September 17, 2024

MALNAD TV

HEART OF COFFEE CITY

ಗಾಯತ್ರಿ ಶಾಂತೇಗೌಡ ಮನೆ ಮೇಲೆ ಐಟಿ‌ ದಾಳಿ, ಎಸ್ಪಿ ಕಚೇರಿ ಎದುರು ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

1 min read

 

 

ಚಿಕ್ಕಮಗಳೂರು : ಮಾಜಿ ವಿಧಾನ ಪರಿಷತ್ ಸದಸ್ಯೆ ಗಾಯತ್ರಿ ಶಾಂತೇಗೌಡ ಮನೆ ಮೇಲಿನ ಐ.ಟಿ.ದಾಳಿ ಖಂಡಿಸಿ ಜಿಲ್ಲಾ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದೆ. ಇಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ಐ.ಟಿ. ಅಧಿಕಾರಿಗಳು ರಾಜಕೀಯ ಪ್ರೇರಿತವಾಗಿ ದಾಳಿ ಮಾಡಿದ್ದಾರೆ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಇದೇ ವೇಳೆ, ಕಳೆದ ಎರಡ್ಮೂರು ದಿನಗಳ ಹಿಂದೆ ಭ್ರಷ್ಟಾಚಾರ ವಿರೋಧಿಸಿ ಕಡೂರು ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿದ 10ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಿಸಿರೋದಕ್ಕೂ ಆಕ್ರೋಶ ಹೊರಹಾಕಿದ್ದಾರೆ. ಸರ್ಕಾರ ಪೊಲೀಸ್ ಹಾಗೂ ಅಧಿಕಾರಿಗಳನ್ನು ಕೈ ಗೊಂಬೆಗಳಂತೆ ಬಳಸಿಕೊಳ್ಳುತ್ತಿದ್ದಾರೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.ಮಾಜಿ ಸಚಿವೆ ಮೋಟಮ್ಮ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಂಶುಮಂತ್ ನೇತೃತ್ವದಲ್ಲಿ ಪ್ರತಿಭಟನೆ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!