🏠 Home ದೇಶ ಜಿಲ್ಲಾ ಸುದ್ದಿ ತಾಲ್ಲೂಕು ರಾಜ್ಯ ರಾಜಕೀಯ  ಆರೋಗ್ಯ  ಕ್ರೈಮ್  ಪ್ರವಾಸ ಶಿಕ್ಷಣ

 

Breaking News
---Advertisement---
 

ಕಸ್ತೂರಿ ರಂಗನ್ ವರದಿ ವಿರೋಧಿಸಿ ಶೃಂಗೇರಿ ಬಂದ್ | ಮಲೆನಾಡಿಗರಿಂದ ಬೃಹತ್ ಪ್ರತಿಭಟನೆ

---Advertisement---

ಚಿಕ್ಕಮಗಳೂರು: ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ಮಲೆನಾಡಿಗರ ಹೋರಾಟ ತೀವ್ರಗೊಂಡಿದ್ದು, ಇಂದು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕು ಸಂಪೂರ್ಣ ಬಂದ್‌ಗೆ ಕರೆ ನೀಡಲಾಗಿದೆ.

ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಶೃಂಗೇರಿ ತಾಲೂಕು ಬಂದ್ ನಡೆಯಲಿದ್ದು, ಶೃಂಗೇರಿ ರೈತ ಒಕ್ಕೂಟ, ವಿವಿಧ ರಾಜಕೀಯ ಪಕ್ಷಗಳು ಹಾಗೂ ಸಂಘ-ಸಂಸ್ಥೆಗಳು ಬಂದ್‌ಗೆ ಬೆಂಬಲ ವ್ಯಕ್ತಪಡಿಸಿವೆ. ಅಂಗಡಿ-ಮುಂಗಟ್ಟುಗಳನ್ನು ಸ್ವಯಂಪ್ರೇರಿತವಾಗಿ ಬಂದ್ ಮಾಡಿ ಹೋರಾಟಕ್ಕೆ ಬೆಂಬಲ ನೀಡಲು ವರ್ತಕರು ನಿರ್ಧರಿಸಿದ್ದಾರೆ.

ಕಸ್ತೂರಿ ರಂಗನ್ ವರದಿ ವಿರೋಧಿಸಿ ಕಳೆದೊಂದು ತಿಂಗಳಿಂದ ಮಲೆನಾಡಿನಲ್ಲಿ ಹೋರಾಟಗಳು ನಡೆಯುತ್ತಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಲೆನಾಡಿಗೆ ಭೇಟಿ ನೀಡಿದ ಬೆನ್ನಲ್ಲೇ ಶೃಂಗೇರಿ ಬಂದ್‌ಗೆ ಕರೆ ನೀಡಲಾಗಿದೆ.

ಇದೇ ವೇಳೆ, ಪಶ್ಚಿಮ ಘಟ್ಟಕ್ಕೆ ಸಂಬಂಧಿಸಿದ ಕಸ್ತೂರಿ ರಂಗನ್ ವರದಿ ಕರಡು ಅಧಿಸೂಚನೆ ಕುರಿತು ಚರ್ಚಿಸಲು ಸೆಪ್ಟೆಂಬರ್ 21ರಿಂದ ವಿಧಾನಮಂಡಲದ ಉಭಯ ಸದನಗಳ ಮೂರು ದಿನಗಳ ವಿಶೇಷ ಅಧಿವೇಶನ ಆರಂಭವಾಗಿದೆ.

ವರದಿ ಜಾರಿಯಾದರೆ ಮಲೆನಾಡಿನ ಕೃಷಿ, ಜನವಸತಿ ಹಾಗೂ ಸ್ಥಳೀಯರ ಬದುಕಿನ ಮೇಲೆ ಪರಿಣಾಮ ಬೀರುವ ಆತಂಕ ವ್ಯಕ್ತಪಡಿಸಿರುವ ಹೋರಾಟಗಾರರು, ವರದಿಯನ್ನು ಜಾರಿಗೊಳಿಸಬಾರದು ಎಂದು ಆಗ್ರಹಿಸುತ್ತಿದ್ದಾರೆ.

ಶೃಂಗೇರಿ ಪಟ್ಟಣದಲ್ಲಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಹಾಗೂ ಹೋರಾಟ ನಡೆಯಲಿದ್ದು, ಸಾವಿರಾರು ರೈತರು ಮತ್ತು ಗ್ರಾಮಸ್ಥರು ಭಾಗವಹಿಸುವ ನಿರೀಕ್ಷೆಯಿದೆ.

ಕಸ್ತೂರಿ ರಂಗನ್ ವರದಿಗೆ ಮಲೆನಾಡಿನಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದ್ದು, ಶೃಂಗೇರಿ ಬಂದ್ ಮೂಲಕ ಸರ್ಕಾರದ ಗಮನ ಸೆಳೆಯಲು ಹೋರಾಟಗಾರರು ಮುಂದಾಗಿದ್ದಾರೆ.

Join WhatsApp