🏠 Home ದೇಶ ಜಿಲ್ಲಾ ಸುದ್ದಿ ತಾಲ್ಲೂಕು ರಾಜ್ಯ ರಾಜಕೀಯ  ಆರೋಗ್ಯ  ಕ್ರೈಮ್  ಪ್ರವಾಸ ಶಿಕ್ಷಣ

 

Breaking News
---Advertisement---
 

ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ದಲಿತರ ಮೇಲೆ ದೌರ್ಜನ್ಯಗಳು ನಡೆಯುತ್ತಿವೆ ಜಿಲ್ಲೆಯಲ್ಲಿ ದಲಿತರಿಗೆ ರಕ್ಷಣೆ ಇಲ್ಲದಂತಾಗಿದೆ ವೆಂಕಟೇಶ್

---Advertisement---

ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದಾಗಿನಿಂದ ದಲಿತ ಸಮುದಾಯದ ಮೇಲೆ ನಿರಂತರವಾಗಿ ದೌರ್ಜನ್ಯಗಳು ನಡೆಯುತ್ತಿವೆ ಎಂದು ಜಿಲ್ಲಾ ಬಿಜೆಪಿ ಎಸ್ಸಿ ಮೋರ್ಚಾ ಅಧ್ಯಕ್ಷ ಕೆ.ಪಿ. ವೆಂಕಟೇಶ್ ತೀವ್ರವಾಗಿ ಕಿಡಿಕಾರಿದ್ದಾರೆ. ನಗರದ ಅಂಬೇಡ್ಕರ್ ರಸ್ತೆಯಲ್ಲಿ ದಲಿತ ಯುವಕನ ಮೇಲೆ ಕಾಂಗ್ರೆಸ್ ಮುಖಂಡ ರಾಕೀಬ್ ಷರೀಫ್ ಎಂಬಾತನಿಂದ ಹಲ್ಲೆ ನಡೆದಿರುವುದು ಆಘಾತಕಾರಿ ಸಂಗತಿಯಾಗಿದ್ದು, ಜಿಲ್ಲೆಯಲ್ಲಿ ದಲಿತರಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ಅವರು ದೂರಿದ್ದಾರೆ. ಜಿಲ್ಲಾ ಪಂಚಾಯತ್ ಮಾಜಿ ಅಭ್ಯರ್ಥಿಯ ಪತಿ ಬಿಸಿಲೆ ಹಳ್ಳಿಯ ದಲಿತ ಯುವಕನ ಮೇಲೆಯೂ ಹಲ್ಲೆ ನಡೆಸಿ ಜಾತಿ ನಿಂದನೆ ಮಾಡಲಾಗಿದ್ದು, ಕಾಂಗ್ರೆಸ್ ಶಾಸಕರು ಮತ್ತು ಸರ್ಕಾರದ ಬೆಂಬಲದಿಂದಲೇ ಇಂತಹ ಕೃತ್ಯಗಳು ನಡೆಯುತ್ತಿವೆ ಎಂದು ಅವರು ಆರೋಪಿಸಿದ್ದಾರೆ.
​ಕಳೆದ ಫೆಬ್ರವರಿ ತಿಂಗಳೊಂದರಲ್ಲೇ ಜಿಲ್ಲೆಯಲ್ಲಿ ದಲಿತರ ಮೇಲೆ ಐದಕ್ಕೂ ಹೆಚ್ಚು ದೌರ್ಜನ್ಯದ ಘಟನೆಗಳು ವರದಿಯಾಗಿವೆ. ಇಷ್ಟೆಲ್ಲಾ ನಡೆಯುತ್ತಿದ್ದರೂ ಸ್ಥಳೀಯ ಕಾಂಗ್ರೆಸ್ ಶಾಸಕರು ಮೌನ ವಹಿಸಿರುವುದು ದೌರ್ಜನ್ಯಕೋರರಿಗೆ ಪರೋಕ್ಷವಾಗಿ ಬೆಂಬಲ ನೀಡಿದಂತಿದೆ ಎಂದು ವೆಂಕಟೇಶ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ದಲಿತರ ಹಿತರಕ್ಷಣೆ ಮಾಡಬೇಕಾದ ಸರ್ಕಾರವು ಇಂತಹ ಘಟನೆಗಳನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಈ ಕೂಡಲೇ ಪೊಲೀಸರು ಹಲ್ಲೆಕೋರರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು, ಇಲ್ಲದಿದ್ದರೆ ಬಿಜೆಪಿ ವತಿಯಿಂದ ಜಿಲ್ಲಾದ್ಯಂತ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

Join WhatsApp

Join Now

Join Telegram

Join Now

Leave a Comment