ಕಾಂಗ್ರೆಸ್ನಿಂದ ಬಿಜೆಪಿಗೆ ಬಂದಿದ್ದ ಪ್ರಮೋದ್ಗೆ ಕೊನೆಗೂ ಹೈಕಮಾಂಡ್ನಿಂದ ಉನ್ನತ ಸ್ಥಾನಮಾನ – ನಮೋ ಅಂದ್ರೆ ನಮಗೆ ಮೋಸ ಎಂದಿದ್ದ ನಾಯಕನಿಗೆ ಮಹತ್ವದ ಜವಾಬ್ದಾರಿ!
ನವದೆಹಲಿ : ಬಿಜೆಪಿ ಒಬಿಸಿ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಕರ್ನಾಟಕದ ಪ್ರಮೋದ್ ಮಧ್ವರಾಜ್ ಅವರನ್ನು ನೇಮಕ ಮಾಡಲಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರು ಈ ಕುರಿತು ಆದೇಶ ಹೊರಡಿಸಿದ್ದಾರೆ.
ಕರ್ನಾಟಕದ ಪ್ರಮೋದ್ ಮಧ್ವರಾಜ್ ಅವರೊಂದಿಗೆ ದೆಹಲಿಯ ಗಜೇಂದ್ರ ಯಾದವ್ ಹಾಗೂ ಛತ್ತೀಸ್ಗಢದ ಲಲಿತ್ ಚಂದ್ರಕರ್ ಅವರನ್ನೂ ಒಬಿಸಿ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾಗಿ ನೇಮಕ ಮಾಡಲಾಗಿದೆ.
ಕಾಂಗ್ರೆಸ್ನಿಂದ ರಾಜಕೀಯ ಜೀವನ ಆರಂಭ
ಪ್ರಮೋದ್ ಮಧ್ವರಾಜ್ ಅವರು 2013ರ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಭ್ಯರ್ಥಿಯಾಗಿ ಉಡುಪಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ, ಸುಮಾರು 39 ಸಾವಿರ ಮತಗಳ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದರು.
ನಂತರ 2016ರಲ್ಲಿ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಮೀನುಗಾರಿಕೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸ್ವತಂತ್ರ ಉಸ್ತುವಾರಿ ಸಚಿವರಾಗಿ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.
ಆದರೆ 2018ರ ವಿಧಾನಸಭಾ ಚುನಾವಣೆಯಲ್ಲಿ ಸೋಲು ಅನುಭವಿಸಿದ ಬಳಿಕ ಅವರ ರಾಜಕೀಯ ಹಾದಿಯಲ್ಲಿ ಮಹತ್ವದ ಬದಲಾವಣೆಯಾಯಿತು. 2022ರ ಮೇ ತಿಂಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾದರು.
ಟಿಕೆಟ್ ಆಕಾಂಕ್ಷಿಯಾಗಿದ್ದ ನಾಯಕನಿಗೆ ಕೊನೆಗೂ ಉನ್ನತ ಸ್ಥಾನಮಾನ
ಬಿಜೆಪಿ ಸೇರ್ಪಡೆಯಾದ ಬಳಿಕ 2023ರ ವಿಧಾನಸಭಾ ಚುನಾವಣೆ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಆಕಾಂಕ್ಷಿಯಾಗಿದ್ದ ಪ್ರಮೋದ್ ಮಧ್ವರಾಜ್ ಅವರಿಗೆ ಟಿಕೆಟ್ ದೊರೆತಿರಲಿಲ್ಲ.
ಇದರಿಂದಾಗಿ ಬಿಜೆಪಿಯಲ್ಲಿ ಅವರಿಗೆ ಸೂಕ್ತ ಸ್ಥಾನಮಾನ ಸಿಗುತ್ತಿಲ್ಲ ಎಂಬ ಚರ್ಚೆಗಳು ಸ್ಥಳೀಯ ರಾಜಕೀಯ ವಲಯದಲ್ಲಿ ಕೇಳಿಬಂದಿದ್ದವು. ಆದರೆ ಪ್ರಮೋದ್ ಮಧ್ವರಾಜ್ ಯಾವುದೇ ಗಡಿಬಿಡಿ ಮಾಡದೆ ಪಕ್ಷದಲ್ಲಿ ಕಾಯುತ್ತಿದ್ದರು.
ಇದೀಗ ಸುದೀರ್ಘ ಕಾಯುವಿಕೆಯ ಬಳಿಕ ಬಿಜೆಪಿ ಹೈಕಮಾಂಡ್ ಅವರಿಗೆ ರಾಷ್ಟ್ರೀಯ ಮಟ್ಟದ ಮಹತ್ವದ ಜವಾಬ್ದಾರಿ ನೀಡಿದೆ. ಒಬಿಸಿ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗà³




