ಮೂಡಿಗೆರೆ: ಕಾಫಿನಾಡಿನ ಮೂಡಿಗೆರೆ ಪಟ್ಟಣದಲ್ಲಿ ಲವ್ ಜಿಹಾದ್ ಎಂಬ ಆರೋಪವೊಂದು ಕೇಳಿ ಬಂದಿದೆ. ಪಟ್ಟಣದಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿರುವ ಮುಸ್ಲಿಂ ಸಮುದಾಯದ ಅಪ್ರಾಪ್ತ ಯುವಕ ಮತ್ತು ಎಸ್‌ಎಸ್‌ಎಲ್‌ಸಿ ಓದುತ್ತಿರುವ ಹಿಂದೂ ಸಮುದಾಯದ ಅಪ್ರಾಪ್ತ ಬಾಲಕಿ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದ್ದು, ಇಬ್ಬರೂ ಬೇರೆ ಬೇರೆ ಸಮುದಾಯಕ್ಕೆ ಸೇರಿದವರಾಗಿವುದರಿಂದ, ಅವರ ಪ್ರೇಮದ ವಿಚಾರ ತಿಳಿದ ಹಿಂದೂ ಸಂಘಟನೆಯ ಕಾರ್ಯಕರ್ತರು ಯುವಕನ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವಕ ನೀಡಿದ ದೂರಿನ ಮೇರೆಗೆ ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಮೂವರು ಹಿಂದೂ ಸಂಘಟನೆ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಘಟನೆಯ ಬೆನ್ನಲ್ಲೇ ಬಾಲಕಿಯ ತಂದೆ ಕೂಡ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದು, ತನ್ನ ಮಗಳ ವಿಚಾರದಲ್ಲಿ ಯುವಕನ ವರ್ತನೆಯನ್ನು ಖಂಡಿಸಿ ದೂರು ನೀಡಿದ್ದಾರೆ. ಈ ದೂರಿನನ್ವಯ ಪೊಲೀಸರು ಅಪ್ರಾಪ್ತ ಮುಸ್ಲಿಂ ಯುವಕನ ವಿರುದ್ಧ ಜೆಜೆ ಕಾಯ್ದೆಯಡಿ (Juvenile Justice Act) ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.














Leave a Reply