🏠 Home ದೇಶ ಜಿಲ್ಲಾ ಸುದ್ದಿ ತಾಲ್ಲೂಕು ರಾಜ್ಯ ರಾಜಕೀಯ  ಆರೋಗ್ಯ  ಕ್ರೈಮ್  ಪ್ರವಾಸ ಶಿಕ್ಷಣ

 

Breaking News
---Advertisement---
 

ಚಿಕ್ಕಮಗಳೂರು: ​ಕಾಫಿನಾಡಿನ ಸಮೀಪದಲ್ಲೇ ಕಾಡಾನೆಗಳ ಓಡಾಟ 12 ಗ್ರಾಮಗಳಲ್ಲಿ ನಿಷೇಧಾಜ್ಞೆ

---Advertisement---

 

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಕಾಡಾನೆಗಳ ಆತಂಕ ಮುಂದುವರಿದಿದ್ದು, ಇದೀಗ ನಗರದ ಸಮೀಪದಲ್ಲೇ ಆನೆಗಳು ಪ್ರತ್ಯಕ್ಷವಾಗಿರುವುದು ಜನರಲ್ಲಿ ಭೀತಿ ಹುಟ್ಟಿಸಿದೆ. ಚಿಕ್ಕಮಗಳೂರು ನಗರದ ಕೂಗಳೆತೆಯಲ್ಲಿರುವ ಮೂಗ್ತಿಹಳ್ಳಿ ಮತ್ತು ಶಿರಗುಂದ ವ್ಯಾಪ್ತಿಯಲ್ಲಿ ಕಾಡಾನೆಗಳು ಸಂಚರಿಸುತ್ತಿದ್ದು, ಸುಮಾರು ಐದು ಕಿಲೋಮೀಟರ್ ವ್ಯಾಪ್ತಿಯಲ್ಲಿ ಈ ಆನೆಗಳು ಬೀಡುಬಿಟ್ಟಿವೆ. ಈ ಹಿನ್ನೆಲೆಯಲ್ಲಿ ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಅರಣ್ಯ ಇಲಾಖೆ ಸಿದ್ಧತೆ ನಡೆಸಿದೆ. ​ಆನೆಗಳನ್ನು ಹಿಮ್ಮೆಟ್ಟಿಸುವ ಕಾರ್ಯಾಚರಣೆಯ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮತ್ತು ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ಚಿಕ್ಕಮಗಳೂರು ತಹಶಿಲ್ದಾರ್ ರೇಷ್ಮಾ ಅವರು ಸುತ್ತಮುತ್ತಲ 12 ಗ್ರಾಮಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ. ಈ ನಿಷೇಧಾಜ್ಞೆಯು ಫೆಬ್ರವರಿ 24ರ ಸಂಜೆ 4 ಗಂಟೆಯಿಂದ ಫೆಬ್ರವರಿ 25ರ ಬೆಳಗ್ಗೆ 8 ಗಂಟೆಯವರೆಗೆ ಜಾರಿಯಲ್ಲಿರಲಿದೆ. ಅರಣ್ಯ ಇಲಾಖೆಯ ಸಿಬ್ಬಂದಿ ಆನೆಗಳನ್ನು ಸುರಕ್ಷಿತವಾಗಿ ಕಾಡಿಗೆ ಅಟ್ಟುವ ಕಾರ್ಯದಲ್ಲಿ ನಿರತರಾಗಿದ್ದು, ಜನರು ಸಹಕರಿಸಬೇಕು ಎಂದು ವಿನಂತಿಸಲಾಗಿದೆ.

Join WhatsApp

Join Now

Join Telegram

Join Now