मौसम क्रिकेट ऑपरेशन सिंदूर क्रिकेट स्पोर्ट्स बॉलीवुड जॉब - एजुकेशन बिजनेस लाइफस्टाइल देश विदेश राशिफल आध्यात्मिक अन्य
---Advertisement---

ಟಿಪ್ಪು ಕಟೌಟ್‌ಗೆ ಪಾಕ್ ಹಾಡು – ತಿರಂಗಾ ಯಾತ್ರೆ ಮುಂದೂಡಿಕೆ

---Advertisement---

 

 

ಟಿಪ್ಪು ಕಟೌಟ್‌ಗೆ ಪಾಕಿಸ್ತಾನಿ ಹಾಡು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರು ನಗರದಲ್ಲಿ ಹಿಂದೂ ಹಿತರಕ್ಷಣಾ ವೇದಿಕೆ ಹಮ್ಮಿಕೊಂಡಿದ್ದ ತಿರಂಗಾ ಯಾತ್ರೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ.

ತಿರಂಗಾ ಯಾತ್ರೆಗೆ ಪೊಲೀಸರು ಅನುಮತಿ ನಿರಾಕರಿಸಿದ ಹಿನ್ನೆಲೆಯಲ್ಲಿ ಯಾತ್ರೆಯನ್ನು ಮುಂದೂಡಿರುವುದಾಗಿ ಹಿಂದೂ ಹಿತರಕ್ಷಣಾ ವೇದಿಕೆ ತಿಳಿಸಿದೆ.

ಹಿಂದೂ ಸಂಘಟನೆಗಳ ಬೇಡಿಕೆಗಳನ್ನು ವಾರದೊಳಗೆ ಈಡೇರಿಸುವುದಾಗಿ ಪೊಲೀಸರು ಭರವಸೆ ನೀಡಿದ ಹಿನ್ನೆಲೆಯಲ್ಲಿ ಸದ್ಯಕ್ಕೆ ಹೋರಾಟವನ್ನು ಮುಂದೂಡಲಾಗಿದೆ.

ಪಾಕಿಸ್ತಾನಿ ಹಾಡನ್ನು ಹಾಕಿದವರು ಮಾತ್ರವಲ್ಲದೆ, ಅದನ್ನು ಶೇರ್ ಹಾಗೂ ಲೈಕ್ ಮಾಡಿದವರ ವಿರುದ್ಧವೂ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಂಘಟನೆಗಳು ಆಗ್ರಹಿಸಿವೆ.

ದೇಶದ್ರೋಹದ ಕೃತ್ಯಕ್ಕೆ ಸಂಬಂಧಿಸಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟ ತೀವ್ರಗೊಳಿಸುವುದಾಗಿ ಹಾಗೂ ಬೃಹತ್ ತಿರಂಗಾ ಯಾತ್ರೆ ನಡೆಸುವುದಾಗಿ ಹಿಂದೂ ಹಿತರಕ್ಷಣಾ ವೇದಿಕೆ ಎಚ್ಚರಿಕೆ ನೀಡಿದೆ.

Join WhatsApp

Join Now

Join Telegram

Join Now

Leave a Comment