🏠 Home ದೇಶ ಜಿಲ್ಲಾ ಸುದ್ದಿ ತಾಲ್ಲೂಕು ರಾಜ್ಯ ರಾಜಕೀಯ  ಆರೋಗ್ಯ  ಕ್ರೈಮ್  ಪ್ರವಾಸ ಶಿಕ್ಷಣ

 

Breaking News
---Advertisement---
 

ನಲ್ಪಾಡ್ ವಿರುದ್ಧ ಸಿಡಿದೆದ್ದ ಜೆಡಿಎಸ್: ಕ್ಷಮೆ ಕೇಳದಿದ್ದರೆ ಮನೆಯಿಂದ ಹೊರಬರದಂತೆ ದಿಗ್ಬಂಧನ ಎಚ್ಚರಿಕೆ!

---Advertisement---

 

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹಾಗೂ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಕಾಂಗ್ರೆಸ್ ಮುಖಂಡ ಮೊಹಮ್ಮದ್ ನಲ್ಪಾಡ್ ವಿರುದ್ಧ ಜೆಡಿಎಸ್ ರಾಜ್ಯ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷ ಝಕರಿಯಾ ಝಾಕಿರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಜೆಡಿಎಸ್ ನಾಯಕರ ತೇಜೋವಧೆ ಮಾಡುವ ರೀತಿಯಲ್ಲಿ ಕೀಳುಮಟ್ಟದ ಹೇಳಿಕೆ ನೀಡಿರುವುದನ್ನು ಕಟುವಾಗಿ ಖಂಡಿಸಿರುವ ಅವರು, ನಲ್ಪಾಡ್ ಅವರು ತಕ್ಷಣವೇ ತಮ್ಮ ಹೇಳಿಕೆಯನ್ನು ಹಿಂಪಡೆದು ಜೆಡಿಎಸ್ ನಾಯಕರು ಹಾಗೂ ಕಾರ್ಯಕರ್ತರ ಬಳಿ ಬಹಿರಂಗ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ. ಒಂದು ವೇಳೆ ಬೇಷರತ್ ಕ್ಷಮೆ ಕೋರದಿದ್ದರೆ ಜೆಡಿಎಸ್ ಅಲ್ಪಸಂಖ್ಯಾತ ಘಟಕದ ವತಿಯಿಂದ ಅವರ ಮನೆಗೆ ಮುತ್ತಿಗೆ ಹಾಕಿ, ಅವರು ಮನೆಯಿಂದ ಹೊರಬರದಂತೆ ದಿಗ್ಬಂಧನ ವಿಧಿಸುವುದಾಗಿ ಎಚ್ಚರಿಸಿದ್ದಾರೆ. ನಲ್ಪಾಡ್ ಅವರಿಗೆ ಗಂಟುಮೂಟೆ ಕಟ್ಟಿಸಿ ಕೇರಳಕ್ಕೆ ಓಡಿಸುವ ಶಕ್ತಿ ಜೆಡಿಎಸ್ ಕಾರ್ಯಕರ್ತರಿಗೆ ಇದೆ ಎಂದು ಗುಡುಗಿದ್ದಾರೆ.

ಇದೇ ವೇಳೆ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಝಕರಿಯಾ ಝಾಕಿರ್, ಚುನಾವಣೆಗೂ ಮುನ್ನ ಅಲ್ಪಸಂಖ್ಯಾತರಿಗೆ ನೀಡಿದ್ದ ಭರವಸೆಗಳನ್ನು ಈಡೇರಿಸದೆ ಕಾಂಗ್ರೆಸ್ ಸರ್ಕಾರ ವಂಚಿಸಿದೆ ಎಂದು ಆರೋಪಿಸಿದ್ದಾರೆ. ಶೇಕಡಾ 4ರಷ್ಟು ಮುಸ್ಲಿಂ ಮೀಸಲಾತಿ ಮರುಸ್ಥಾಪನೆ, ಬಜೆಟ್‌ನಲ್ಲಿ ₹10,000 ಕೋಟಿಯಿಂದ ₹15,000 ಕೋಟಿ ಅನುದಾನ ಬಿಡುಗಡೆ ಹಾಗೂ ಹಿಜಾಬ್ ನಿರ್ಬಂಧ ರದ್ದತಿ ವಿಚಾರಗಳಲ್ಲಿ ಸರ್ಕಾರ ನೀಡಿದ ಮಾತನ್ನು ತಪ್ಪಿದೆ ಎಂದು ದೂರಿದ್ದಾರೆ. ಮುಂಬರುವ ಜನವರಿ ಒಳಗೆ ಈ ಬೇಡಿಕೆಗಳನ್ನು ಈಡೇರಿಸದಿದ್ದರೆ, ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಸಾವಿರಾರು ಮುಖಂಡರು ಮತ್ತು ಕಾರ್ಯಕರ್ತರೊಂದಿಗೆ ಸಮಾವೇಶ ನಡೆಸಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

Join WhatsApp

Join Now