ಹಾಸನ ಜಿಲ್ಲೆಯಲ್ಲಿ ನಕಲಿ ಕ್ಲಿನಿಕ್ ನಡೆಸುತ್ತಿದ್ದ ಆರೋಪದ ಮೇಲೆ ಆರೋಗ್ಯ ಇಲಾಖೆ ಅಧಿಕಾರಿಗಳು ದಿಡೀರ್ ದಾಳಿ ನಡೆಸಿದ್ದಾರೆ.
ಅರಕಲಗೂಡು ತಾಲೂಕಿನ ಮಲ್ಲಿಪಟ್ಟಣದಲ್ಲಿ ಈ ಘಟನೆ ನಡೆದಿದ್ದು, ಟಿಹೆಚ್ಒ ಪುಷ್ಪಲತಾ ಅವರ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಕಾರ್ಯಾಚರಣೆ ನಡೆಸಿತು. ಲಕ್ಷ್ಮಣ್ ಎಂಬುವರ ಹೆಸರಿನಲ್ಲಿ ಅನಧಿಕೃತವಾಗಿ ಕ್ಲಿನಿಕ್ ನಡೆಸಲಾಗುತ್ತಿತ್ತು ಎಂದು ತಿಳಿದುಬಂದಿದೆ.
ಡಾ. ವಿಶ್ವನಾಥ್ ಎಂಬಾತ ಹಲವು ವರ್ಷಗಳಿಂದ ಬೇರೊಬ್ಬರ ಹೆಸರಿನಲ್ಲಿ ಕ್ಲಿನಿಕ್ ತೆರೆಯಿಸಿ ವೈದ್ಯಕೀಯ ಸೇವೆ ನೀಡುತ್ತಿರುವುದಾಗಿ ಆರೋಪಿಸಲಾಗಿದೆ. ನಕಲಿ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆದೇಶ ಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ದಾಳಿಯ ವೇಳೆ ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿದ್ದ ಕ್ಲಿನಿಕ್ ಅನ್ನು ಬಂದ್ ಮಾಡಲಾಗಿದ್ದು, ಕ್ಲಿನಿಕ್ಕಿಗೆ ಬೀಗ ಜಡಿಸಲಾಗಿದೆ. ಈ ಸಂಬಂಧ ಹೆಚ್ಚಿನ ತನಿಖೆಯನ್ನು ಅಧಿಕಾರಿಗಳು ಮುಂದುವರೆಸಿದ್ದಾರೆ.
ಈ ಘಟನೆ ಸ್ಥಳೀಯರಲ್ಲಿ ಆತಂಕವನ್ನು ಉಂಟುಮಾಡಿದ್ದು, ನಕಲಿ ವೈದ್ಯಕೀಯ ಸೇವೆಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.















Leave a Reply