ರಾಜ್ಯದಲ್ಲಿ 30 ಗೋಶಾಲೆ ನಿರ್ಮಾಣ ಸಚಿವ ಪ್ರಭು ಚೌವ್ಹಾಣ್
1 min readಚಿಕ್ಕಮಗಳೂರು: ರಾಜ್ಯದಲ್ಲಿ 30 ಗೋಶಾಲೆ ನಿರ್ಮಾಣವಾಗುತ್ತಿದ್ದು ಮುಂದಿನ ದಿನಗಳಲ್ಲಿ 70 ಗೋಶಾಲೆಗಳನ್ನು ನಿರ್ಮಾಣ ಮಾಡಲಾಗುವುದು ಎಂದು ಪಶು ಸಂಗೋಪನಾ ಇಲಾ ಖೆ ಸಚಿವ ಪ್ರಭು ಚೌವ್ಹಾಣ್ ತಿಳಿಸಿದರು.ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲ್ಲೂಕು ಎಮ್ಮೆದೊಡ್ಡಿ ಗ್ರಾಮದಲ್ಲಿ ನಿರ್ಮಿಸಲಾಗಿರುವ ಸರ್ಕಾರಿ ಗೋಶಾಲೆಯನ್ನು ಉದ್ಘಾಟಿಸಿ ನಂತರ ಸುದ್ದಿಗಾರರ ಜೊತೆ ಮಾತನಾಡಿದರು.ಪ್ರತೀ ಜಿಲ್ಲೆಗಳಲ್ಲಿ ಗೋಮಾಳವನ್ನು ಆಯ್ಕೆ ಮಾಡಿಕೊಂಡು ಗೋಶಾಲೆಗಳನ್ನು ನಿರ್ಮಾಣ ಮಾಡಲಾಗುವುದು ಎಂದ ಅವರು ರಾಜ್ಯ ಸರ್ಕಾರ ಪ್ರಾಣಿ ಸಾಕಾಣಿಕ ಕೇಂದ್ರ ಪಶು ಸಂಜೀ ವಿನಿ ಯೋಜನೆ ಜಾರಿಗೊಳಿಸಿದೆ ಎಂದರು.
ರಾಜ್ಯದಲ್ಲಿ ಮೊದಲ ಗೋಶಾಲೆಯನ್ನು ಲೋಕಾರ್ಪಣೆಗೊಳಿಸಿದ್ದು, ತುಂಬ ಸಂತೋಷವಾಗಿ ದ್ದು, ರೈತರಿಗೆ ಸರ್ಕಾರದಿಂದ ಎಲ್ಲಾ ಸೌಲಭ್ಯಗಳನ್ನು ನೀಡಲಾಗುವುದು ಎಂದು ತಿಳಿಸಿದರು.
ಆತ್ಮ ನಿರ್ಭರ ಗೋಶಾಲೆ ನಿರ್ಮಾಣ ಮಾಡುವ ದೃಷ್ಟಿಯಿಂದ ಉತ್ತರ ಪ್ರದೇಶ ಹಾಗೂ ಗುಜರಾತ್ ರಾಜ್ಯಗಳಿಗೆ ಭೇಟಿನೀಡಿ ಅಧ್ಯಯನ ಮಾಡಲಾಗಿದೆ. ಆತ್ಮ ನಿರ್ಭರ ಗೋ ಶಾಲೆ ಆರಂಭವಾಗಲಿದೆ ಎಂದರು.ಚಿಕ್ಕಮಗಳೂರು ಜಿಲ್ಲೆ ಪಶುಪಾಲನಾ ಇಲಾಖೆಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿoದ ಏಜೆಸ್ಸಿಯವರು 10ಸಾವಿರ ರೂ. ಹಣ ಪಡೆ ಯುತ್ತಿರುವ ಬಗ್ಗೆ ದೂರುಗಳು ಕೇಳಿ ಬಂದಿದ್ದು, ಈ ಸಂಬoಧ ತನಿಖೆ ನಡೆಸಲಾಗುವುದು ಎಂದು ತಿಳಿಸಿದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g