🏠 Home ದೇಶ ಜಿಲ್ಲಾ ಸುದ್ದಿ ತಾಲ್ಲೂಕು ರಾಜ್ಯ ರಾಜಕೀಯ  ಆರೋಗ್ಯ  ಕ್ರೈಮ್  ಪ್ರವಾಸ ಶಿಕ್ಷಣ

 

Breaking News
---Advertisement---
 

ಮಲೆನಾಡಲ್ಲಿ ಬಿರುಗಾಳಿ ಸಹಿತ ಮಳೆ ಅಬ್ಬರ: ಮೂಡಿಗೆರೆಯಲ್ಲಿ ಮನೆ ಮೇಲೆ ಮರ ಬಿದ್ದು ಸಂಪೂರ್ಣ ಜಖಂ

---Advertisement---

 

​ಚಿಕ್ಕಮಗಳೂರು: ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಗಾಳಿ-ಮಳೆ ಅಬ್ಬರ ಜೋರಾಗಿದ್ದು, ಮಲೆನಾಡು ಭಾಗದಲ್ಲಿ ನಾನಾ ಅವಾಂತರಗಳು ಸೃಷ್ಟಿಯಾಗಿವೆ. ಭಾರಿ ಗಾಳಿಯ ವೇಗಕ್ಕೆ ಮೂಡಿಗೆರೆ ತಾಲೂಕಿನ ಕೋಳೂರು ಗ್ರಾಮದಲ್ಲಿ ಬೃಹತ್ ಮರವೊಂದು ಮನೆಯ ಮೇಲೆ ಬಿದ್ದ ಪರಿಣಾಮ, ಇಡೀ ಮನೆ ಸಂಪೂರ್ಣ ಜಖಂಗೊಂಡಿದೆ.

​ಕೋಳೂರು ಗ್ರಾಮದ ನಿವಾಸಿ ಸಿದ್ದಪ್ಪ ಎಂಬುವರಿಗೆ ಸೇರಿದ ಮನೆ ಇದಾಗಿದ್ದು, ಮರ ಬಿದ್ದ ರಭಸಕ್ಕೆ ಮನೆ ಸಂಪೂರ್ಣವಾಗಿ ಜಖಂಗೊಂಡಿದೆ. ಘಟನೆ ಸಂಭವಿಸಿದ ವೇಳೆ ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

​ಮಲೆನಾಡು ಭಾಗದಲ್ಲಿ ಕಳೆದ ಎರಡು ದಿನಗಳಿಂದ ಸಾಧಾರಣವಾಗಿ ನಿರಂತರ ಮಳೆಯಾಗುತ್ತಿದ್ದರೂ, ಮಳೆಗಿಂತ ಗಾಳಿಯ ವೇಗವೇ ಹೆಚ್ಚಾಗಿದೆ. ಬಿರುಗಾಳಿಯ ಆರ್ಭಟಕ್ಕೆ ತಾಲೂಕಿನ ಹಲವೆಡೆ ಮರಗಳು ಹಾಗೂ ವಿದ್ಯುತ್ ಕಂಬಗಳು ಧರೆಗುರುಳಿದ್ದು, ಸಾರ್ವಜನಿಕರ ಜನಜೀವನ ಅಸ್ತವ್ಯಸ್ತಗೊಂಡಿದೆ.

​ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳೀಯ ಗ್ರಾಮ ಪಂಚಾಯಿತಿ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಂತ್ರಸ್ತ ಕುಟುಂಬಕ್ಕೆ ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Join WhatsApp

Join Now

Join Telegram

Join Now