मौसम क्रिकेट ऑपरेशन सिंदूर क्रिकेट स्पोर्ट्स बॉलीवुड जॉब - एजुकेशन बिजनेस लाइफस्टाइल देश विदेश राशिफल आध्यात्मिक अन्य
---Advertisement---

ಮದುವೆ ಮುಗಿಸಿ ಹಿಂತಿರುಗುತ್ತಿದ್ದ ಖಾಸಗಿ ಬಸ್ ಪಲ್ಟಿ ಹಲವರಿಗೆ ಗಾಯ 

---Advertisement---

ಮೂಡಿಗೆರೆ ಚಾರ್ಮಾಡಿ ಘಾಟ್‌ನ ನಾಲ್ಕನೇ ತಿರುವಿನಲ್ಲಿ ರಸ್ತೆ ಅಪಘಾತ ಸಂಭವಿಸಿದ್ದು, ಮದುವೆ ಮುಗಿಸಿ ಹಿಂತಿರುಗುತ್ತಿದ್ದ ಖಾಸಗಿ ಬಸ್ ಪಲ್ಟಿಯಾದ ಪರಿಣಾಮ 20ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಧರ್ಮಸ್ಥಳದಲ್ಲಿ ಮದುವೆ ಮುಗಿಸಿಕೊಂಡು ತುಮಕೂರು ಜಿಲ್ಲೆಯ ಪಾವಗಡಕ್ಕೆ ಪ್ರಯಾಣಿಕರು ವಾಪಸ್ಸಾಗುತ್ತಿದ್ದ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಈ ದುರ್ಘಟನೆ ನಡೆದಿದೆ. ಅಪಘಾತ ನಡೆದ ಕೂಡಲೇ ಸ್ಥಳೀಯರು ರಕ್ಷಣಾ ಕಾರ್ಯಕ್ಕೆ ಧಾವಿಸಿದ್ದು, ಗಾಯಾಳುಗಳನ್ನು ಆಂಬುಲೆನ್ಸ್‌ಗಳ ಮೂಲಕ ಕಕ್ಕಿಂಜೆಯ ಕೃಷ್ಣ ಆಸ್ಪತ್ರೆ ಹಾಗೂ ಬೆಳ್ತಂಗಡಿಯ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿದ್ದಾರೆ. ಗಾಯಾಳುಗಳ ಪೈಕಿ ಕೆಲವರ ಸ್ಥಿತಿ ಅತ್ಯಂತ ಗಂಭೀರವಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ವಿಷಯ ತಿಳಿಯುತ್ತಿದ್ದಂತೆಯೇ ಬಣಕಲ್ ಮತ್ತು ಬೆಳ್ತಂಗಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಘಾಟ್‌ನ ಕಡಿದಾದ ತಿರುವಿನಲ್ಲಿ ಈ ಅವಘಡ ಸಂಭವಿಸಿದೆ. 

Join WhatsApp

Join Now

Join Telegram

Join Now

Leave a Comment