🏠 Home ದೇಶ ಜಿಲ್ಲಾ ಸುದ್ದಿ ತಾಲ್ಲೂಕು ರಾಜ್ಯ ರಾಜಕೀಯ  ಆರೋಗ್ಯ  ಕ್ರೈಮ್  ಪ್ರವಾಸ ಶಿಕ್ಷಣ

 

Breaking News
---Advertisement---
 

ಕಾಡಾನೆ ಹಾವಳಿ ತಡೆಗೆ ದೇವರ ಮೊರೆ ಹೋದ ಶಾಸಕ ರಾಜೇಗೌಡ 

---Advertisement---

 

 

 

ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದ್ದು, ಸಾರ್ವಜನಿಕರ ಪ್ರಾಣ ಮತ್ತು ಆಸ್ತಿಗೆ ತೀವ್ರ ಸಂಚಕಾರ ಎದುರಾಗಿದೆ. ಕಳೆದ ಒಂದು ವರ್ಷದಲ್ಲಿ ಒಟ್ಟು ಒಂಬತ್ತು ಜನರು ಕಾಡಾನೆ ದಾಳಿಗೆ ಬಲಿಯಾಗಿರುವುದು ಇಡೀ ಕ್ಷೇತ್ರವನ್ನು ಕಂಗಾಲಾಗಿಸಿದೆ. ಈ ಹಿನ್ನೆಲೆಯಲ್ಲಿ ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ. ರಾಜೇಗೌಡ ಅವರು ವಿಘ್ನನಿವಾರಕನ ಮೊರೆ ಹೋಗಿದ್ದು, ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಪ್ರಸಿದ್ಧ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

​ಕ್ಷೇತ್ರದಲ್ಲಿ ನಿರಂತರವಾಗಿ ನಡೆಯುತ್ತಿರುವ ಆನೆಗಳ ದಾಳಿಯಿಂದಾಗಿ ಅಪಾರ ಪ್ರಮಾಣದ ಬೆಳೆ ನಾಶವಾಗುತ್ತಿದ್ದು, ರೈತರು ಕಣ್ಣೀರಲ್ಲಿ ಕೈ ತೊಳೆಯುವಂತಾಗಿದೆ. ಸರ್ಕಾರದ ಮಟ್ಟದಲ್ಲಿ ಹಾವಳಿ ತಡೆಗೆ ಪ್ರಯತ್ನಗಳು ನಡೆಯುತ್ತಿದ್ದರೂ, ಪ್ರಾಣಹಾನಿ ಸಂಭವಿಸುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಈ ಸಂಕಷ್ಟದಿಂದ ಮುಕ್ತಿ ನೀಡುವಂತೆ ಶಾಸಕ ರಾಜೇಗೌಡ ಅವರು ತಮ್ಮ ಪತ್ನಿಯೊಂದಿಗೆ ದೇವಸ್ಥಾನಕ್ಕೆ ತೆರಳಿ , ಮಲೆನಾಡಿನ ಜನರ ರಕ್ಷಣೆಗಾಗಿ ಮತ್ತು ಕಾಡಾನೆಗಳ ಹಾವಳಿ ತಪ್ಪಿಸುವಂತೆ ದೇವರಲ್ಲಿ ಪ್ರಾರ್ಥಿಸಿದರು.

​ಈ ಸಂದರ್ಭದಲ್ಲಿ ಶಾಸಕರೊಂದಿಗೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದು, ದೇವರಲ್ಲಿ ಹರಕೆ ಸಲ್ಲಿಸಿದರು. ಕ್ಷೇತ್ರದಲ್ಲಿ ಕಾಡುಪ್ರಾಣಿಗಳ ಹಾವಳಿ ನಿಂತು, ಜನರು ನೆಮ್ಮದಿಯಿಂದ ಬದುಕುವಂತಾಗಲಿ ಎಂದು ಈ ವಿಶೇಷ ಪ್ರಾರ್ಥನೆ ಸಲ್ಲಿಸಲಾಗಿದೆ. ಕ್ಷೇತ್ರದ ಜನರ ಸುರಕ್ಷತೆಗಾಗಿ ಜನಪ್ರತಿನಿಧಿಗಳು ದೈವದ ಮೊರೆ ಹೋಗಿರುವುದು ಈಗ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

Join WhatsApp

Join Now

Join Telegram

Join Now

और पढ़ें