🏠 Home ದೇಶ ಜಿಲ್ಲಾ ಸುದ್ದಿ ತಾಲ್ಲೂಕು ರಾಜ್ಯ ರಾಜಕೀಯ  ಆರೋಗ್ಯ  ಕ್ರೈಮ್  ಪ್ರವಾಸ ಶಿಕ್ಷಣ

 

Breaking News
---Advertisement---
 

ಮದುವೆ ಸಂಭ್ರಮದ ಮನೆಯಲ್ಲಿ ಸೂತಕದ ಛಾಯೆ: ವಿಷ ಸೇವಿಸಿದ್ದ ಯುವಕ ಸಾವು

---Advertisement---

HIGHLIGHTS

 

  ಒಂದು ತಿಂಗಳ ಹಿಂದಷ್ಟೇ ಮದುವೆ ನಿಶ್ಚಯವಾಗಿ ನಿಶ್ಚಿತಾರ್ಥವಾಗಿದ್ದ ಯುವಕ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಮಧುಗುಂಡಿ ಗ್ರಾಮದಲ್ಲಿ ನಡೆದಿದೆ. ಮೃತ ಯುವಕನನ್ನ 25 ವರ್ಷದ ಅಭಿಷೇಕ್ ಎಂದು ಗುರುತಿಸಲಾಗಿದೆ. ಮೃತ ಅಭಿಷೇಕ್ ಗೆ ಕಳೆದ ತಿಂಗಳಷ್ಟೆ ಮದುವೆ ನಿಶ್ಚಯವಾಗಿದ್ದು ಮುಂದಿನ ತಿಂಗಳು 25ಕ್ಕೆ ಮದುವೆ ದಿನಾಂಕ ಕೂಡ ನಿಗದಿಯಾಗಿತ್ತು. ಎರಡೂ ಮನೆಯವರು ಮದುವೆ ಸಂಭ್ರಮದಲ್ಲಿ ಮದುವೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ರೆ ಅಭಿಷೇಕ್ 4 ದಿನದ ಹಿಂದೆ ಮನೆಯಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದನು. ಕೂಡಲೇ ಆತನನ್ನ ಮೂಡಿಗೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ರವಾನಿಸಲಾಗಿತ್ತು. ಆದರೆ, ನಾಲ್ಕು ದಿನದ ನಿರಂತರ ಚಿಕಿತ್ಸೆ ಬಳಿಕವೂ ಆತ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾನೆ. ತಿಂಗಳಲ್ಲಿ ಮದುವೆ ಇದ್ದ ಮನೆಯಲ್ಲೀಗ ಸೂತಕದ ಛಾಯೆ ಆವರಿಸಿದೆ. ಅಭಿಷೇಕ್ ಸಾವಿಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಎದೆಮಟ್ಟದ ಮಗನನ್ನ ಕಳೆದುಕೊಂಡ ಹೆತ್ತವರ ಆಕ್ರಂದನ ಮುಗಿಲು ಮುಟ್ಟಿದೆ. ಅತ್ತ ಹುಡುಗಿ ಮನೆಯವರು ಕೂಡ ಮಗಳ ಸ್ಥಿತಿ ನೋಡಿ ಮಮ್ಮುಲು ಮರುಗಿದ್ದಾರೆ. ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join WhatsApp

Join Now

Join Telegram

Join Now