🏠 Home ದೇಶ ಜಿಲ್ಲಾ ಸುದ್ದಿ ತಾಲ್ಲೂಕು ರಾಜ್ಯ ರಾಜಕೀಯ  ಆರೋಗ್ಯ  ಕ್ರೈಮ್  ಪ್ರವಾಸ ಶಿಕ್ಷಣ

 

Breaking News
---Advertisement---
 

ಕಸ್ತೂರಿ ರಂಗನ್ ವರದಿ ಜಾರಿಗೆ ಆಕ್ರೋಶ: ಬಾಳೆಹೊನ್ನೂರು ಸಂಪೂರ್ಣ ಸ್ತಬ್ಧ, ರಸ್ತೆಗಿಳಿದು ಮಲೆನಾಡಿಗರ ಪ್ರತಿಭಟನೆ

---Advertisement---

 

 

ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್. ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ಕಸ್ತೂರಿ ರಂಗನ್ ವರದಿ ವಿರುದ್ಧದ ಜನಾಕ್ರೋಶ ಭುಗಿಲೆದ್ದಿದೆ. ವರದಿ ಜಾರಿಯನ್ನು ವಿರೋಧಿಸಿ ಕರೆ ನೀಡಲಾಗಿದ್ದ ಬಂದ್‌ಗೆ ಪಟ್ಟಣದಲ್ಲಿ ವ್ಯಾಪಕ ಜನಬೆಂಬಲ ವ್ಯಕ್ತವಾಗಿದ್ದು, ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ವರ್ತಕರು ಸ್ವಯಂಪ್ರೇರಿತರಾಗಿ ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡಿ ಪ್ರತಿಭಟನೆಗೆ ಬೆಂಬಲ ಸೂಚಿಸಿದರೆ, ರಸ್ತೆಗಿಳಿಯದ ವಾಹನಗಳಿಂದಾಗಿ ಇಡೀ ಊರು ಬಿಕೋ ಎನ್ನುತ್ತಿದೆ.

ಸ್ಥಳೀಯ ಸಂಘಟನೆಗಳು ಹಾಗೂ ಮಲೆನಾಡಿನ ರೈತರ ನೇತೃತ್ವದಲ್ಲಿ ನಡೆದ ಬೃಹತ್ ಪ್ರತಿಭಟನಾ ಮೆರವಣಿಗೆಯಲ್ಲಿ ಶೃಂಗೇರಿ, ಕೊಪ್ಪ ಮತ್ತು ಎನ್.ಆರ್. ಪುರ ಭಾಗದ ನೂರಾರು ಮಂದಿ ಪಾಲ್ಗೊಂಡಿದ್ದರು. ಬಾಳೆಹೊನ್ನೂರಿನ ಪ್ರಮುಖ ರಸ್ತೆಗಳಲ್ಲಿ ಸಾಗಿದ ಮೆರವಣಿಗೆಯಲ್ಲಿ ಸರಕಾರ ಹಾಗೂ ವರದಿಯ ಪರವಾಗಿರುವ ಪರಿಸರವಾದಿಗಳ ಧೋರಣೆ ವಿರುದ್ಧ ಪ್ರತಿಭಟನಾಕಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಮಲೆನಾಡಿನ ಜನರ ಅಸ್ತಿತ್ವ ಮತ್ತು ಕೃಷಿಕರ ಬದುಕಿಗೆ ಮಾರಕವಾಗಿರುವ ಈ ವರದಿಯನ್ನು ಸಂಪೂರ್ಣವಾಗಿ ಕೈಬಿಡದಿದ್ದರೆ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸುವುದಾಗಿ ಪ್ರತಿಭಟನಾಕಾರರು ಈ ಸಂದರ್ಭದಲ್ಲಿ ಎಚ್ಚರಿಕೆ ನೀಡಿದ್ದಾರೆ.

Join WhatsApp

Join Now

Join Telegram

Join Now

और पढ़ें