🏠 Home ದೇಶ ಜಿಲ್ಲಾ ಸುದ್ದಿ ತಾಲ್ಲೂಕು ರಾಜ್ಯ ರಾಜಕೀಯ  ಆರೋಗ್ಯ  ಕ್ರೈಮ್  ಪ್ರವಾಸ ಶಿಕ್ಷಣ

 

Breaking News
---Advertisement---
 

ತಂದೆ ಮೇಲೆ ಮಗನಿಂದ ಹಲ್ಲೆ: ಕಬ್ಬಿಣದ ರಾಡ್‌ನಿಂದ ಮನಸೋ ಇಚ್ಛೆ ಥಳಿತ

---Advertisement---

HIGHLIGHTS

 

 

ಚಿಕ್ಕಮಗಳೂರು: ತಂದೆಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಕಬ್ಬಿಣದ ರಾಡ್‌ನಿಂದ ಪುತ್ರ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಚಿಕ್ಕಮಗಳೂರು ತಾಲೂಕಿನ ಕರಕನಹಳ್ಳಿಯಲ್ಲಿ ಘಟನೆ ನಡೆದಿದ್ದು, ಹಲ್ಲೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ತಂದೆ ಎಂಬುದನ್ನೂ ನೋಡದೆ ಪುತ್ರ ಮನಸೋ ಇಚ್ಛೆ ಥಳಿಸುತ್ತಿರುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ ಎನ್ನಲಾಗಿದೆ. ಹಲ್ಲೆಗೊಳಗಾದ ತಂದೆ ಕೃಷ್ಣೇಗೌಡ, ಪುತ್ರ ಯೋಗೇಶ್ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ.

ಹಲ್ಲೆ ವೇಳೆ “ಪ್ಲೀಸ್ ಬಿಡು… ಬಿಟ್ಬಿಡು” ಎಂದು ತಂದೆ ಅಂಗಲಾಚಿದರೂ ಪುತ್ರ ಹಲ್ಲೆ ನಿಲ್ಲಿಸದೆ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಘಟನೆಯ ವಿಡಿಯೋ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ತಂದೆಯ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿದ ಆರೋಪದಡಿ ಪುತ್ರ ಯೋಗೇಶ್ ವಿರುದ್ಧ ಕ್ರಮ ಕೈಗೊಂಡು ಬಂಧಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

ಈ ಸಂಬಂಧ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ,

Join WhatsApp

Join Now

Join Telegram

Join Now