मौसम क्रिकेट ऑपरेशन सिंदूर क्रिकेट स्पोर्ट्स बॉलीवुड जॉब - एजुकेशन बिजनेस लाइफस्टाइल देश विदेश राशिफल आध्यात्मिक अन्य
---Advertisement---

ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಇಬ್ಬರು ಸರ್ವೇ ಅಧಿಕಾರಿಗಳು!

---Advertisement---

 

​ಚಿಕ್ಕಮಗಳೂರು: ಕೃಷಿ ಜಮೀನಿನ ಸರ್ವೇ ಮಾಡಿ ಸ್ಕೆಚ್ ನೀಡಲು ಲಕ್ಷಾಂತರ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿದ್ದ ಇಬ್ಬರು ಸರ್ವೇ ಅಧಿಕಾರಿಗಳು, 2 ಲಕ್ಷ ರೂಪಾಯಿ ಮುಂಗಡ ಹಣ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

​ಚಿಕ್ಕಮಗಳೂರು ತಾಲೂಕು ಕಚೇರಿಯ ಸರ್ವೇಯರ್‌ಗಳಾದ ದೊರೆರಾಜ್ ಮತ್ತು ರಂಗನಾಥ್ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳಾಗಿದ್ದಾರೆ.

ಚಿಕ್ಕಮಗಳೂರು ನಗರದ ಹೊರವಲಯದ ಇಂದಾವರ ಗ್ರಾಮದ ನಿವಾಸಿ ಧರಣೇಶ್ ಎಂಬುವವರು ತಮ್ಮ ಕೃಷಿ ಜಮೀನಿನ ಸರ್ವೇ ನಡೆಸಿ ಸ್ಕೆಚ್ ತಯಾರಿಸಿಕೊಡುವಂತೆ ಅರ್ಜಿ ಸಲ್ಲಿಸಿದ್ದರು. ಈ ಕೆಲಸಕ್ಕಾಗಿ ಸರ್ವೇಯರ್‌ಗಳಾದ ದೊರೆರಾಜ್ ಮತ್ತು ರಂಗನಾಥ್ ಬರೊಬ್ಬರಿ 10 ಲಕ್ಷ ರೂಪಾಯಿ ಲಂಚ ನೀಡುವಂತೆ ಬೇಡಿಕೆ ಇಟ್ಟಿದ್ದರು.

​ಲಂಚ ನೀಡಲು ಇಷ್ಟವಿಲ್ಲದ ಧರಣೇಶ್ ಈ ಕುರಿತು ಚಿಕ್ಕಮಗಳೂರು ಲೋಕಾಯುಕ್ತ ಕಚೇರಿಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆಗೆ ಯೋಜನೆ ರೂಪಿಸಿದ್ದರು.

ಅಧಿಕಾರಿಗಳು ಹೇಳಿದಂತೆ ಧರಣೇಶ್ ಅವರು ತಮ್ಮ ಖಾಸಗಿ ಕಚೇರಿಯಲ್ಲಿ 2 ಲಕ್ಷ ರೂಪಾಯಿ ಮುಂಗಡ ಹಣ ನೀಡುವಾಗ, ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ಇಬ್ಬರೂ ಸರ್ವೇಯರ್‌ಗಳನ್ನು ರೆಡ್‌ಹ್ಯಾಂಡಾಗಿ ಬಂಧಿಸಿದ್ದಾರೆ.

​ಚಿಕ್ಕಮಗಳೂರು ಲೋಕಾಯುಕ್ತ ಡಿವೈಎಸ್ಪಿ ಪಿ. ತಿರುಮಲೇಶ್ ಅವರ ನೇತೃತ್ವದಲ್ಲಿ ಈ ಯಶಸ್ವಿ ದಾಳಿ ನಡೆದಿದ್ದು, ಬಂಧಿತ ಅಧಿಕಾರಿಗಳನ್ನು ವಶಕ್ಕೆ ಪಡೆದಿದ್ದಾರೆ.

Join WhatsApp

Join Now

Join Telegram

Join Now

Leave a Comment