ಮೂಡಿಗೆರೆ: ದ್ವಿಚಕ್ರ ವಾಹನ ಹಾಗೂ ಸಾರಿಗೆ ಬಸ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟಿ ಸವಾರನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಸಂಭವಿಸಿದೆ.
ಮೂಡಿಗೆರೆ ಮಾರ್ಗವಾಗಿ ಸಂಚರಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಸ್ಕೂಟಿ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ತೀವ್ರ ರಕ್ತಸ್ರಾವದಿಂದ ಕಮ್ಮರಗೋಡು ಮೂಲದ ಸವಾರ ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಗೋಣಿಬೀಡು ಸಮೀಪದ ಕಸ್ಕೇಬೈಲ್ ಮುಖ್ಯರಸ್ತೆಯಲ್ಲಿ ಈ ಅವಘಡ ನಡೆದಿದೆ.
ಘಟನಾ ಸ್ಥಳಕ್ಕೆ ಗೋಣಿಬೀಡು ಠಾಣಾ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಆಸ್ಪತ್ರೆಗೆ ರವಾನಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.





