September 17, 2024

MALNAD TV

HEART OF COFFEE CITY

ಹೈಕೋರ್ಟ್ ಆದೇಶದ ಮೇರೆಗೆ ದತ್ತಪೀಠಕ್ಕೆ ವ್ಯವಸ್ಥಾಪನಾ ಸಮಿತಿ ರಚನೆ ಮಾಡಿದ ರಾಜ್ಯಸರ್ಕಾರ

1 min read

ಕಳೆದ ನಾಲ್ಕೈದು ದಶಕಗಳಿಂದ ಹಿಂದೂ-ಮುಸ್ಲಿಮರ ಧಾರ್ಮಿಕ ಭಾವೈಕ್ಯತಾ ಕೇಂದ್ರದ ಜೊತೆ ಕರ್ನಾಟಕದ ಅಯೋಧ್ಯೆ ಎಂದೇ ಕರೆಸಿಕೊಳ್ಳುವ ಮೂಲಕ ವಿವಾದಿತ ಕೇಂದ್ರವೂ ಆಗಿದ್ದ ಚಿಕ್ಕಮಗಳೂರು ತಾಲೂಕಿನ ದತ್ತಪೀಠಕ್ಕೆ ಸರ್ಕಾರ ಆಡಳಿತ ಮಂಡಳಿ ರಚನೆ ಮಾಡಿ ಆದೇಶ ಹೊರಡಿಸಿದೆ. ಈ ಆಡಳಿತ ಮಂಡಳಿ ದತ್ತಪೀಠಕ್ಕೆ ಅರ್ಚಕರ ನೇಮಕ ಕುರಿತಂತೆ ನಿರ್ಧಾರ ಮಾಡುವ ಅಧಿಕಾರ ಈ ಆಡಳಿತ ಮಂಡಳಿಗೆ ಇದೆ. ಈ ಆಡಳಿತ ಮಂಡಳಿಗೆ ಸದಸ್ಯರಾಗಲು 42 ಜನ ಅರ್ಜಿ ಹಾಕಿದ್ದರು.

ಚಿಕ್ಕಮಗಳೂರು ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಅರ್ಜಿದಾರರ ಅರ್ಹತೆ, ಅನರ್ಹತೆ, ವಿದ್ಯಾಭ್ಯಾಸ, ವಿಳಾಸ ಸೇರಿದಂತೆ ಎಲ್ಲರ ಮಾಹಿತಿ ಸಂಗ್ರಹಿಸಿತ್ತು. ಇಂದು ರಾಜ್ಯ ಸರ್ಕಾರ ಇಂದು ಎಂಟು ಜನರ ಆಡಳಿತ ಮಂಡಳಿ ಸದಸ್ಯರನ್ನ ನೇಮಕ ಮಾಡಿದೆ. ಇಬ್ಬರು ಮಹಿಳೆಯರು, ಓರ್ವ ಮುಸ್ಲಿಂ ಸೇರಿದಂತೆ ಆಡಳಿತ ಮಂಡಳಿಯಲ್ಲಿ ಒಟ್ಟು ಎಂಟು ಜನ ಸದಸ್ಯರಿದ್ದಾರೆ. ಈ ಸಮಿತಿ ಶೀಘ್ರದಲ್ಲೇ ಸಭೆ ಸೇರಿ ದತ್ತಪೀಠದಲ್ಲಿ ಪೂಜೆ ಹೇಗಿರಬೇಕು, ಅಲ್ಲಿನ ಆಡಳಿತ ವ್ಯವಸ್ಥೆ ಹೇಗಿರಬೇಕು, ಹಿಂದೂ-ಮುಸ್ಲಿಮರು ವಾರದಲ್ಲಿ ಯಾರು ಎಷ್ಟು ದಿನ ಪೂಜೆ ಮಾಡಬೇಕು. ಯಾರು ಮಾಡಬೇಕು ಎಂಬೆಲ್ಲಾ ಅಂಶಗಳ ಅಂತಿಮ ಪಟ್ಟಿಯನ್ನ ಸರ್ಕಾರಕ್ಕೆ ರವಾನಿಸಲಿದೆ. ಸರ್ಕಾರ ಆಡಳಿತ ಮಂಡಳಿಯ ಮನವಿಗೆ ಅಂಕಿತ ಹಾಕಿದರೆ ದತ್ತಪೀಠದಲ್ಲಿ ಇನ್ನು ಮುಂದೆ ಹಿಂದೂ ಅರ್ಚಕರು ಪೂಜೆ ಮಾಡಲಿದ್ದಾರೆ. ಹಿಂದೂ ಅರ್ಚಕರ ನೇಮಕಕ್ಕೆ ಹಿಂದೂ ಸಂಘಟನೆಗಳ ದಶಕಗಳ ಹೋರಾಟಕ್ಕೆ ಫಲ ಸಿಕ್ಕಂತಾಗಲಿದೆ. ಕಳೆದ ಫೆಬ್ರವರಿಯಲ್ಲಿ ರಾಜ್ಯ ಸರ್ಕಾರದ ಸಚಿವ ಸಂಪುಟದ ಉಪಸಮಿತಿ ಕೂಡ ಚಿಕ್ಕಮಗಳೂರಿಗೆ ಭೇಟಿ ನೀಡಿ, ಪೂಜಾ ಪದ್ಧತಿಯ ಬಗ್ಗೆ ಜನರ ಅಭಿಪ್ರಾಯ ಸಂಗ್ರಹಿಸಿ ಸರ್ಕಾರಕ್ಕೆ ವರದಿ ನೀಡಿತ್ತು. ಆ ವರದಿ ಹಿನ್ನೆಲೆ ಇಂದು ರಾಜ್ಯ ಸರ್ಕಾರ ದತ್ತಪೀಠದ ವಿಚಾರದಲ್ಲಿ ಮಹತ್ವದ ಆದೇಶ ಹೊರಡಿಸಿದೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!