September 19, 2024

MALNAD TV

HEART OF COFFEE CITY

ಮಹಿಳೆ ಆರ್ಥಿಕವಾಗಿ ಸ್ವಾಲಂಭಿಯಾದರೇ ಕುಟುಂಬ ಸ್ವಾವಲಂಭಿಯಾಗುತ್ತದೆ – ಸೋಮಶೇಖರ ಶಿವಾ ಚಾರ್ಯ ಮಹಾಸ್ವಾಮೀಜಿ

1 min read

ಚಿಕ್ಕಮಗಳೂರು – ಮಹಿಳೆ ಆರ್ಥಿಕವಾಗಿ ಸ್ವಾಲಂಭಿಯಾದರೇ, ಕುಟುಂಬ ಸ್ವಾವಲಂಭಿಯಾಗುತ್ತದೆ. ಈ ನಿಟ್ಟಿನಲ್ಲಿ ಶ್ರೀ ಪುಷ್ಟಗಿರಿ ಗ್ರಾಮೀಣಾಭಿವೃದ್ದಿ ಸ್ವ-ಸಹಾಯ ಸಂಘಗಳನ್ನು ರಚಿಸಲಾಗಿದೆ ಎಂದು ಹಳೇಬೀಡು ಪುಷ್ಪಗಿರಿ ಮಹಾಸಂಸ್ಥಾನ ಮಠದ ಶ್ರೀ ಸೋಮಶೇಖರ ಶಿವಾ ಚಾರ್ಯ ಮಹಾಸ್ವಾಮೀಜಿ ಹೇಳಿದರು.
ನಗರದ ಕುವೆಂಪು ಕಲಾಮಂದಿರದಲ್ಲಿ ಶ್ರೀ ಗುರು ಸಿದ್ಧರಾಮೇಶ್ವರ ವಿದ್ಯಾಸಂಸ್ಥೆ ಆಯೋಜಿಸಿದ್ದ ಶ್ರೀ ಪುಷ್ಪಗಿರಿ ಗ್ರಾಮೀಣಾಭಿವೃದ್ದಿ ಸ್ವ-ಸಹಾಯ ಸಂಘಗಳ ಸಮಾವೇಶ ಹಾಗೂ ಸಹಾಯಧನ ವಿತರಣೆ ಮತ್ತು ನೂತನ ಶಾಸಕ ಎಚ್.ಡಿ.ತಮ್ಮಯ್ಯ ಅವರಿಗೆ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಆಶೀರ್ವಚನ ನೀಡಿದರು.
ಪುಷ್ಪಗಿರಿ ಗ್ರಾಮೀಣಾಭಿವೃದ್ದಿ ಸಂಘಗಳಲ್ಲಿ ಯಾವುದೇ, ಜಾತಿ, ಧರ್ಮವನ್ನು ನೋಡದೆ ಎಲ್ಲಾ ಮಹಿಳೆಯರಿಗೂ ಅವಕಾಶವನ್ನು ನೀಡಲಾಗಿದೆ. ಸಂಘದಿAದ ದೊರೆಯುವ ಸಹಾಯಧನವನ್ನು ಒಳ್ಳೆಯ ಕಾರ್ಯಗಳಿಗೆ ವಿನಿಯೋಗಿಸುವಂತೆ ಕಿವಿ ಮಾತು ಹೇಳಿದರು.
ರಾಜ್ಯದಲ್ಲಿ ಇದುವರೆಗೂ 1800ಕ್ಕೂ ಹೆಚ್ಚು ಪುಷ್ಪಗಿರಿ ಸ್ವ-ಸಹಾಯ ಸಂಘ ಗಳನ್ನು ತೆರೆಯಲಾಗಿದೆ. ಅದರಂತೆ ಚಿಕ್ಕಮಗಳೂರು ಜಿಲ್ಲೆಯಲ್ಲೂ ಸಂಘಗಳನ್ನು ತೆರೆಯಲಾಗಿದ್ದು, ಸಂಘಗಳ ಉನ್ನತಿಗೆ ಶ್ರಮಿಸುವಂತೆ ತಿಳಿಸಿದರು.
ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಸಾಧನೆ ಮಾಡಬೇಕೆಂಬ ಗುರಿಯನ್ನು ಹೊಂದಬೇಕು. ಆ ನಿಟ್ಟಿನಲ್ಲಿ ತಾಳ್ಮೆ, ಸಹಬಾಳ್ವೆ, ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳುವ ಮೂಲಕ ಗುರಿ ಸಾಧಿಸಬೇಕು. ಉತ್ತಮ ಪ್ರಜೆಗಳಾಗಿ ಹೊರ ಹೊಮ್ಮಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಶಾಸಕ ಎಚ್.ಡಿ.ತಮ್ಮಯ್ಯ, ಜಿಲ್ಲೆಯಲ್ಲಿ ಕಳೆದ 40 ವರ್ಷಗಳ ಹಿಂದೆ ಸಿದ್ಧರಾಮೇಶ್ವರ ಜಯಂತ್ಯೋತ್ಸವ ನಡೆಸಲಾಗಿತ್ತು. ಎಲ್ಲರ ಸಹಕಾರ ಪಡೆದು 2024ರಲ್ಲಿ ಚಿಕ್ಕಮಗಳೂರು ನಗರದಲ್ಲಿ ಸಿದ್ಧರಾಮೇಶ್ವರ ಜಯಂತ್ಯೋತ್ಸವ ನಡೆಸಲಾಗುವುದು ಎಂದ ಅವರು, ಸಮುದಾಯ ಭವನ ನಿರ್ಮಾಣಕ್ಕೆ ಮುಂದಾಗುವುದಾಗಿ ಭರವಸೆ ನೀಡಿದರು.
ಮಹಿಳೆಯರನ್ನು ಸ್ವಾವಲಂಭಿಗಳಾಗಿಸುವ ನಿಟ್ಟಿನಲ್ಲಿ ಪುಷ್ಟಗಿರಿ ಶ್ರೀಮಠ ಸ್ವ-ಸ್ವಹಾಯ ಸಂಘಗಳನ್ನು ತೆರೆದಿದ್ದು, ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದ ಅವರು, ಎಲ್ಲಾ ಸಮುದಾಯದವರು ತಮ್ಮನ್ನು ಶಾಸಕರನ್ನಾಗಿ ಆಯ್ಕೆ ಮಾಡಿದ್ದು, ಕ್ಷೇತ್ರದಲ್ಲಿ ಎಲ್ಲರ ವಿಶ್ವಾಸವನ್ನು ಪಡೆದು ಜನ ಸೇವಕನಾಗಿ ಕಾರ್ಯನಿರ್ವಹಿಸುತ್ತೇನೆ. ಮುಂದಿನ ನಾಲ್ಕು ವರ್ಷಗಳಲ್ಲಿ ತಮ್ಮ ಸಮುದಾಯಕ್ಕೆ ಏನು ಕೊಡುಗೆ ನೀಡಿದ್ದೇನೆಂಬ ರಿಪೋರ್ಟ್ಕಾರ್ಡ್ ಹಿಡಿದು ತಮ್ಮ ಮುಂದೆ ಬರುತ್ತೇನೆ ಎಂದು ಹೇಳಿದರು.
ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಬೋಜೇಗೌಡ ಮಾತನಾಡಿ, ಸರ್ಕಾರಗಳು ಮಾಡಲಾಗದ ಕೆಲಸ ಕಾರ್ಯಗಳನ್ನು ಮಠ ಮಂದಿರಗಳು ಮಾಡುತ್ತಿವೆ. ಸಮಾಜದ ಉನ್ನತಿಗೆ ಶ್ರಮಿಸುತ್ತಿದ್ದು, ಮಠಮಾನ್ಯಗಳ ಪಾವಿತ್ರö್ಯತೆಯನ್ನು ಕಾಪಾಡುವ ಕೆಲಸ ನಮ್ಮ ಕೈಯಲ್ಲಿದೆ ಎಂದು ಅಭಿಪ್ರಾಯಿಸಿದರು.
ಪ್ರತಿಯೊಬ್ಬ ಮಹಿಳೆಯರು ತಮ್ಮ ಮಕ್ಕಳಿಗೆ ಶಿಕ್ಷಣದ ಜೊತೆಗೆ ಸಂಸ್ಕಾರವನ್ನು ಕಲಿಸುವ ಕೆಲಸವನ್ನು ಮಾಡಬೇಕು. ಆಗ ಸ್ವಸ್ಥ ಸಮಾಜ ನಿರ್ಮಾಣ ಮಾಡಲು ಸಾಧ್ಯವಾಗುತ್ತದೆ ಎಂದ ಅವರು, ಸ್ವ-ಸಹಾಯ ಸಂಘಗಳಲ್ಲಿ ಶ್ರದ್ಧೆ, ನಿಷ್ಟೆ, ಪ್ರಾಮಾಣಿಕತೆಯಿಂದ ಕಾರ್ಯ ನಿರ್ವಹಿಸಿದಾಗ ಸ್ವ-ಸಹಾಯ ಸಂಘಗಳು ಉನ್ನತ ಮಟ್ಟಕ್ಕೆ ಬೆಳೆಯಲು ಸಾಧ್ಯವಾಗುತ್ತದೆಂದು ಕಿವಿಮಾತು ಹೇಳಿದರು.

ನಿವೃತ್ತ ಆರ್‌ಟಿಓ ಅಧಿಕಾರಿ ಶಿವರಾಮೇಗೌಡ, ಶ್ರೀಮಠದ ಆಡಳಿತಾಧಿ ಕಾರಿಕಿಟ್ಟಪ್ಪ ಮಾತನಾಡಿದರು. ಶ್ರೀಗುರು ಸಿದ್ಧರಾಮೇಶ್ವರ ವಿದ್ಯಾಸಂಸ್ಥೆ ಕಾರ್ಯದರ್ಶಿ ಹಾಗೂ ವಕೀಲ ಬಿ.ಆರ್.ಜಗದೀಶ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ನೂತನ ಶಾಸಕ ಎಚ್.ಡಿ.ತಮ್ಮಯ್ಯರವರನ್ನು ಸನ್ಮಾನಿಸಲಾಯಿತು. ಸ್ವ-ಸಹಾಯ ಸಂಘಗಳಿಗೆ ಸಹಾಯಧನ ಚೆಕ್ ವಿತರಿಸಲಾಯಿತು. ಹಾಗೂ ಸಮಾಜ ಸೇವೆಯಲ್ಲಿ ನಿರತರಾಗಿರುವ 10 ಮಂದಿಯನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮಕ್ಕೂ ಮುನ್ನ ಶ್ರೀ ಸೋಮಶೇಖರ ಶಿವಾಚಾರ್ಯ ಮಹಾ ಸ್ವಾಮೀಜಿ ಅವರನ್ನು ಪೂರ್ಣಕುಂಬ ಸ್ವಾಗತದೊಂದಿಗೆ ಬರಮಾಡಿ ಕೊಳ್ಳಲಾಯಿತು. ಗುತ್ತಿಗೆದಾರ ನವೀನ್‌ಕುಮಾರ್ ಮತ್ತು ಜಿ.ಪಂ. ಮಾಜಿ ಅಧ್ಯಕ್ಷ ವಿಜಯಕುಮಾರ್ ಮಠಕ್ಕೆ ದೇಣಿಗೆ ಚೆಕ್ ನೀಡಿದರು. ಪುಷ್ಪಗಿರಿ ಕಲಾತಂಡದ ಚಂದನ್ ಮತ್ತು ರೂಪ ಅವರು ವಚನ ಗಾಯನ ಪ್ರಸ್ತುಸ್ಥಿ ಪಡಿಸಿದರು.
ಕಾರ್ಯಕ್ರಮದಲ್ಲಿ ಎಂ.ಸಿ.ಶಿವಾನAದ ಸ್ವಾಮಿ, ರವೀಶ್ ಬಸಪ್ಪ, ಪಾಲಿಟೆಕ್ನಿಕ್ ಕಾಲೇಜು ಪ್ರಾಂಶುಪಾಲ ಓಂಕಾರಸ್ವಾಮಿ, ನಿವೃತ್ತ ಪೊಲೀಸ್‌ಅಧಿಕಾರಿ ಬಾಲಚಂದ್ರ, ನಿಕಟಪೂರ್ವಅಧ್ಯಕ್ಷ ಚಂದ್ರಶೇಖರ್, ಶಶಿ ಗಂಧರ್ವ, ಚಂದ್ರಪ್ಪ, ಲೋಹಿತ್‌ಕುಮಾರ್, ಚನ್ನಪ್ಪಕತ್ತಿಗೆ ಸೇರಿದಂತೆ ಅನೇಕರು ಇದ್ದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!