🏠 Home ದೇಶ ಜಿಲ್ಲಾ ಸುದ್ದಿ ತಾಲ್ಲೂಕು ರಾಜ್ಯ ರಾಜಕೀಯ  ಆರೋಗ್ಯ  ಕ್ರೈಮ್  ಪ್ರವಾಸ ಶಿಕ್ಷಣ

 

Breaking News
---Advertisement---
 

ಚೀಲಗಳಲ್ಲಿ ಗೋವಿನ ಕಳೇಬರ ತುಂಬಿ ಎಸೆದ ಪಾಪಿಗಳು! ಬೀದಿಗಿಳಿದ ಬಜರಂಗದಳ

---Advertisement---

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯ ನಡುವೆಯೂ ಗೋಹತ್ಯೆ ಪ್ರಕರಣಗಳು ಎಗ್ಗಿಲ್ಲದೆ ಮುಂದುವರಿಯುತ್ತಿದ್ದು, ಸಾರ್ವಜನಿಕರಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಕೊಪ್ಪದಿಂದ ತೀರ್ಥಹಳ್ಳಿ ಮಾರ್ಗದ ಶಿವಪುರ ರಸ್ತೆಯ ಬದಿಯಲ್ಲಿ ದುಷ್ಕರ್ಮಿಗಳು ಅಮಾನವೀಯವಾಗಿ ಗೋವಿನ ಕಳೇಬರಗಳನ್ನು ನಾಲ್ಕು ಚೀಲಗಳಲ್ಲಿ ತುಂಬಿ ಎಸೆದಿರುವುದು ಬೆಳಕಿಗೆ ಬಂದಿದೆ. ಈ ಕೃತ್ಯದ ಸುದ್ದಿ ಹರಡುತ್ತಿದ್ದಂತೆಯೇ ಆಕ್ರೋಶಗೊಂಡ ಭಜರಂಗದಳದ ಕಾರ್ಯಕರ್ತರು ಸ್ಥಳದಲ್ಲಿ ಜಮಾಯಿಸಿ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.

 

​ಕಿಡಿಗೇಡಿಗಳನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿ ಕಾರ್ಯಕರ್ತರು ಕೊಪ್ಪ-ತೀರ್ಥಹಳ್ಳಿ ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ಪ್ರತಿಭಟನೆ ನಡೆಸಿದರು. ರಸ್ತೆ ತಡೆ ನಡೆಸಿದ ಹಿನ್ನೆಲೆಯಲ್ಲಿ ಸಾರ್ವಜನಿಕ ಸಂಚಾರಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಪೊಲೀಸರು ಪ್ರತಿಭಟನಾಕಾರರ ವಿರುದ್ಧವೇ ಕ್ರಮ ಕೈಗೊಂಡಿದ್ದಾರೆ. ವಿನಯ್ ಶಿವಪುರ ಸೇರಿದಂತೆ ಹಲವು ಕಾರ್ಯಕರ್ತರ ಮೇಲೆ ಕೊಪ್ಪ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲಾಗಿದೆ. ಗೋಹತ್ಯೆ ಮಾಡಿದವರನ್ನು ಬಿಟ್ಟು ಪ್ರತಿಭಟನಾಕಾರರ ಮೇಲೆ ಪ್ರಕರಣ ದಾಖಲಿಸಿರುವುದು ಈಗ ಜಿಲ್ಲೆಯಲ್ಲಿ ಮತ್ತಷ್ಟು ವಿವಾದಕ್ಕೆ ಕಾರಣವಾಗಿದೆ.

Join WhatsApp

Join Now

Join Telegram

Join Now

Leave a Comment