September 8, 2024

MALNAD TV

HEART OF COFFEE CITY

ಬಿಡುವು ನೀಡಿದ ವರುಣದೇವ ಜಿಲ್ಲೆಯ ಜನ ನಿರಾಳ ವಾರದಿಂದ ಅಬ್ಬರಿಸಿದ್ದ ಮಳೆರಾಯ ಕೊಂಚ ಕ್ಷೀಣಿಸಿದ್ದಾನೆ

1 min read

ಕಳೆದೊಂದು ವಾರದಿಂದ ಜಿಲ್ಲೆಯ ಮಲೆನಾಡು ಭಾಗದಲ್ಲಿ ಆರ್ಭಟಿಸಿದ್ದ ಮಳೆ ಶನಿವಾರ ಕೊಂಚ ಬಿಡುವು ನೀಡಿದೆ. ಮಳೆ ಕಡಿಮೆಯಾದರೂ ಅಪಾಯದ ಮಟ್ಟದಲ್ಲಿ ಹರಿಯುತ್ತಿರುವ ನದಿಗಳ ನೆರೆ ನೀರಿನಿಂದಾಗಿ ಅಲ್ಲಲ್ಲಿ ಅವಾಂತರಗಳ ಸರಣಿ ಮುಂದುವರಿದಿದೆ. ಮನೆ, ಮರ, ಭೂಕುಸಿತದಂತಹ ಘಟನೆಗಳು ಮಲೆನಾಡು ಭಾಗದ ಅಲ್ಲಲ್ಲಿ ವರದಿಯಾಗುತ್ತಲೇ ಇವೆ.ಕಳೆದೊಂದು ವಾರದಿಂದ ಜಿಲ್ಲೆಯ ಮಲೆನಾಡು ಭಾಗದ ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ, ಎನ್.ಆರ್.ಪುರ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿತ್ತು. ಭಾರೀ ಮಳೆಯಿಂದಾಗಿ ಹಲವಾರು ಮನೆಗಳು ಧರೆಗುರುಳಿದಿದ್ದರೇ, ೫ಕ್ಕೂ ಹೆಚ್ಚು ಜಾನುವಾರುಗಳು ಮಳೆ ನೀರಿನಲ್ಲಿ ಕೊಚ್ಚಿ ಹೋಗಿದ್ದವು. ಮರಗಳು ಉರುಳಿ ನೂರಾರು ವಿದ್ಯುತ್ ಕಂಬಗಳು ಧರಾಶಹಿಯಾಗಿದ್ದವು. ರಸ್ತೆ, ಮೋರಿ, ಸೇತುವೆಗಳ ಮೇಲೆ ನೀರು ನೆರೆ ನೀರು ಹರಿದು, ಭೂ ಕುಸಿತ ಉಂಟಾಗಿ ಸಂಪರ್ಕಗಳೇ ಕಡಿತಗೊಂಡಿದ್ದವು. ಕಳೆದೊಂದು ವಾರದಿಂದ ಅಬ್ಬರಿಸಿ ಬೊಬ್ಬಿರಿದಿದ್ದ ಮಳೆ ಶನಿವಾರ ಕೊಂಚ ಬಿಡುವು ನೀಡಿದ್ದರೂ ಮಲೆನಾಡು ಭಾಗದಲ್ಲಿ ಆಗಾಗ್ಗೆ ಭಾರೀ ಗಾಳಿಯೊಂದಿಗೆ ಸಾಧಾರಣ ಮಳೆಯಾಗುತ್ತಿದೆ. ಮಳೆ ಕೊಂಚು ಕಡಿಮೆಯಾಗಿರುವುದರಿಂದ ಮಲೆನಾಡು ಭಾಗದ ಜನತೆ ನಿಟ್ಟುಸಿರುವ ಬಿಡುವಂತಾಗಿದೆ.ಸದ್ಯ ಮಳೆ ಕಡಿಮೆಯಾಗಿದ್ದರೂ ತುಂಬಿ ಹರಿಯುತ್ತಿರುವ ಹೇಮಾವತಿ, ಭದ್ರಾ, ತುಂಗಾ ನದಿಗಳಲ್ಲಿ ಪ್ರವಾಹದ ಪರಿಸ್ಥಿತಿ ಮುಂದುವರಿದಿದೆ. ನದಿಗಳ ತೀರದಲ್ಲಿರುವ ಗ್ರಾಮಗಳಲ್ಲಿ ಬಾಳೆ, ಕಾಫಿ, ಅಡಿಕೆ ತೋಟಗಳಿಗೆ ನೀರು ನುಗ್ಗಿ ಅಪಾರ ನಷ್ಟ ಉಂಟಾಗಿದೆ. ಶಿರಾಡಿ ಘಾಟ್ ಹೆದ್ದಾರಿಯಲ್ಲಿ ವಾಹನಗಳ ಸಂಚಾರಕ್ಕೆ ನಿಷೇಧ ಹೇರಿರುವುದರಿಂದ ಆ ಮಾರ್ಗದಲ್ಲಿ ಸಂಚರಿಸುತ್ತಿದ್ದ ವಾಹನಗಳ, ಲಾರಿಗಳು ಚಾರ್ಮಾಡಿ ಘಾಟ್ ಹೆದ್ದಾರಿಯಲ್ಲಿ ಸಂಚಾರ ಮಾಡುತ್ತಿದ್ದು, ಇದರಿಂದ ಘಾಟಿಯಲ್ಲಿ ವಾಹನಗಳ ಒತ್ತಡ ಹೆಚ್ಚಾಗಿದ್ದು, ರಸ್ತೆ ಕುಸಿಯುವ ಸಾಧ್ಯತೆ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಘಾಟಿ ವ್ಯಾಪ್ತಿಯಲ್ಲಿ ಕಟ್ಟೆಚ್ಚರ ವಹಿಸಿದ್ದು, ಈ ಹಿಂದೆ ಭೂಕುಸಿತ ಸಂಭವಿಸಿದ ಸ್ಥಳಗಳಲ್ಲಿ ಪರಿಶೀಲನೆಗೆ ಜಿಲ್ಲಾಡಳಿತ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಜಿಲ್ಲಾಧಿಕಾರಿ ಮೀನಾ ನಾಗರಾಜ್ ಎಸ್ಪಿ ಡಾ.ವಿಕ್ರಮಟ್ ಅಮ್ಟೆ ಅಧಿಕಾರಿಗಳೊಂದಿಗೆ ಚಾರ್ಮಾಡಿ ಘಾಟ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿರುವುದಲ್ಲೇ ಭಾರೀ ವಾಹನಗಳ ಸಂಚಾರ ನಿಷೇಧಕ್ಕೆ ಸರಕಾರಕ್ಕೆ ಮನವಿ ಮಾಡಿದ್ದಾರೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!