मौसम क्रिकेट ऑपरेशन सिंदूर क्रिकेट स्पोर्ट्स बॉलीवुड जॉब - एजुकेशन बिजनेस लाइफस्टाइल देश विदेश राशिफल आध्यात्मिक अन्य
---Advertisement---

ಸ್ವಾತಂತ್ರ್ಯ ದಿನಾಚರಣೆಯಲ್ಲಿ ವಂದೇ ಮಾತರಂ ಗಾಯನ: ಕಾಂಗ್ರೆಸ್ ನಾಯಕರ ನಡವಳಿಕೆಗೆ ಜೆಡಿಎಸ್ ತೀವ್ರ ಆಕ್ಷೇಪ

---Advertisement---

 

ಕಾಂಗ್ರೆಸ್ ಪಕ್ಷದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ರಾಷ್ಟ್ರಗೀತೆ/ರಾಷ್ಟ್ರೀಯ ಗೀತೆ ‘ವಂದೇ ಮಾತರಂ’ ಗಾಯನದ ವೇಳೆ ಹಿರಿಯ ಕಾಂಗ್ರೆಸ್ ನಾಯಕರ ನಡವಳಿಕೆಗೆ ಜನತಾ ದಳ (ಜಾತ್ಯತೀತ) ರಾಷ್ಟ್ರೀಯ ವಕ್ತಾರ ಸುಧಾಕರ ಎಸ್. ಶೆಟ್ಟಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

​ಸ್ವಾತಂತ್ರ್ಯ ಚಳವಳಿಯ ತ್ಯಾಗ ಮತ್ತು ದೇಶಭಕ್ತಿಯ ಸಂಕೇತವಾಗಿರುವ ವಂದೇ ಮಾತರಂ ಗಾಯನದ ಸಂದರ್ಭದಲ್ಲಿ ನಡೆದಿರುವ ಈ ಘಟನೆ ದೇಶದ ನಾಗರಿಕರಲ್ಲಿ ತೀವ್ರ ದುಃಖ ಮತ್ತು ಬೇಸರವನ್ನು ಉಂಟುಮಾಡಿದೆ ಎಂದು ಅವರು ತಿಳಿಸಿದ್ದಾರೆ.

​ಖರ್ಗೆ ಸ್ಪಷ್ಟನೆ ನೀಡಲಿ

ಕಾರ್ಯಕ್ರಮದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ, ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ನಡುವಿನ ಸನ್ನೆ ಮತ್ತು ಸಂಭಾಷಣೆಗಳು ಗಾಯನವನ್ನು ಅಡ್ಡಿಪಡಿಸುವಂತಿವೆ ಎಂಬ ಸಾರ್ವಜನಿಕ ಅಭಿಪ್ರಾಯ ಮೂಡಿಸಿದೆ. ಈ ಕುರಿತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ದೇಶದ ಜನತೆಗೆ ಸೂಕ್ತ ವಿವರಣೆ ನೀಡಬೇಕು ಎಂದು ಶೆಟ್ಟಿ ಒತ್ತಾಯಿಸಿದ್ದಾರೆ.

ಇನ್ನು ಈ ಘಟನೆಯ ಕುರಿತು ಸ್ಪಷ್ಟನೆ ನೀಡಿರುವ ಕಾಂಗ್ರೆಸ್, ಮಲ್ಲಿಕಾರ್ಜುನ ಖರ್ಗೆಯವರಿಗೆ ಕುರ್ಚಿ ವ್ಯವಸ್ಥೆ ಮಾಡುವ ಉದ್ದೇಶದಿಂದ ಈ ಸನ್ನೆಗಳು ನಡೆದಿವೆ ಹೊರತು ಗೀತೆಗೆ ಅಪಮಾನ ಮಾಡುವ ಉದ್ದೇಶವಿರಲಿಲ್ಲ ಹಾಗೂ ಗಾಯನವನ್ನು ಪೂರ್ಣಗೊಳಿಸಲಾಗಿದೆ ಎಂದು ಸಮರ್ಥಿಸಿಕೊಂಡಿದೆ. ಆದರೆ, ಈ ವಿವರಣೆಯು ಸಾರ್ವಜನಿಕರಲ್ಲಿ ಮೂಡಿರುವ ಸಂಶಯ ಮತ್ತು ಅಸಮಾಧಾನವನ್ನು ಶಮನಗೊಳಿಸಲು ಸಾಧ್ಯವಿಲ್ಲ ಎಂದು ಸುಧಾಕರ್ ಶೆಟ್ಟಿ ತಿರುಗೇಟು ನೀಡಿದ್ದಾರೆ.

Join WhatsApp

Join Now

Join Telegram

Join Now

Leave a Comment