🏠 Home ದೇಶ ಜಿಲ್ಲಾ ಸುದ್ದಿ ತಾಲ್ಲೂಕು ರಾಜ್ಯ ರಾಜಕೀಯ  ಆರೋಗ್ಯ  ಕ್ರೈಮ್  ಪ್ರವಾಸ ಶಿಕ್ಷಣ

 

Breaking News
---Advertisement---
 

ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಆದೇಶ: ಪ್ರಾಮಾಣಿಕ ತನಿಖೆಯಾಗಿ ಸೌಜನಿಗೆ ನ್ಯಾಯ ಸಿಗಲಿ – ಸಿ.ಟಿ.ರವಿ

---Advertisement---

 

​

ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಆದೇಶಿಸಿರುವ ಹಿನ್ನೆಲೆಯಲ್ಲಿ ಬಿಜೆಪಿ ನಾಯಕ ಸಿ.ಟಿ.ರವಿ ಅವರು ಪ್ರತಿಕ್ರಿಯೆ ನೀಡಿದ್ದು, ಪ್ರಕರಣದಲ್ಲಿ ಪಾರದರ್ಶಕ ತನಿಖೆಯಾಗಿ ಸೌಜನ್ಯ ಸಾವಿಗೆ ನಿಜವಾದ ಕಾರಣಕರ್ತರಾದವರಿಗೆ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ್ದಾರೆ.

​ಚಿಕ್ಕಮಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಪ್ರಕರಣ ನಡೆದು ಈಗಾಗಲೇ 14 ವರ್ಷಗಳು ಕಳೆದಿವೆ. ಈ ಸಂದರ್ಭದಲ್ಲಿ ಪ್ರಾಮಾಣಿಕ ಹಾಗೂ ಪಾರದರ್ಶಕ ತನಿಖೆ ನಡೆಯುವುದು ಅತ್ಯಗತ್ಯ. ಏನೇನು ನಡೆದಿದೆಯೋ ನಮಗೆ ಗೊತ್ತಿಲ್ಲ. ಆದರೆ, ಸೌಜನ್ಯಗೆ ನ್ಯಾಯ ಸಿಗಬೇಕು ಹಾಗೂ ಈ ಭೀಕರ ಸಾವಿಗೆ ಕಾರಣರಾದ ನೈಜ ಆರೋಪಿಗಳಿಗೆ ಶಿಕ್ಷೆಯಾಗಬೇಕು” ಎಂದು ಹೇಳಿದರು.

“ಪ್ರಕರಣದ ತನಿಖೆಗೆ ಸುಪ್ರೀಂ ಕೋರ್ಟ್ ವಿಶೇಷ ತನಿಖಾ ತಂಡವನ್ನು (SIT) ರಚನೆ ಮಾಡಿದೆ. ಎಸ್.ಐ.ಟಿ ಸೂಕ್ತ ಹಾಗೂ ಆಳವಾದ ತನಿಖೆ ನಡೆಸಿ, ಸೌಜನ್ಯ ಕುಟುಂಬಕ್ಕೆ ನ್ಯಾಯ ಒದಗಿಸಲಿ” ಎಂದು ಅವರು ಆಶಯ ವ್ಯಕ್ತಪಡಿಸಿದರು.  

ತನಿಖೆಯ ವಿಳಂಬದ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಸಿ.ಟಿ.ರವಿ, “ದೇಶದಲ್ಲಿ 30 ರಿಂದ 40 ವರ್ಷಗಳ ಹಳೆಯ ಪ್ರಕರಣಗಳನ್ನೂ ತನಿಖೆ ನಡೆಸಿರುವ ಉದಾಹರಣೆಗಳಿವೆ. ಹೀಗಾಗಿ ಈ ಪ್ರಕರಣದಲ್ಲೂ ಪ್ರಾಮಾಣಿಕವಾಗಿ ತನಿಖೆ ನಡೆಸಲು ಖಂಡಿತ ಸಾಧ್ಯವಿದೆ. ತನಿಖೆಯನ್ನು ಹೇಗೆ ಮಾಡಬೇಕು, ಏನು ಮಾಡಬೇಕು ಎಂಬುದು ತನಿಖಾಧಿಕಾರಿಗಳಿಗೆ ಬಿಟ್ಟ ವಿಚಾರ. ಆದರೆ, ಯಾವುದೇ ಮುಲಾಜಿಲ್ಲದೆ ಪ್ರಾಮಾಣಿಕ ತನಿಖೆ ನಡೆಸಿ, ಸೌಜನ್ಯ ಸಾವಿಗೆ ನ್ಯಾಯ ಸಿಗುವಂತೆ ಮಾಡಬೇಕು ಎಂಬುದಷ್ಟೇ ನಮ್ಮ ಮುಖ್ಯ ಆಗ್ರಹ” ಎಂದರು .  

Join WhatsApp

Join Now

Join Telegram

Join Now