಂದ ಚಿಕ್ಕಮಗಳೂರು ಕಡೆಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರರು ರಸ್ತೆಗೆ ಬಿದ್ದಿದ್ದು, ಇದೇ ವೇಳೆ ಹಿಂದಿನಿಂದ ಬರುತ್ತಿದ್ದ ಸರ್ಕಾರಿ ಬಸ್ ಸವಾರರ ಮೇಲೆ ಹರಿದಿದೆ.

ಅಪಘಾತದಲ್ಲಿ ಮೃತಪಟ್ಟ ಇಬ್ಬರೂ ಮೂಲತಃ ರಾಜಸ್ಥಾನ ಮೂಲದವರು ಎಂದು ತಿಳಿದುಬಂದಿದ್ದು, ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ.

ಇನ್ನು ಮತ್ತೊಂದು ಬೈಕ್‌ನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಕಡೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆ ಕುರಿತು ಸಖರಾಯಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಮೃತರ ಗುರುತು ಪತ್ತೆಹಚ್ಚಲು ಪೊಲೀಸರು ಮುಂದಾಗಿದ್ದಾರೆ.

 

Join WhatsApp

Join Now

Join Telegram

Join Now

Leave a Comment