🏠 Home ದೇಶ ಜಿಲ್ಲಾ ಸುದ್ದಿ ತಾಲ್ಲೂಕು ರಾಜ್ಯ ರಾಜಕೀಯ  ಆರೋಗ್ಯ  ಕ್ರೈಮ್  ಪ್ರವಾಸ ಶಿಕ್ಷಣ

 

Breaking News
---Advertisement---
 

ತಾಯಿಗೆ ಮಗಳ ಅಶ್ಲೀಲ ಫೋಟೋ ಕಳಿಸಿ ಹಣಕ್ಕೆ ಬೇಡಿಕೆ…!

---Advertisement---

 

 

ಚಿಕ್ಕಮಗಳೂರು: ಯುವತಿಯ ಅಶ್ಲೀಲ ಫೋಟೋಗಳನ್ನು ಆಕೆಯ ತಾಯಿಗೆ ಕಳುಹಿಸಿ ಹಣಕ್ಕೆ ಬೇಡಿಕೆ ಇಟ್ಟಿರುವ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ಲಕ್ಕವಳ್ಳಿ ಭಾಗದಲ್ಲಿ ಬೆಳಕಿಗೆ ಬಂದಿದೆ. ಲಕ್ಕವಳ್ಳಿ ಮೂಲದ ಮಹಿಳೆಯೊಬ್ಬರ 25 ವರ್ಷದ ಮಗಳ ಅಶ್ಲೀಲ ಫೋಟೋಗಳನ್ನು ಕಳುಹಿಸಿದ ಆರೋಪಿಯು, ಹಣ ನೀಡದಿದ್ದರೆ ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ. ಆರೋಪಿಯನ್ನು ಬೆಂಗಳೂರು ಮೂಲದ ಯೋಗೀಶ್ ಎಂದು ಗುರುತಿಸಲಾಗಿದೆ. ಮಹಿಳೆಯ ಮೊಬೈಲ್‌ಗೆ ಅಶ್ಲೀಲ ಫೋಟೋಗಳನ್ನು ಕಳುಹಿಸಿದ ಯೋಗೀಶ್, ನಂತರ ರಾತ್ರಿ ವೇಳೆಯಲ್ಲಿಯೂ ನಿರಂತರವಾಗಿ ಕರೆ ಮಾಡಿ ಹಣ ನೀಡುವಂತೆ ಒತ್ತಡ ಹೇರಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಹಣ ನೀಡದಿದ್ದರೆ ಮಗಳ ಮಾನಹಾನಿ ಮಾಡುವುದಾಗಿ ಬೆದರಿಕೆ ಹಾಕಿ ಮಾನಸಿಕ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ. ಈ ಕುರಿತು ನೊಂದ ಮಹಿಳೆ ಚಿಕ್ಕಮಗಳೂರು ಸೈಬರ್, ಆರ್ಥಿಕ ಮತ್ತು ಮಾದಕ ದ್ರವ್ಯ (CEN) ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯ ಪತ್ತೆಗಾಗಿ ತನಿಖೆ ಆರಂಭಿಸಿದ್ದಾರೆ.

Join WhatsApp

Join Now

Join Telegram

Join Now

और पढ़ें

ಚಿಕ್ಕಮಗಳೂರು: ವಿದ್ಯುತ್ ವಾಟರ್ ಹೀಟರ್‌ನಿಂದ ಅವಘಡ – ವಿದ್ಯುತ್ ಶಾಕ್‌ಗೆ 8 ವರ್ಷದ ಬಾಲಕ ಬಲಿ!

ಕಾಫಿ ಮಂಡಳಿ ಅಧ್ಯಕ್ಷರಾಗಿ ದಿನೇಶ್ ದೇವವೃಂದ ಅವರೇ ಮುಂದುವರಿಯಲಿ ಕೇಂದ್ರ ಸರ್ಕಾರಕ್ಕೆ ಹೊಲದಗದ್ದೆ ಗಿರೀಶ್ ಒತ್ತಾಯ

ಕಾಫಿ ಮಂಡಳಿ ಅಧ್ಯಕ್ಷರಾಗಿ ದಿನೇಶ್ ದೇವವೃಂದ ಅವರನ್ನೇ ಮುಂದುವರಿಸಲು ಒತ್ತಾಯ ಚಿಕ್ಕಮಗಳೂರು: ಭಾರತೀಯ ಕಾಫಿ ಮಂಡಳಿಗೆ ಹೊಸ ರೂಪ ನೀಡುವ ಮೂಲಕ ಕಾಫಿ ಉದ್ಯಮದ ಅಭಿವೃದ್ಧಿಗೆ ಶ್ರಮಿಸಿರುವ ಕಾಫಿ ಮಂಡಳಿ ಅಧ್ಯಕ್ಷ ದಿನೇಶ್ ದೇವವೃಂದ ಅವರ ಅಧಿಕಾರಾವಧಿ ನವೆಂಬರ್‌ನಲ್ಲಿ ಮುಕ್ತಾಯಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಮುಂದಿನ ಅವಧಿಗೂ ದಿನೇಶ್ ದೇವವೃಂದ ಅವರನ್ನೇ ಅಧ್ಯಕ್ಷರಾಗಿ ಮುಂದುವರಿಸಬೇಕು ಎಂದು ಕಾಫಿ ಬೆಳೆಗಾರರ ಹಿತರಕ್ಷಣಾ ವೇದಿಕೆ ಮುಖಂಡ ಹೊಲದಗದ್ದೆ ಗಿರೀಶ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.