🏠 Home ದೇಶ ಜಿಲ್ಲಾ ಸುದ್ದಿ ತಾಲ್ಲೂಕು ರಾಜ್ಯ ರಾಜಕೀಯ  ಆರೋಗ್ಯ  ಕ್ರೈಮ್  ಪ್ರವಾಸ ಶಿಕ್ಷಣ

 

Breaking News
---Advertisement---
 

ಶೃಂಗೇರಿ ಸಮರ: ಜೀವರಾಜ್ ಗೆ ಬಿಗ್ ಶಾಕ್ ಶಾಸಕರಾಗಿ ಟಿ.ಡಿ. ರಾಜೇಗೌಡ ಮುಂದುವರಿಕೆ ಸುಪ್ರೀಂ ಆದೇಶ

---Advertisement---

 

 

ಚಿಕ್ಕಮಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶದ ವಿವಾದ ಈಗ ಸುಪ್ರೀಂ ಕೋರ್ಟ್ ಅಂಗಳದಲ್ಲಿ ಮಹತ್ವದ ಘಟ್ಟ ತಲುಪಿದೆ. ಈ ಹಿಂದೆ ಅಂಚೆ ಮತಗಳ ಎಣಿಕೆಯಲ್ಲಿ ನಡೆದ ಗೊಂದಲದ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಅವರು ಅತ್ಯಲ್ಪ ಮತಗಳ ಅಂತರದಿಂದ ಜಯ ಸಾಧಿಸಿ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಆದರೆ ಈ ಗೆಲುವನ್ನು ಪ್ರಶ್ನಿಸಿ ಟಿ.ಡಿ. ರಾಜೇಗೌಡ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸರ್ವೋಚ್ಚ ನ್ಯಾಯಾಲಯವು ಈಗ ಪ್ರಕರಣದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಮಹತ್ವದ ಆದೇಶ ನೀಡಿದೆ.

ನ್ಯಾಯಾಲಯದ ಈ ನಿರ್ಧಾರದಿಂದಾಗಿ ಮರುಮತ ಎಣಿಕೆ ಕುರಿತಾದ ಹೈಕೋರ್ಟ್ ಆದೇಶಕ್ಕೆ ತಡೆ ಬಿದ್ದಂತಾಗಿದ್ದು, ಡಿ.ಎನ್. ಜೀವರಾಜ್ ಅವರಿಗೆ ತಾತ್ಕಾಲಿಕ ಹಿನ್ನಡೆಯಾಗಿದೆ. ಸುಪ್ರೀಂ ಕೋರ್ಟ್‌ನ ಮುಂದಿನ ಆದೇಶದವರೆಗೆ ಟಿ.ಡಿ. ರಾಜೇಗೌಡ ಅವರೇ ಕ್ಷೇತ್ರದ ಶಾಸಕರಾಗಿ ಮುಂದುವರಿಯಲಿದ್ದಾರೆ. ನ್ಯಾಯಾಲಯವು ಈ ಸಂಬಂಧ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ ಮಾಡಿದ್ದು, ಚುನಾವಣೆಗೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಸಲ್ಲಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಪ್ರಕರಣದ ಮುಂದಿನ ವಿಚಾರಣೆಯನ್ನು ಮೇ 21ಕ್ಕೆ ಮುಂದೂಡಲಾಗಿದ್ದು, ಶೃಂಗೇರಿ ಕ್ಷೇತ್ರದ ರಾಜಕೀಯ ಭವಿಷ್ಯದ ಮೇಲೆ ಇಡೀ ರಾಜ್ಯದ ಕುತೂಹಲ ನೆಟ್ಟಿದೆ.

Join WhatsApp

Join Now

Join Telegram

Join Now