🏠 Home ದೇಶ ಜಿಲ್ಲಾ ಸುದ್ದಿ ತಾಲ್ಲೂಕು ರಾಜ್ಯ ರಾಜಕೀಯ  ಆರೋಗ್ಯ  ಕ್ರೈಮ್  ಪ್ರವಾಸ ಶಿಕ್ಷಣ

 

Breaking News
---Advertisement---
 

ಸಿ.ಟಿ. ರವಿ ಹತ್ಯೆಗೆ ಉಗ್ರರ ಸಂಚು: ಬಿಗಿ ಭದ್ರತೆಗೆ ಆಗ್ರಹಿಸಿ ಎಸ್ಪಿ ಮೊರೆಹೋದ ಬಿಜೆಪಿ ಎಸ್ಸಿ ಮೋರ್ಚಾ

---Advertisement---

ಚಿಕ್ಕಮಗಳೂರು: ರಾಜ್ಯದಲ್ಲಿ ಬಂಧಿತರಾದ ಶಂಕಿತ ಉಗ್ರರು ಪ್ರಮುಖ ಹಿಂದೂ ಮುಖಂಡರ ಹತ್ಯೆಗೆ ಸಂಚು ರೂಪಿಸಿರುವುದು ತನಿಖೆಯಲ್ಲಿ ಬಯಲಾದ ಬೆನ್ನಲ್ಲೇ, ಮಾಜಿ ಸಚಿವ ಹಾಗೂ ಎಂಎಲ್‌ಸಿ ಸಿ.ಟಿ. ರವಿ ಅವರಿಗೆ ತಕ್ಷಣವೇ ಬಿಗಿ ಭದ್ರತೆ ಒದಗಿಸುವಂತೆ ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಎಸ್.ಸಿ. ಮೋರ್ಚಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ. ​ಚಿಕ್ಕಬಳ್ಳಾಪುರ ಮತ್ತು ಹಾಸನದಲ್ಲಿ ಸೆರೆಸಿಕ್ಕ ಉಗ್ರರು ಸಿ.ಟಿ. ರವಿ, ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಪ್ರತಾಪ್ ಸಿಂಹ ಅವರ ಹತ್ಯೆಗೆ ಸ್ಕೆಚ್ ಹಾಕಿದ್ದಾರೆ ಎಂಬ ಆತಂಕಕಾರಿ ವಿಚಾರ ಬಹಿರಂಗಗೊಂಡಿದ್ದು, ಸದಾ ದೇಶದ್ರೋಹಿಗಳ ವಿರುದ್ಧ ಧ್ವನಿ ಎತ್ತುವ ಜನಪರ ನಾಯಕರಿಗೆ ಸರ್ಕಾರ ರಕ್ಷಣೆ ನೀಡಬೇಕು ಎಂದು ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷ ಕುರುವಂಗಿ ವೆಂಕಟೇಶ್ ಆಗ್ರಹಿಸಿದ್ದಾರೆ. ರಾಜ್ಯ ಸರ್ಕಾರ ಹಾಗೂ ಗೃಹ ಇಲಾಖೆ ದೇಶದ್ರೋಹಿ ಜಾಲವನ್ನು ಬೇರುಸಹಿತ ಮಟ್ಟಹಾಕಬೇಕು ಮತ್ತು ಸಿ.ಟಿ. ರವಿ ಅವರ ಪ್ರತಿಯೊಂದು ಕಾರ್ಯಕ್ರಮದಲ್ಲೂ ಕಟ್ಟುನಿಟ್ಟಿನ ಭದ್ರತೆ ಕಲ್ಪಿಸಬೇಕು; ಒಂದು ವೇಳೆ ನಿರ್ಲಕ್ಷ್ಯ ವಹಿಸಿ ನಾಯಕರಿಗೆ ಸಣ್ಣ ಅಹಿತಕರ ಘಟನೆ ಎದುರಾದರೂ ದಲಿತ ಸಮುದಾಯವು ಬೀದಿಗಿಳಿದು ತೀವ್ರ ಹೋರಾಟ ನಡೆಸಲಿದೆ ಎಂದು ಅವರು ಎಚ್ಚರಿಸಿದ್ದಾರೆ.

Join WhatsApp

Join Now

Join Telegram

Join Now