Galleries
-

ಮಾಡಿದ ತಪ್ಪನ್ನ ಒಪ್ಪಿಕೊಂಡಿದ್ದಕ್ಕೆ ನ್ಯಾಯಾಲಯದಿಂದ ಕಮ್ಯುನಿಟಿ ಸೇವೆ ಶಿಕ್ಷೆ
ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನಲ್ಲಿ ವಿಶಿಷ್ಟ ರೀತಿಯ ಶಿಕ್ಷೆ ವಿಧಿಸಿರುವ ಘಟನೆ ಬೆಳಕಿಗೆ ಬಂದಿದೆ. ಟ್ರಾಫಿಕ್ ನಿಯಮಗಳನ್ನು ಪದೇ ಪದೇ ಉಲ್ಲಂಘಿಸಿದ್ದ ವ್ಯಕ್ತಿಗೆ ನ್ಯಾಯಾಲಯ ಕಮ್ಯುನಿಟಿ ಸೇವೆ ಶಿಕ್ಷೆ ನೀಡಿದೆ. ಕಡೂರು ತಾಲೂಕಿನ ಬಿಸಿಲೇಹಳ್ಳಿ ಗ್ರಾಮದ ರಂಜಿತ್ ಎಂಬಾತ ಹಲವಾರು ಬಾರಿ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದ್ದಾನೆ. ಈ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ ಬಳಿಕ, ನ್ಯಾಯಾಲಯದಲ್ಲಿ ರಂಜಿತ್ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ. ಇದನ್ನ ಗಮನಿಸಿದ ನ್ಯಾಯಾಲಯ, ರಂಜಿತ್‌ಗೆ ವಿಭಿನ್ನ ರೀತಿಯ ಶಿಕ್ಷೆ ವಿಧಿಸಿದೆ. ಮಾರ್ಚ್ 17ರಂದು…
-

ಚಿಕ್ಕಮಗಳೂರು: ನ್ಯಾಯಕ್ಕಾಗಿ ಪ್ರಧಾನಿ ಮೋದಿ ಕಚೇರಿಗೆ ಕಾಂಗ್ರೆಸ್ ಮಹಿಳಾ ನಾಯಕಿ ದೂರು
ಚಿಕ್ಕಮಗಳೂರು: ಜಿಲ್ಲೆಯಲ್ಲೊಂದು ರಾಜಕೀಯ ಹಾಗೂ ವೈಯಕ್ತಿಕ ವಿವಾದ ದೊಡ್ಡ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಕಾಂಗ್ರೆಸ್ ಮಹಿಳಾ ನಾಯಕಿ ಚೇತನಾ ಅವರು ನ್ಯಾಯಕ್ಕಾಗಿ ಪ್ರಧಾನಿ ಕಚೇರಿಗೆ ದೂರು ನೀಡಿರುವ ಘಟನೆ ಬೆಳಕಿಗೆ ಬಂದಿದೆ. ಚಿಕ್ಕಮಗಳೂರು ನಗರದ ಕಾಂಗ್ರೆಸ್ ನಾಯಕಿ ಚೇತನಾ ಅವರು ಯೂತ್ ಕಾಂಗ್ರೆಸ್ ಮಾಜಿ ಜಿಲ್ಲಾಧ್ಯಕ್ಷ ರಾಹಿಲ್ ಷರೀಫ್ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದು, ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವಾಲಯ ಹಾಗೂ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಪತ್ರ ಬರೆದಿದ್ದಾರೆ. ಚೇತನಾ…
-

ತೋಟದಲ್ಲಿ ಕೆಲಸ ಮಾಡುವಾಗ ಜೇನುನೊಣಗಳು ಕಚ್ಚಿ – ರೈತ ಬಲಿ
ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ಜೇನು ನೊಣಗಳ ದಾಳಿಗೆ ರೈತರೊಬ್ಬರು ಬಲಿಯಾಗಿರುವ ದಾರುಣ ಘಟನೆ ನಡೆದಿದೆ. ತೋಟದಲ್ಲಿ ಕೆಲಸ ಮಾಡುತ್ತಿದ್ದ 61 ವರ್ಷದ ಕರಿಯಾನಾಯ್ಕ ಎಂಬುವವರ ಮೇಲೆ ಜೇನು ಹುಳಗಳು ಏಕಾಏಕಿ ದಾಳಿ ನಡೆಸಿದ್ದು, ಈ ವೇಳೆ ಅವರು ತೀವ್ರವಾಗಿ ಅಸ್ವಸ್ಥಗೊಂಡಿದ್ದರು. ಕೂಡಲೇ ಅವರನ್ನು ಸಖರಾಯಪಟ್ಟಣದ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಯಿತು. ಆದರೆ ಪರಿಸ್ಥಿತಿ ಗಂಭೀರವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಚಿಕ್ಕಮಗಳೂರಿಗೆ ಕರೆದೊಯ್ಯುವ ಮಾರ್ಗ ಮಧ್ಯೆಯೇ ಅವರು ಕೊನೆಯುಸಿರೆಳೆದಿದ್ದಾರೆ. ಈ ಘಟನೆಯಲ್ಲಿ ಕರಿಯಾನಾಯ್ಕ ಅವರ…
-

ಪೈನಾನ್ಸ್ ಕಿರುಕುಳ ಆರೋಪ: ಆಣೂರು ಪಂಚಾಯಿತಿ ವಾಟರ್ ಮ್ಯಾನ್ ರಮೇಶ್ ಆತ್ಮಹತ್ಯೆ
ಪೈನಾನ್ಸ್ ಕಿರುಕುಳ ಆರೋಪದ ಹಿನ್ನೆಲೆಯಲ್ಲಿ ಆಣೂರು ಪಂಚಾಯಿತಿಯ ವಾಟರ್ ಮ್ಯಾನ್ ರಮೇಶ್ (47) ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ಕಳೆದ ಸುಮಾರು 10 ವರ್ಷಗಳಿಂದ ಆಣೂರು ಪಂಚಾಯಿತಿಯಲ್ಲಿ ವಾಟರ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ ರಮೇಶ್ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಈ ಘಟನೆ ಸ್ಥಳೀಯರಲ್ಲಿ ಆತಂಕ ಮತ್ತು ದುಃಖವನ್ನುಂಟು ಮಾಡಿದೆ. ಮೂಲಗಳ ಪ್ರಕಾರ, ಪೈನಾನ್ಸ್ ಸಂಬಂಧಿತ ಕಿರುಕುಳದಿಂದಾಗಿ ಮನನೊಂದು ರಮೇಶ್ ಅವರು ಈ ಕಠಿಣ ನಿರ್ಧಾರಕ್ಕೆ ಕೈ ಹಾಕಿರಬಹುದು ಎಂದು ಶಂಕಿಸಲಾಗಿದೆ. ಘಟನೆ…
-

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಲೈಟ್ ಕಂಬಕ್ಕೆ ಡಿಕ್ಕಿ ಹೊಡೆದ ಖಾಸಗಿ ಬಸ್
ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಸಂಗಮೇಶ್ವರಪೇಟೆ ಸಮೀಪ ಖಾಸಗಿ ಬಸ್ ಲೈಟ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಸಂಭವಿಸಿದ. ಬೆಂಗಳೂರಿನಿಂದ ಶೃಂಗೇರಿಗೆ ತೆರಳುತ್ತಿದ್ದ ಖಾಸಗಿ ಬಸ್ ಎದುರು ಬರುತ್ತಿದ್ದ ವಾಹನಕ್ಕೆ ಸೈಡ್ ನೀಡಲು ಹೋಗುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಆ ಸಂದರ್ಭದಲ್ಲಿ ಮಳೆಯ ಕಾರಣದಿಂದ ರಸ್ತೆ ಜಾರಿ ಹೋಗಿದ್ದರಿಂದ ಬಸ್ ಟೈರ್ ಸ್ಕಿಡ್ ಆಗಿ ಚಾಲಕನ ನಿಯಂತ್ರಣ ತಪ್ಪಿದೆ ನಿಯಂತ್ರಣ ತಪ್ಪಿದ ಬಸ್ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಂಬ…
-

ಮಳೆಗಾಗಿ ನಡೆದ ಪೂಜೆ ಮುಗಿಯುವ ಮೊದಲೇ ಅಬ್ಬರಿಸಿದ ವರುಣದೇವ!
ಚಿಕ್ಕಮಗಳೂರು: ಕಾಫಿ ನಾಡು ಮತ್ತು ಮಲೆನಾಡು ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬಿಸಿಲ ಬೇಗೆಗೆ ಕಂಗಾಲಾಗಿದ್ದ ಜನರಿಗೆ ಹಾಗೂ ಬೆಳೆಗಾರರಿಗೆ ವರುಣದೇವ ತಂಪು ಎರೆದಿದ್ದಾನೆ. ವಿಶೇಷವೆಂದರೆ, ಮಳೆಗಾಗಿ ದೇವಸ್ಥಾನದಲ್ಲಿ ನಡೆದ ವಿಶೇಷ ಪೂಜೆ ಮುಗಿಯುವ ಮೊದಲೇ ಮಲೆನಾಡಿನಾದ್ಯಂತ ಮಳೆ ಅಬ್ಬರಿಸಿದ್ದು, ಭಕ್ತರಲ್ಲಿ ಮತ್ತು ರೈತರಲ್ಲಿ ಸಂಭ್ರಮ ಮೂಡಿಸಿದೆ. ದಕ್ಷಿಣ ಕಾಶಿ ಎಂದೇ ಪ್ರಸಿದ್ಧಿಯಾದ ಕಳಸದ ಶ್ರೀ ಕಳಸೇಶ್ವರ ಸ್ವಾಮಿ ಸನ್ನಿಧಿಯಲ್ಲಿ ಇಂದು ನಾಡಿನ ಸುವೃಷ್ಟಿಗಾಗಿ (ಉತ್ತಮ ಮಳೆಗಾಗಿ) ವಿಶೇಷ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಶತಾರುದ್ರಾಭಿಷೇಕ, ಏಕಾದಶ…
-

ಕಾರಿನ ಮೇಲೆ ಉರುಳಿ ಬಿದ್ದ ಕಟ್ಟಿಗೆ ಲಾರಿ; ದಂಪತಿ-ಮಗು ಪವಾಡಸದೃಶ ಪಾರು – ಲಕ್ಯಾ ಕ್ರಾಸ್ ಬಳಿ ಭೀಕರ ಅಪಘಾತ
ಅದೃಷ್ಟಕ್ಕೂ ಪವಾಡಕ್ಕೂ ಮೀರಿದ ಘಟನೆಯೊಂದು ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸಂಭವಿಸಿದೆ. ಕಟ್ಟಿಗೆ ತುಂಬಿದ್ದ ಲಾರಿ ಕಾರಿನ ಮೇಲೆ ಉರುಳಿ ಬಿದ್ದರೂ ದಂಪತಿ ಮತ್ತು ಮಗು ಪ್ರಾಣಾಪಾಯದಿಂದ ಪಾರಾದ ಘಟನೆ ಚಿಕ್ಕಮಗಳೂರು ತಾಲೂಕಿನ ಲಕ್ಯಾ ಕ್ರಾಸ್ ಬಳಿ ನಡೆದಿದೆ. ಚಿಕ್ಕಮಗಳೂರು ನಗರದ ಹೊರವಲಯದಲ್ಲಿರುವ ಲಕ್ಯಾ ಕ್ರಾಸ್ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಕಟ್ಟಿಗೆ ತುಂಬಿಕೊಂಡು ಸಾಗುತ್ತಿದ್ದ ಲಾರಿ ಏಕಾಏಕಿ ಉರುಳಿ ಬಿದ್ದಿದೆ. ಪರಿಣಾಮ ಕಾರಿನಲ್ಲಿದ್ದ ದಂಪತಿ ಮತ್ತು ಮಗು ವಾಹನದೊಳಗೆ ಸಿಲುಕಿಕೊಂಡಿದ್ದರು. ಅಪಘಾತದ ತೀವ್ರತೆ ಕಂಡು ಸ್ಥಳೀಯರು ಬೆಚ್ಚಿಬಿದ್ದರೂ, ಅದೃಷ್ಟವಶಾತ್…
-

ಎಐ ಭರಾಟೆಯ ನಡುವೆ ಮಾನವೀಯತೆ ಮರೆಯಬಾರದು – ಶಾಸಕ ಎಚ್.ಡಿ. ತಮ್ಮಯ್ಯ
ಚಿಕ್ಕಮಗಳೂರು: ಕೃತಕ ಬುದ್ಧಿಮತ್ತೆ (ಎಐ) ಯ ಭರಾಟೆಯ ನಡುವೆಯೂ ಯುವಜನತೆ ಮಾನವೀಯ ಮೌಲ್ಯಗಳನ್ನು ಮರೆಯಬಾರದು ಎಂದು ಶಾಸಕ ಎಚ್.ಡಿ. ತಮ್ಮಯ್ಯ ಕಿವಿಮಾತು ಹೇಳಿದರು. ನಗರದ ಡಿ.ಸಿ.ಸಿ ಬ್ಯಾಂಕ್ ಸೆಮಿನಾರ್ ಹಾಲ್‌ನಲ್ಲಿ ಆಯೋಜಿಸಿದ್ದ ಎರಡು ದಿನಗಳ “ಹೊನ್ನ ಬಿತ್ತೇವು ಹೊಲಕೆಲ್ಲ” ಸಂಘಟನೆಯ ನವ ಮಾಧ್ಯಮಗಳ ತರಬೇತಿ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಇಂದಿನ ದಿನಗಳಲ್ಲಿ ಒಳ್ಳೆಯದಕ್ಕೂ ಕೆಟ್ಟದಕ್ಕೂ ಎಐ ಬಳಕೆಯಾಗುತ್ತಿರುವುದು ಸತ್ಯ. ಮಾಧ್ಯಮ ಲೋಕದಲ್ಲಿ ವೇಗವಾದ ಬದಲಾವಣೆಗಳು ನಡೆಯುತ್ತಿವೆ. ಆದರೆ ಸತ್ಯಾಸತ್ಯತೆ ಮರೆಮಾಚುವಂತಾಗಬಾರದು ಎಂದು ಅವರು…
-

ಹೆಣ್ಣುಮಕ್ಕಳಿಂದಲೇ ತಂದೆಯ ಅಂತ್ಯಸಂಸ್ಕಾರ – ಲಿಂಗ ಸಮಾನತೆಗೆ ಮಾದರಿ
ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನ ಬೀರೂರಿನಲ್ಲಿ ಹೆಣ್ಣುಮಕ್ಕಳು ತಂದೆಯ ಅಂತ್ಯಸಂಸ್ಕಾರ ನೆರವೇರಿಸುವ ಮೂಲಕ ಲಿಂಗ ಸಮಾನತೆಯ ಸಂದೇಶ ಸಾರಿದ ಘಟನೆ ನಡೆದಿದೆ. ಭಾವಸಾರ ಕ್ಷತ್ರಿಯಸಮಾಜದ ಬಿ.ಎಸ್. ವಿಶ್ವನಾಥ ಅವರು ನಿಧನರಾದ ಹಿನ್ನೆಲೆಯಲ್ಲಿ, ಅವರಿಗೆ ಗಂಡು ಮಕ್ಕಳು ಇಲ್ಲದ ಕಾರಣ ಮಗಳು ಐಶ್ವರ್ಯ ತಂದೆಯ ಅಂತ್ಯಸಂಸ್ಕಾರ ನೆರವೇರಿಸಲು ಮುಂದಾದರು. ತಂಗಿ ಹಾಗೂ ಭಾವನ ಜೊತೆ ಸೇರಿ ಅವರು ಅಂತಿಮ ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿದರು. ಮೃತದೇಹದ ಸುತ್ತ ಹೆಗಲ ಮೇಲೆ ಕುಡಿಕೆ ಹೊತ್ತು ಸಂಪ್ರದಾಯದಂತೆ ವಿಧಿ…
-

ಕಡೂರು ರಾಗಿ ಖರೀದಿ ಕೇಂದ್ರದಲ್ಲಿ ಅನ್ನದಾತರ ಆಕ್ರೋಶ
ಹಣ ಕೊಟ್ಟವರಿಗೆ ಮೊದಲು ಅವಕಾಶ – ರೈತರ ಆರೋಪ ಚಿಕ್ಕಮಗಳೂರು ಜಿಲ್ಲೆ ಕಡೂರು ಪಟ್ಟಣದ ರಾಗಿ ಖರೀದಿ ಕೇಂದ್ರದ ಬಳಿ ರೈತರು ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ. ಖರೀದಿ ಕೇಂದ್ರದ ಸಿಬ್ಬಂದಿ ಹಣ ಪಡೆದು ಕೆಲವರಿಗೆ ಮೊದಲು ಅವಕಾಶ ನೀಡುತ್ತಿದ್ದಾರೆ ಎಂದು ರೈತರು ಆರೋಪಿಸಿದ್ದಾರೆ. ಗ್ರಾಮೀಣ ಪ್ರದೇಶಗಳಿಂದ ಬಂದ ರೈತರು ವಾರಗಟ್ಟಲೆ ಸರತಿ ಸಾಲಿನಲ್ಲಿ ನಿಂತಿದ್ದರೂ ತಮ್ಮ ಸರದಿ ಬರದೇ ಪರದಾಡುತ್ತಿರುವ ಸ್ಥಿತಿ ನಿರ್ಮಾಣವಾಗಿದೆ. ಆದರೆ ಮಧ್ಯೆ ಬಂದ ಕೆಲವರಿಗೆ ಹಣದ ಆಧಾರದ ಮೇಲೆ ಅವಕಾಶ ನೀಡಲಾಗುತ್ತಿದೆ…
You May Have Missed














