September 19, 2024

MALNAD TV

HEART OF COFFEE CITY

ಸ್ಥಳೀಯ ಸಂಸ್ಥೆಗಳು ಜನಸ್ನೇಹಿ ಆಡಳಿತ ನೀಡಿ, ಸಿಬ್ಬಂದಿಗಳಿಗೆ ಖಡಕ್ ಸೂಚನೆ – ವೀರೇಶ್ ಕುಮಾರ್

1 min read

ಚಿಕ್ಕಮಗಳೂರು-ನಗರಸಭೆ ಆಡಳಿತಕ್ಕೆ ಚುರುಕು ಮುಟ್ಟಿಸುವ ಜೊತೆಗೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳಲ್ಲಿ ಜನಸ್ನೇಹಿ ಆಡಳಿತ ನೀಡಲು ಸಿಬ್ಬಂದಿಗಳಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಜಿ.ಟಿ ವೀರೇಶ್‍ಕುಮಾರ್ ತಿಳಿಸಿದರು.ಅವರು ಇಂದು ನಗರಸಭೆಯಲ್ಲಿ ಆಯೋಜಿಸಲಾಗಿದ್ದ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಜಿಲ್ಲೆಯ ನಗರಸಭೆ ಮತ್ತು ಪುರಸಭೆ ಕಛೇರಿಗಳಲ್ಲಿ ಅಧಿಕಾರಿಗಳು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು ಹಾಗೂ ಸಭೆಗೆ ಹಾಜರಾಗುವಾಗ ಇಲಾಖೆಯ ಸಂಪೂರ್ಣ ಮಾಹಿತಿ ತರಬೇಕೆಂದು ಎಚ್ಚರಿಸಿದರು.
ಸ್ಥಳೀಯ ಸಂಸ್ಥೆಗಳಿಂದ ಸಾರ್ವಜನಿಕರಿಗೆ ದೊರೆಯುವ ಸೌಲಭ್ಯಗಳ ಸಂಪೂರ್ಣ ಮಾಹಿತಿಯನ್ನು ಸಭೆಗೆ ನೀಡಿ ಸಮಯಕ್ಕೆ ಸರಿಯಾಗಿ ಕೆಲಸ ನಿರ್ವಹಿಸಬೇಕೆಂದು ಸೂಚಿಸಿದ ಅವರು ಟೆಂಡರ್ ಕರೆದು 6 ತಿಂಗಳು 1 ವರ್ಷ ಆದರೂ ಕಾಮಗಾರಿ ಆರಂಭವಾಗಿಲ್ಲ ಮತ್ತೆ ಕೆಲವು ಕಾಮಗಾರಿಗಳನ್ನು ಪೂರ್ಣಗೊಳಿಸಿಲ್ಲ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.ಸಾರ್ವಜನಿಕರ ಕೆಲಸ ಮಾಡಲು ಆಸಕ್ತಿ ಇಲ್ಲದ ಅಧಿಕಾರಿಗಳು ಸಭೆಗೆ ಬರುವ ಅವಶ್ಯಕತೆ ಇಲ್ಲ ಎಂದು ಬೀರೂರು ಪುರಸಭೆ ಅಧಿಕಾರಿಗೆ ಎಚ್ಚರಿಕೆ ನೀಡಿದ ವೀರೇಶ್‍ಕುಮಾರ್ ವಾಜಪೇಯಿ, ಅಂಬೇಡ್ಕರ್, ದೇವರಾಜ್ ಅರಸು ಭವನಗಳ ಕಾಮಗಾರಿಗಳು ಪೂರ್ಣಗೊಳ್ಳದೇ ಇರುವುದಕ್ಕೆ ಅಸಮಧಾನ ವ್ಯಕ್ತಪಡಿಸಿದರು.ಬ್ಯಾಂಕುಗಳಿಂದ ಸಾಲ ಪಡೆದು ಮನೆ ನಿರ್ಮಿಸುವವರಿಗೆ ಸರಿಯಾದ ಸಮಯಕ್ಕೆ ಸಂಬಂಧಿಸಿದ ದಾಖಲೆ ಪತ್ರಗಳನ್ನು ನೀಡದ ಪರಿಣಾಮ ಸಾರ್ವಜನಿಕರಿಗೆ ಬಹಳ ತೊಂದರೆಯಾಗುತ್ತಿದೆ, ಈ ಬಗ್ಗೆ ಬ್ಯಾಂಕ್ ಅಧಿಕಾರಿಗಳೂ ಮತ್ತು ಸಾರ್ವಜನಿಕರನ್ನೊಳಗೊಂಡ ಸಭೆ ಕರೆದು ಮನವರಿಕೆ ಮಾಡುವ ಅಗತ್ಯ ಇದೆ ಎಂದು ಹೇಳಿದರು.ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆ ಅಧಿಕಾರಿಗಳು ಸಾರ್ವಜನಿಕರಿಗೆ ಅಗತ್ಯವಿರುವ ಸೌಲಭ್ಯಗಳನ್ನು ನಿಗಧಿತ ಸಮಯದಲ್ಲಿ ಒದಗಿಸಿ ಉತ್ತಮ ಸೇವೆ ನೀಡುವ ಮೂಲಕ ರಾಜ್ಯದಲ್ಲಿಯೇ ಮಾದರಿ ನಗರಸಭೆ, ಪುರಸಭೆಗಳನ್ನಾಗಿಸಬೇಕೆಂದು ವಿನಂತಿಸಿದರು.

ವಿವಿಧ ವಸತಿ ಯೋಜನೆಗಳ ಪ್ರಗತಿ ಬಗ್ಗೆ ಪರಿಶೀಲಿಸಿ ಯಾವ ಹಂತದಲ್ಲಿ ಇವೆ ಎಂಬ ಬಗ್ಗೆ ತಿಳಿದುಕೊಳ್ಳಲು ಸಭೆಯನ್ನು ಕರೆಯಲಾಗಿದೆ ಸ್ಥಳೀಯ ಸಂಸ್ಥೆಗಳಿಗೆ ಆದಾಯ ಕ್ರೂಢೀಕರಿಸುವ ಮನೆಕಂದಾಯ, ನೀರಿನ ಕಂದಾಯ ಮುಂತಾದ ಕರ ವಸೂಲಿ ಬಗ್ಗೆ ಮಾಹಿತಿ ನೀಡಿ ಗುರಿ ನೀಡಲಾಗಿದೆ ಎಂದು ತಿಳಿಸಿದರು.ಪೌರಾಯುಕ್ತ ಬಿ.ಸಿ ಬಸವರಾಜ್ ಮಾತನಾಡಿ ಸಮಸ್ಯೆಗಳನ್ನು ಹೊತ್ತುತರುವ ನಾಗರೀಕರ ಕೆಲಸಗಳನ್ನು ತುರ್ತಾಗಿ ಮಾಡಬೇಕು ಹಾಗೂ ನಿವೇಶನ ಖಾತೆ ಬದಲಾವಣೆ, ಇ-ಖಾತೆ ಮುಂತಾದ ಯಾವುದೇ ಕೆಲಸಗಳು ವಿಳಂಭವಾಗದಂತೆ ತ್ವರಿತವಾಗಿ ಮಾಡುವಂತೆ ಅಧಿಕಾರಿ ಸಿಬ್ಬಂಧಿಗಳಿಗೆ ಸೂಚನೆ ನೀಡಿದರು.ನಗರದಲ್ಲಿ ಈಗಾಗಲೇ ಪ್ಲಾಸ್ಟಿಕ್ ಮುಕ್ತವನ್ನಾಗಿಸಲು ಸೂಕ್ತ ಕ್ರಮ ಕೈಗೊಳ್ಳಲಾಗಿದೆ, ಪ್ಲಾಸ್ಟಿಕ್ ಮುಕ್ತ ಅಭಿಯಾನವನ್ನು ಜು. 1 ರಿಂದ 28 ರವರೆಗೆ ಏಕ ಬಳಕೆ ಪ್ಲಾಸ್ಟಿಕ್ ನಿಷೇಧ ಮತ್ತು ತ್ಯಾಜ್ಯ ನಿರ್ವಹಣೆ ಕುರಿತು ಜಾತಾ, ತರಬೇತಿ ಹಾಗೂ ಅರಿವು ಮೂಡಿಸುವ ಆಂದೋಲನ ಮತ್ತು ಅಭಿಯಾನ ನಡೆಯಲಿದ್ದು, ಪ್ಲಾಸ್ಟಿಕ್ ಬಳಕೆ ನಿಲ್ಲಿಸಿ, ಪರಿಸರ ಉಳಿಸಿ ಘೋಷಣೆಯೊಂದಿಗೆ ಅಭಿಯಾನ ನಡೆಯಲಿದೆ ಎಂದು ತಿಳಿಸಿದರು.ವರ್ತಕರು ನಗರಸಭೆಯ ನಿಯಮ ಮೀರಿ ಪ್ಲಾಸ್ಟಿಕ್ ಮಾರಾಟ ಮಾಡುತ್ತಿರುವುದು ಕಂಡುಬಂದರೆ ಅಂತಹ ಮಾಲೀಕರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವುದರ ಜೊತೆಗೆ ಅಂಗಡಿ ಪರವಾನಗಿಯನ್ನು ರದ್ದುಪಡಿಸುವುದಾಗಿ ಎಚ್ಚರಿಸಿದರು.
ನಗರದ ನಾಗರೀಕರು ಸ್ವಚ್ಚತೆಗೆ ಆದ್ಯ ಗಮನ ನೀಡಿ ನಗರಸಭೆಯೊಂದಿಗೆ ಸಹಕರಿಸಬೇಕೆಂದು ಮನವಿ ಮಾಡಿದ ಅವರು ಅಮೃತ್ ಯೋಜನೆಯ ನೀರು ಸರಬರಾಜಾಗುತ್ತಿದ್ದು, ನೀರನ್ನು ಪೋಲು ಮಾಡುತ್ತಿರುವ ಬಗ್ಗೆ ಕೆಲವರು ದೂರು ನೀಡುತ್ತಿದ್ದಾರೆ ಅಂತಹ ಮನೆಯ ಮಾಲೀಕರು ನೆಲ್ಲಿಗಳಿಗೆ ಟ್ಯಾಪ್ ಅಳವಡಿಸುವ ಮೂಲಕ ನೀರನ್ನು ಮಿತವಾಗಿ ಬಳಸುವಂತೆ ವಿನಂತಿಸಿದರು.ಸಭೆಯಲ್ಲಿ ಕಾರ್ಯಪಾಲಕ ಅಭಿಯಂತರರಾದ ಎಸ್.ಎಸ್ ಮತ್ತಿಕಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!