🏠 Home ದೇಶ ಜಿಲ್ಲಾ ಸುದ್ದಿ ತಾಲ್ಲೂಕು ರಾಜ್ಯ ರಾಜಕೀಯ  ಆರೋಗ್ಯ  ಕ್ರೈಮ್  ಪ್ರವಾಸ ಶಿಕ್ಷಣ

 

Breaking News
---Advertisement---
 

ಪರೀಕ್ಷೆಯಲ್ಲಿ ಫೇಲಾಗುವ ಭಯಕ್ಕೆ ನರ್ಸಿಂಗ್ ವಿದ್ಯಾರ್ಥಿ ಆತ್ಮಹತ್ಯೆ?

---Advertisement---

 

 

ಚಿಕ್ಕಮಗಳೂರು: ಪರೀಕ್ಷೆಯಲ್ಲಿ ಅನುತ್ತೀರ್ಣನಾಗುವ ಭಯದಿಂದ ಮನನೊಂದಿದ್ದ ಎನ್ನಲಾದ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ನಗರದಲ್ಲಿ ಬೆಳಕಿಗೆ ಬಂದಿದೆ.

ಮೃತ ವಿದ್ಯಾರ್ಥಿಯನ್ನು ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ತರುವೆ ಗ್ರಾಮದ ರಕ್ಷಿತ್ (19) ಎಂದು ಗುರುತಿಸಲಾಗಿದೆ. ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನಲ್ಲಿ ಬಿಎಸ್ಸಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದ ರಕ್ಷಿತ್, ನವೆಂಬರ್ 7ರಂದು ಚಿಕ್ಕಮಗಳೂರಿನ ಸರ್ಕಾರಿ ವೃತ್ತಿಪರ ಕಾಲೇಜಿನ ಬಾಲಕರ ನಿಲಯದಿಂದ ನಾಪತ್ತೆಯಾಗಿದ್ದನು.

ಈ ಸಂಬಂಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು. ಇದೀಗ ನಗರದ ಹೊರವಲಯದಲ್ಲಿರುವ ಜಿಲ್ಲಾ ಪಂಚಾಯಿತಿ ಸಮೀಪದ ನಿರ್ಜನ ಪ್ರದೇಶದಲ್ಲಿ ರಕ್ಷಿತ್‌ನ ಶವ ಪತ್ತೆಯಾಗಿದೆ.

ಪರೀಕ್ಷೆಯಲ್ಲಿ ಫೇಲಾಗುತ್ತೇನೆ ಎಂದು ರಕ್ಷಿತ್ ತನ್ನ ಸ್ನೇಹಿತನ ಬಳಿ ಹೇಳಿಕೊಂಡಿದ್ದ ಎನ್ನಲಾಗಿದೆ. ಇದೇ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಆದರೆ ಆತ್ಮಹತ್ಯೆಗೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.ಚಿಕ್ಕಮಗಳೂರು ನಗರ ಠಾಣೆಯ ಪ್ರಕರಣ ದಾಖಲಾಗಿದೆ.

  

Join WhatsApp

Join Now

Join Telegram

Join Now

और पढ़ें