🏠 Home ದೇಶ ಜಿಲ್ಲಾ ಸುದ್ದಿ ತಾಲ್ಲೂಕು ರಾಜ್ಯ ರಾಜಕೀಯ  ಆರೋಗ್ಯ  ಕ್ರೈಮ್  ಪ್ರವಾಸ ಶಿಕ್ಷಣ

 

Breaking News
---Advertisement---
 

ಸಾಮಾಜಿಕ ಜಾಲತಾಣದಲ್ಲಿ ಕಡೂರು ಶಾಸಕರಿಗೆ ನಿಂದನೆ : ಇಬ್ಬರು ಖಾತೆದಾರರ ವಿರುದ್ಧ ಎಫ್‌ಐಆರ್ ದಾಖಲು!

---Advertisement---

 

 

ಕಡೂರು ಶಾಸಕ ಕೆ.ಎಸ್. ಆನಂದ್ ಅವರ ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಅಸಭ್ಯ ಶಬ್ದಗಳಿಂದ ನಿಂದಿಸಿದ 

ಪ್ರಕರಣಕ್ಕೆ ಸಂಬಂಧಿಸಿದಂತೆ ಕಡೂರು ಪೊಲೀಸ್ ಠಾಣೆಯಲ್ಲಿ ಇಬ್ಬರು ಇನ್‌ಸ್ಟಾಗ್ರಾಮ್ ಖಾತೆದಾರರ ವಿರುದ್ಧ ಪ್ರಕರಣ ದಾಖಲಾಗಿದೆ.

ಜುಲೈ 25ರಂದು ಶಾಸಕ ಕೆ.ಎಸ್. ಆನಂದ್ ಅವರು ವಿದ್ಯಾರ್ಥಿಗಳ ಹೋರಾಟ ಹಾಗೂ ಶೈಕ್ಷಣಿಕ ವಿಚಾರಕ್ಕೆ ಸಂಬಂಧಿಸಿದಂತೆ ಹಂಚಿಕೊಂಡಿದ್ದ ಪೋಸ್ಟ್‌ಗೆ, ‘svt_ravi_ka10’ ಹಾಗೂ ‘ba_savaraj1829’ ಎಂಬ ಐಡಿಗಳಿಂದ ಅತ್ಯಂತ ಕೆಟ್ಟ ಭಾಷೆಯಲ್ಲಿ ಕಮೆಂಟ್ ಮಾಡಿ ಬೆದರಿಕೆ ಹಾಕಲಾಗಿತ್ತು.

ಜನಪ್ರತಿನಿಧಿಗೆ ಸಾಮಾಜಿಕ ಜಾಲತಾಣದಲ್ಲಿ ನಡೆದಿರುವ ಈ ನಿಂದನೆಯನ್ನು ಗಂಭೀರವಾಗಿ ಪರಿಗಣಿಸಿದ ಕಾಂಗ್ರೆಸ್ ಮುಖಂಡ ಸಚಿನ್ ಕೆ.ಎಂ. ಅವರು ತಕ್ಷಣ ಕಡೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ತೀವ್ರತೆಯನ್ನು ಪರಿಶೀಲಿಸಿದ ಪೊಲೀಸರು, ಮಾನ್ಯ ನ್ಯಾಯಾಲಯದ ಪೂರ್ವಾನುಮತಿ ಪಡೆದು ಇಬ್ಬರೂ ಖಾತೆದಾರರ ವಿರುದ್ಧ ಎನ್‌ಸಿ (Non-Cognizable) ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

Join WhatsApp

Join Now

Join Telegram

Join Now