November 1, 2024

MALNAD TV

HEART OF COFFEE CITY

ರೋಹಿತ್ ಚಕ್ರತೀರ್ಥ ವಜಾಗೊಳಿಸಿ ಬಂಧಿಸುವoತೆ ಆಗ್ರಹ

1 min read

ಚಿಕ್ಕಮಗಳೂರು: ರೋಹಿತ್ ಚಕ್ರತೀರ್ಥ ಅಧ್ಯಕ್ಷತೆಯಲ್ಲಿರುವ ಪಠ್ಯ ಪರಿಷ್ಕರಣ ಸಮಿತಿ ಯನ್ನು ವಜಾಗೊಳಿಸಬೇಕು. ನಾಡಗೀತೆಗೆ ಅಪಮಾನ ಮಾಡಿರುವ ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ ಸಮಾನ ಮನಸ್ಕ ಪಕ್ಷ ಹಾಗೂ ಸಂಘಟನೆಗಳ ಮುಖಂಡರು ನಗರದಲ್ಲಿ ಪ್ರತಿಭಟನೆ ನಡೆಸಿದರು.
 ನಗರದ ಆಜಾದ್‌ಪಾರ್ಕ್ ವೃತ್ತದಲ್ಲಿ ಸಮಾವೇಶಗೊಂಡ ಸಮಾನ ಮನಸ್ಕ ಪಕ್ಷಗಳ ಮುಖಂಡರು ರೋಹಿತ್ ಚಕ್ರತೀರ್ಥ ಹಾಗೂ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿ ಹಿಂದಿನ ಪಠ್ಯಕ್ರಮವನ್ನು ಮುಂದೂವರೆಸಬೇಕೆoದು ಆಗ್ರಹಿಸಿದರು.ರೈತ ಸಂಘದ ಜಿಲ್ಲಾಧ್ಯಕ್ಷ ಗುರುಶಾಂತಪ್ಪ ಮಾತನಾಡಿ, ಶಿಕ್ಷಣ ವ್ಯವಸ್ಥೆಯನ್ನು ಕೇಸರಿಕರಣ ಗೊಳಿಸಲಾಗುತ್ತಿದೆ. ಬಸವಣ್ಣನವರಿಗೆ ಜನಿವಾರ ತೊಡಿಸಲಾಗಿದೆ. ಪಠ್ಯ ಪರಿಷ್ಕರಣ ಸಮಿತಿಯಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡಿಲ್ಲ ಈ ಹಿನ್ನಲೆಯಲ್ಲಿ ಸಮಿತಿಯನ್ನು ವಜಾ ಗೊಳಿಸಬೇಕೆಂದು ಒತ್ತಾಯಿಸಿದರು.

ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಅಸಂವಿಧಾನಿಕ ಮತ್ತು ಅಸಮತೋಲನದಿಂದ ಕೂಡಿದೆ. ಸಾಮಾಜಿಕವಾಗಿ ಎಲ್ಲರನ್ನು ಒಳಗೊಳ್ಳದೇ ಕೇವಲ ಒಂದು ವರ್ಗದ ಹಿತಾಸಕ್ತಿಯ ವ್ಯಕ್ತಿ ಗಳನ್ನು ಒಳಗೊಂಡಿರುವುದು ಖಂಡನೀಯ ಎಂದ ಅವರು, ಪರಿಷ್ಕರಣ ಸಮಿತಿ ಶೈಕ್ಷಣಿಕ ಮತ್ತು ಸಾರ್ವಜನಿಕವಾಗಿ ಚರ್ಚೆಗೆ ಒಳಪಡಿಸದೆ ಏಕಪಕ್ಷೀಯ ಪಠ್ಯವನ್ನು ಮಕ್ಕಳ ಮೇಲೆ ಹೇರಲಾಗುತ್ತಿದೆ ಎಂದು ದೂರಿದರು.ಕೆಪಿಸಿಸಿ ವಕ್ತಾರ ಎಚ್.ಎಚ್.ದೇವರಾಜ್ ಮಾತನಾಡಿ, ರಾಜ್ಯ ಸರ್ಕಾರಕ್ಕೆ ಕಣ್ಣು, ಕಿವಿ ಇಲ್ಲ ದಂತಾಗಿದೆ. ರಾಜ್ಯದಲ್ಲಿ ಅರಾಜಕತೆ ಸೃಷ್ಠಿಸಲಾಗುತ್ತಿದೆ. ಪಠ್ಯ ಪರಿಷ್ಕರಣ ಸಮಿತಿಯಲ್ಲಿ ಆರ್‌ಎಸ್‌ಎಸ್‌ನವರಿದ್ದು ಪಠ್ಯ ಪುಸ್ತಕದಲ್ಲಿ ಮಕ್ಕಳಿಗೆ ಉತ್ತಮ ಸಂದೇಶ ಹೇಗೆ ನೀಡಲು ಸಾಧ್ಯ ಎಂದ ಅವರು, ವಿಶ್ವ ಮಾನವ ಸಂದೇಶ ನೀಡಿರುವ ಕುವೆಂಪು ಅವರ ಬಗ್ಗೆ ಮಾತನಾಡುವ ನೈತಿಕತೆ ಚಕ್ರತೀರ್ಥ ಅವರಿಗಿಲ್ಲ. ಚಕ್ರತೀರ್ಥ ಅವರನ್ನು ಗಡಿಪಾರು ಮಾಡಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಬಹುಜನ ಸಮಾಜ ಪಕ್ಷದ ಜಿಲ್ಲಾಧ್ಯಕ್ಷ ಕೆ.ಟಿ.ರಾಧಾಕೃಷ್ಣ, ವಿವಿಧ ಸಂಘಟನೆಗಳ ಮುಖಂಡರಾದ ಬಿ.ಅಮ್ಜದ್, ಮರ್ಲೆಅಣ್ಣಯ್ಯ, ಮಹೇಶ್, ತೇಗೂರು ಜಗದೀಶ್, ಸಿ.ಆರ್.ರಘು, ತೇಗೂರು ವಸಂತಕುಮಾರ್, ಕೆ.ಗುಣಶೇಖರ್, ಎ.ಜಯ ಕುಮಾರ್, ಕೆ.ಬಿ.ಸುಧಾ, ಶೋಭಾ, ಕಾಂಗ್ರೆಸ್ ಪಕ್ಷದ ಹಿರೇಮಗಳೂರು ಪುಟ್ಟಸ್ವಾಮಿ ರವೀಶ್‌ಬಸಪ್ಪ, ಚನ್ನೇಗೌಡ, ಚಂದ್ರಶೇಖರ್, ಸಿ.ಸಿ.ಮಂಜೇಗೌಡ, ಮಂಜಪ್ಪ, ಜಿ.ಕೆ.ಬಸವ ರಾಜ್ ಇದ್ದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!