🏠 Home ದೇಶ ಜಿಲ್ಲಾ ಸುದ್ದಿ ತಾಲ್ಲೂಕು ರಾಜ್ಯ ರಾಜಕೀಯ  ಆರೋಗ್ಯ  ಕ್ರೈಮ್  ಪ್ರವಾಸ ಶಿಕ್ಷಣ

 

Breaking News
---Advertisement---
 

ಚಿಕ್ಕಮಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ: ದಲಿತ ಯುವಕನ ಮೇಲೆ ಹಲ್ಲೆ, ನಾಲ್ವರ ಬಂಧನ

---Advertisement---

​ಚಿಕ್ಕಮಗಳೂರಿನ ಸಂತೇ ಮೈದಾನದ ಬಳಿ ನೈತಿಕ ಪೊಲೀಸ್ ಗಿರಿ ನಡೆದಿದ್ದು, ಮುಸ್ಲಿಂ ಸಮುದಾಯದ ಅಪ್ರಾಪ್ತ ಯುವತಿಯೊಂದಿಗೆ ಇದ್ದ ಎಂಬ ಕಾರಣಕ್ಕೆ ದಲಿತ ಅಪ್ರಾಪ್ತ ಯುವಕನ ಮೇಲೆ ಮುಸ್ಲಿಂ ಯುವಕರ ತಂಡವೊಂದು ಹಲ್ಲೆ ನಡೆಸಿ ಬೆದರಿಕೆ ಹಾಕಿದೆ. ಶಾಲೆಯಿಂದ ಮನೆಗೆ ಹಿಂತಿರುಗುತ್ತಿದ್ದ ಈ ಯುವಕ ಮತ್ತು ಯುವತಿ ಪರಸ್ಪರ ಸ್ನೇಹಿತರಾಗಿದ್ದು, ಎರಡೂ ಕುಟುಂಬಗಳಿಗೂ ಮೊದಲೇ ಪರಿಚಯವಿತ್ತು ಎಂದು ತಿಳಿದುಬಂದಿದೆ. ಘಟನೆ ವೇಳೆ ಯುವಕನನ್ನು ಪ್ರಶ್ನಿಸುತ್ತಿದ್ದಂತೆ ಯುವತಿ ಸ್ಥಳದಿಂದ ನಿರ್ಗಮಿಸಿದ್ದು, ತಂಡವು ಯುವಕನ ಮೇಲೆ ದೌರ್ಜನ್ಯ ಎಸಗಿದೆ.
​ಈ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ಅವರು ಜಿಲ್ಲೆಯಲ್ಲಿ ನೈತಿಕ ಪೊಲೀಸ್ ಗಿರಿಯನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಕಡಕ್ ಎಚ್ಚರಿಕೆ ನೀಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ನಗರ ಪೊಲೀಸ್ ಠಾಣೆಯಲ್ಲಿ ಎಂಟು ಜನರ ವಿರುದ್ಧ ಅಟ್ರಾಸಿಟಿ ಸೇರಿದಂತೆ ವಿವಿಧ ಗಂಭೀರ ಕಲಂ ಅಡಿ ಪ್ರಕರಣ ದಾಖಲಾಗಿದ್ದು, ಈಗಾಗಲೇ ನಯಾಜ್, ತಬ್ರೀಜ್ ಹಾಗೂ ಹನೀಫ್ ಸೇರಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ತಲೆಮರೆಸಿಕೊಂಡಿರುವ ಉಳಿದ ನಾಲ್ವರು ಆರೋಪಿಗಳ ಪತ್ತೆಗಾಗಿ ಶೋಧ ಕಾರ್ಯ ತೀವ್ರಗೊಂಡಿದೆ.
​ ನಗರದಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ತನಿಖೆಯನ್ನು ಚುರುಕುಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

Join WhatsApp

Join Now

Join Telegram

Join Now