मौसम क्रिकेट ऑपरेशन सिंदूर क्रिकेट स्पोर्ट्स बॉलीवुड जॉब - एजुकेशन बिजनेस लाइफस्टाइल देश विदेश राशिफल आध्यात्मिक अन्य
---Advertisement---

ಕಳಸ: ಅಕ್ಕನ ಮನೆಗೆ ಬಂದಿದ್ದ ಕೊಡಗಿನ ಯುವಕರು ಭದ್ರಾ ನದಿಯಲ್ಲಿ ಜಲಸಮಾಧಿ!

---Advertisement---

 

​ಕಳಸ: ಜಿಲ್ಲೆಯ ಕಳಸ ತಾಲೂಕಿನ ಬಾಳೆಹೊಳೆ ಸಮೀಪ ಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೂಲತಃ ಕೊಡಗು ಜಿಲ್ಲೆಯವರಾದ ಅಭಿಷೇಕ್ (27) ಮತ್ತು ಯೋಗೀಶ್ (17) ಮೃತಪಟ್ಟ ದುರ್ದೈವಿಗಳು ಎಂದು ಗುರುತಿಸಲಾಗಿದೆ.
​ಮೃತ ಅಭಿಷೇಕ್ ಅವರ ಅಕ್ಕ ಬಾಳೆಹೊಳೆ ವ್ಯಾಪ್ತಿಯ ಕಾಫಿ ತೋಟವೊಂದರಲ್ಲಿ ಕೆಲಸ ಮಾಡುತ್ತಿದ್ದು, ಅವರನ್ನು ಕಾಣಲು ಇಬ್ಬರೂ ಕೊಡಗಿನಿಂದ ಬಂದಿದ್ದರು. ಈ ಸಂದರ್ಭದಲ್ಲಿ ನದಿಯಲ್ಲಿ ಈಜಲು ಇಳಿದಾಗ ನೀರಿನ ವೇಗಕ್ಕೆ ಸಿಲುಕಿ ಇಬ್ಬರೂ ಕೊಚ್ಚಿ ಹೋಗಿದ್ದಾರೆ ಎನ್ನಲಾಗಿದೆ. ವಿಷಯ ತಿಳಿಯುತ್ತಿದ್ದಂತೆಯೇ ಕಳಸ ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯರು ಸ್ಥಳಕ್ಕೆ ಧಾವಿಸಿದ್ದು, ನಾಪತ್ತೆಯಾಗಿರುವ ಯುವಕರ ಶವಕ್ಕಾಗಿ ತೀವ್ರ ಶೋಧ ನಡೆಸುತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join WhatsApp

Join Now

Join Telegram

Join Now

Leave a Comment