🏠 Home ದೇಶ ಜಿಲ್ಲಾ ಸುದ್ದಿ ತಾಲ್ಲೂಕು ರಾಜ್ಯ ರಾಜಕೀಯ  ಆರೋಗ್ಯ  ಕ್ರೈಮ್  ಪ್ರವಾಸ ಶಿಕ್ಷಣ

 

Breaking News
---Advertisement---
 

ಪ್ರತಿಭಟನೆ ವಿಕೋಪಕ್ಕೆ – ಮಹಿಳಾ ಪೇದೆಗೆ ಗಂಭೀರ ಗಾಯ

---Advertisement---

 

 

ಚಿಕ್ಕಮಗಳೂರು ತಾಲೂಕಿನ ಕಡಬಗೆರೆಯಲ್ಲಿ ಕಾಡಾನೆ ದಾಳಿಗೆ ಮಹಿಳೆ ಬಲಿಯಾದ ಘಟನೆಗೆ ಸಂಬಂಧಿಸಿದಂತೆ ನಡೆದ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಈ ವೇಳೆ ನಡೆದ ಕಲ್ಲು ತೂರಾಟದಲ್ಲಿ ಕರ್ತವ್ಯ ನಿರತ ಮಹಿಳಾ ಪೊಲೀಸ್ ಪೇದೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

​ಪ್ರತಿಭಟನೆಯ ಬಂದೋಬಸ್ತ್‌ಗಾಗಿ ನಿಯೋಜನೆಗೊಂಡಿದ್ದ ಮಹಿಳಾ ಪೇದೆ ರೇಖಾ ಅವರ ಕಿವಿಯ ಭಾಗಕ್ಕೆ ಕಲ್ಲು ತಗುಲಿದ್ದು, ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯದ ತೀವ್ರತೆಯಿಂದಾಗಿ ಅವರಿಗೆ ಆರು ಹೊಲಿಗೆಗಳನ್ನು ಹಾಕಲಾಗಿದ್ದು, ಸದ್ಯ ವೈದ್ಯಕೀಯ ಚಿಕಿತ್ಸೆ ಮುಂದುವರಿದಿದೆ. ಪ್ರತಿಭಟನಾಕಾರರು ಪೊಲೀಸರ ಮೇಲೆ ಕಲ್ಲೆಸೆತ ಆರಂಭಿಸುತ್ತಿದ್ದಂತೆ ಪರಿಸ್ಥಿತಿ ಕೈಮೀರಿ ಹೋಗಿದ್ದು, ಗುಂಪನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಬೇಕಾಯಿತು. ಕಾಡಾನೆ ಹಾವಳಿ ವಿರುದ್ಧದ ಜನಾಕ್ರೋಶವು ಪೊಲೀಸರು ಮತ್ತು ಸಾರ್ವಜನಿಕರ ನಡುವಿನ ಸಂಘರ್ಷಕ್ಕೆ ಕಾರಣವಾಗಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು

Join WhatsApp

Join Now

Join Telegram

Join Now

Leave a Comment