ವಿದ್ಯುತ್ ಖಾಸಗೀಕರಣ ನೀತಿಗೆ ವಿರೋಧ; ಮೆಸ್ಕಾಂ ಕಚೇರಿ ಎದುರು ಪ್ರತಿಭಟನೆ

Spread the love

 

 

ಚಿಕ್ಕಮಗಳೂರು: ಕೇಂದ್ರ ಸರ್ಕಾರದ ವಿದ್ಯುತ್ ಖಾಸಗೀಕರಣ ನೀತಿಯನ್ನು ವಿರೋಧಿಸಿ ಚಿಕ್ಕಮಗಳೂರು ನಗರದ ಮೆಸ್ಕಾಂ ಕಚೇರಿ ಎದುರು ಸಿಬ್ಬಂದಿ ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಬೃಹತ್ ಪ್ರತಿಭಟನೆ ನಡೆಸಿದರು. ಸರ್ಕಾರದ ಈ ನಿರ್ಧಾರವು ಜನಸಾಮಾನ್ಯರ ಮೇಲೆ ಆರ್ಥಿಕ ಹೊರೆಯಾಗುವುದಲ್ಲದೆ, ನೌಕರರ ಹಿತಾಸಕ್ತಿಗೆ ವಿರುದ್ಧವಾಗಿದೆ ಎಂದು ಘೋಷಣೆಗಳನ್ನು ಕೂಗುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ವಿದ್ಯುತ್ ವಲಯವನ್ನು ಖಾಸಗಿ ಕಂಪನಿಗಳ ಕೈಗೆ ಒಪ್ಪಿಸುವುದರಿಂದ ರೈತರಿಗೆ ಸಿಗುವ ಉಚಿತ ವಿದ್ಯುತ್ ಹಾಗೂ ಗ್ರಾಹಕರಿಗೆ ಸಿಗುವ ಸಬ್ಸಿಡಿ ಸೌಲಭ್ಯಗಳು ಕಡಿತಗೊಳ್ಳುವ ಆತಂಕವಿದೆ ಎಂದು ಪ್ರತಿಭಟನಾಕಾರರು ಎಚ್ಚರಿಸಿದರು. ಅಲ್ಲದೇ ಸಾರ್ವಜನಿಕ ಆಸ್ತಿಯಾಗಿರುವ ವಿದ್ಯುತ್ ಇಲಾಖೆಯನ್ನು ಖಾಸಗೀಕರಣಗೊಳಿಸುವ ಪ್ರಯತ್ನವನ್ನು ಕೂಡಲೇ ಕೈಬಿಡಬೇಕೆಂದು ಒತ್ತಾಯಿಸಿದರು.

Leave a Reply

Your email address will not be published. Required fields are marked *